ಥಾಣೆ (ಮಹಾರಾಷ್ಟ್ರ): 9.57 ಲಕ್ಷ ಮೌಲ್ಯದ 44.36 ಕೆಜಿ ಗಾಂಜಾವನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕೊಪ್ರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆದರೆ ಆರೋಪಿಗಳನ್ನು ಹಿಡಿಯುವಲ್ಲಿ ವಿಫಲರಾಗಿದ್ದಾರೆ.
ಮಾರ್ಚ್ 3ರ ತಡರಾತ್ರಿ ಥಾಣೆಯಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಆರು ಚೀಲಗಳನ್ನು ತುಂಬಿಕೊಂಡು ಹೋಗುತ್ತಿದ್ದ ಆಟೋವೊಂದನ್ನು ಅಡ್ಡಗಟ್ಟಿದ್ದಾರೆ. ಆಟೋದಲ್ಲಿದ್ದ ಇಬ್ಬರು ವ್ಯಕ್ತಿಗಳ ಬಳಿ ಈ ಬಗ್ಗೆ ವಿಚಾರಿಸಿದಾಗ ಬಟ್ಟೆ ಚೀಲಗಳವು ಎಂದು ಹೇಳಿದ್ದಾರೆ. ಅನುಮಾನಗೊಂಡ ಪೊಲೀಸರು ಚೀಲಗಳನ್ನು ಬಿಚ್ಚಿ ತೋರಿಸಲು ಹೇಳುತ್ತಿದ್ದಂತೆಯೇ ಇಬ್ಬರೂ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ರೇಪ್ ಕೇಸ್ ದಾಖಲಿಸಿ ಆತ್ಮಹತ್ಯೆ ಮಾಡಿಕೊಂಡ ಸಂತ್ರಸ್ತೆ
ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಕೊಪ್ರಿ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.