ಕೊಲ್ಲಂ (ಕೇರಳ): ಸರ್ಜಿಕಲ್ ಸ್ಪಿರಿಟ್ ಕುಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯ ಪಥನಪುರಂನಲ್ಲಿ ನಡೆದಿದೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ತಿರುವನಂತಪುರಂ ವೈದ್ಯಕೀಯ ಕಾಲೇಜು- ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಮುರುಕಾನಂದನ್ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದೆ. ಪಥನಪುರಂನ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಮುರುಕಾನಂದನ್ ಮಂಗಳವಾರ ಸರ್ಜಿಕಲ್ ಸ್ಪಿರಿಟ್ ತೆಗೆದುಕೊಂಡು ಅದನ್ನು ನೀರಿನಲ್ಲಿ ಬೆರೆಸಿ ತನ್ನ ಸ್ನೇಹಿತರೊಂದಿಗೆ ಸೇವಿಸಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಇದನ್ನೂ ಓದಿ: ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ
ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಸಾದ್ ಮಾರ್ಗಮಧ್ಯೆ ಸಾವನ್ನಪ್ಪಿದ್ದರೆ, ಮುರುಕಾನಂದನ್ ಚಿಕತ್ಸೆ ವೇಳೆ ಅಸು ನೀಗಿದ್ದಾನೆ. ಘಟನೆ ಸಂಬಂಧ ಹೆಚ್ಚಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
ಸರ್ಜಿಕಲ್ ಸ್ಪಿರಿಟ್, ಇದನ್ನು ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಯ ಮೊದಲು ಚರ್ಮ ಅಥವಾ ವೈದ್ಯಕೀಯ ಉಪಕರಣಗಳನ್ನು ಸ್ವಚ್ಛಗೊಳಿಸಲು ಮತ್ತು ಸೋಂಕುನಿವಾರಕವಾಗಿ ಬಳಸಲಾಗುತ್ತದೆ.