ETV Bharat / crime

24 ಗಂಟೆಗಳಲ್ಲಿಯೇ ಮನೆ ಕಳ್ಳತನ ಪ್ರಕರಣ ಬೇಧಿಸಿದ ಉಪನಗರ ಠಾಣೆ ಪೊಲೀಸರು - HUBBLLI_ DHARAWAD

ದೇಶಪಾಂಡೆನಗರದ ಅಪಾರ್ಟಮೆಂಟ್​​​ನಲ್ಲಿ ಲಕ್ಷಾಂತರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದ ಕಳ್ಳನನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಧರ್ಮರಾಮ್ ಧರ್ಮೆಂದ್ರ ಗೋವರ್ಧನರಾಮ್ ಚೌಧರಿ ಎಂಬುವವನೇ ಬಂಧಿತ ಆರೋಪಿ.

thieves attest in Hubli
thieves attest in Hubli
author img

By

Published : May 5, 2021, 8:53 PM IST

ಹುಬ್ಬಳ್ಳಿ: ಕೆಲಸ ಮಾಡುವ ಮನೆಯಲ್ಲಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದ ಚಾಲಾಕಿ ಕಳ್ಳನನ್ನು 24 ಗಂಟೆಗಳಲ್ಲಿಯೇ ಹೆಡೆಮುರಿ ಕಟ್ಟುವಲ್ಲಿ ಹು-ಧಾ ಮಹಾನಗರ ಪೊಲೀಸ್ ಕಮೀಷನರೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ.

ದೇಶಪಾಂಡೆನಗರದ ಅಪಾರ್ಟ್​​​ಮೆಂಟ್​​​ನಲ್ಲಿ ಲಕ್ಷಾಂತರ ರೂಪಾಯಿ ದೋಚಿಕೊಂಡು ಪರಾರಿಯಾಗಿದ್ದ ಕಳ್ಳನನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿ ಉಪನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಧರ್ಮರಾಮ್ ಧರ್ಮೆಂದ್ರ ಗೋವರ್ಧನರಾಮ್ ಚೌಧರಿ ಎಂಬುವವನೇ ಬಂಧಿತ ಆರೋಪಿ.
ಇನ್ನೂ ಹುಬ್ಬಳ್ಳಿ ದೇಶಪಾಂಡೆ ನಗರದ ಗುರು ಅಪಾರ್ಟಮೆಂಟ್​​​ನ ಮಹೇಶ ಎಂಬುವವರ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿ, 4,75,000 ಹಣವನ್ನು ದೋಚಿಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳ್ಳನ ಬಂಧನಕ್ಕೆ ಬಲೆ ಬಿಸಿದ್ದ ಪೊಲೀಸರು 24 ಗಂಟೆಯಲ್ಲಿ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯಿಂದ 4 ಲಕ್ಷ 73 ಸಾವಿರ ನಗದು ವಶಕ್ಕೆ ಪಡೆದಿದ್ದು, ಹಣ ಹಾಕಿಕೊಂಡು ಇಟ್ಟಿದ್ದ ಬಿಳಿ ಬಣ್ಣದ ಬ್ಯಾಗ್ ಸಮೇತ ಪತ್ತೆ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.