ದೌಸಾ (ರಾಜಸ್ಥಾನ): ಪ್ರಯಾಣಿಕರ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 24ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ದೌಸಾದಲ್ಲಿ ತಡರಾತ್ರಿ ನಡೆದಿದೆ.
ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಾಲಕ ಸರಿಯಾಗಿ ಬಸ್ ಚಲಾಯಿಸುತ್ತಿರಲಿಲ್ಲ. ಈ ಬಗ್ಗೆ ಎಷ್ಟೇ ಹೇಳಿದರೂ ಆತ ನಮ್ಮ ಮಾತನ್ನು ಕಡೆಗಣಿಸಿದ ಎಂದು ಗಾಯಗೊಂಡಿರುವ ಪ್ರಯಾಣಿಕರು ಆರೋಪಿಸಿದ್ದಾರೆ.
ಇದನ್ನೂ ಓದಿ: ಸಿಧಿಯಲ್ಲಿ ಬಸ್ ದುರಂತ: ಮೃತರ ಸಂಖ್ಯೆ 49ಕ್ಕೆ ಏರಿಕೆ
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಂಗಳವಾರ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ 54 ಮಂದಿ ಪ್ರಯಾಣಿಕರಿದ್ದ ಬಸ್ ಕಾಲುವೆಗೆ ಉರುಳಿ ಬಿದ್ದು, 49 ಮಂದಿ ಸಾವನ್ನಪ್ಪಿದ್ದರು.