ಗುಂಟೂರು : ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಕೆರೆಗೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಯರ್ರಬಾಲೆಂ ತಿರುವುನಲ್ಲಿ ನಡೆದಿದೆ.
ನಿನ್ನೆ ರಾತ್ರಿ ಈ ಅಪಘಾತ ನಡೆದಿದೆ. ಸಾಯಿ, ಶ್ರೀನಿವಾಸ್, ನರೇಂದ್ರಕುಮಾರ್ ಹಾಗೂ ತೇಜರಾಮ್ಜಿ ಎಂಬುವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ದುರ್ದೈವಿಗಳು.
ಕಾರು ಕೆರೆಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಕಾರಿನ ಗಾಜುಗಳನ್ನು ಒಡೆದು ಅದರೊಳಗಿದ್ದ ನಾಲ್ವರನ್ನು ಹೊರ ತೆಗೆದಿದ್ದಾರೆ. ಆದರೆ, ಆ ವೇಳೆಗಾಗಲೇ ನಾಲ್ವರು ಮೃತಪಟ್ಟಿರುವುದು ಖಚಿತವಾಗಿದೆ.
ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಾಯಿ, ಶ್ರೀನಿವಾಸ್, ನರೇಂದ್ರ ಕುಮಾರ್ ಅವರು ಮಂಗಳಗಿರಿ ಮೂಲದವರಾಗಿದ್ದರೆ, ತೇಜರಾಮ್ಜಿ ಯರ್ರಬಾಲೆಂನವರು ಎಂದು ಪೊಲೀಸರು ಗುರುತಿಸಿದ್ದಾರೆ.
ಇದನ್ನೂ ಓದಿ: ವಾರ್ಡರ್ಗೆ ಹೆದರಿ ಮೊಬೈಲ್ ನುಂಗಿದ ಕೈದಿ ; ಶಸ್ತ್ರಚಿಕಿತ್ಸೆ ಇಲ್ಲದೆ ಹೊರ ತೆಗೆದ ವೈದ್ಯರು