ETV Bharat / crime

12 ಗಂಟೆಗಳ ಅಂತರದಲ್ಲಿ ಇಬ್ಬರು ರಾಜಕಾರಣಿಗಳ ಹತ್ಯೆ; ಕೇರಳದ ಆಲಪ್ಪುಳದಲ್ಲಿ ಸೆಕ್ಷನ್‌ 144 ಜಾರಿ - ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಹತ್ಯೆ

Alappuzha politicians killing: ಕೇರಳದ ಆಲಪ್ಪುಳದಲ್ಲಿ ಇಬ್ಬರು ರಾಜಕಾರಣಿಗಳ ಹತ್ಯೆ ಭಾರಿ ಆತಂಕ ಮೂಡಿಸಿದೆ. ಮೊದಲು ಎಸ್‌ಡಿಪಿಐ ಮುಖಂಡನನ್ನು ದುಷ್ಕರ್ಮಿಗಳ ಗುಂಪು ಹತ್ಯೆ ಮಾಡಿದ್ದಾರೆ. ಘಟನೆಯ ಹಿಂದೆ ಆರ್‌ಎಸ್‌ಎಸ್‌ ಕೈವಾಡವಿದೆ ಎಂದು ಎಸ್‌ಡಿಪಿಐ ಆರೋಪಿಸಿದೆ. ಇದಾದ ಕೆಲವೇ ಗಂಟೆಗಳಲ್ಲಿ ಅಪರಿಚಿತರ ಗ್ಯಾಂಗ್‌ ಮನೆಗೆ ನುಗ್ಗಿ ಬಿಜೆಪಿ ಮುಖಂಡನನ್ನು ಹತ್ಯೆ ಮಾಡಿದ್ದಾರೆ.

Two political murders rock Alappuzha in Kerala: Prohibitory orders imposed
12 ಗಂಟೆಗಳ ಅಂತರದಲ್ಲಿ ಇಬ್ಬರು ರಾಜಕಾಣಿಗಳ ಹತ್ಯೆ; ಕೇರಳದ ಆಲಪ್ಪುಳದಲ್ಲಿ ಸೆಕ್ಷನ್‌ 144 ಜಾರಿ
author img

By

Published : Dec 19, 2021, 12:48 PM IST

ಆಲಪ್ಪುಳ(ಕೇರಳದ ): ಕರಾವಳಿ ಜಿಲ್ಲೆ ಆಲಪ್ಪುಳದಲ್ಲಿ ಇಬ್ಬರು ರಾಜಕಾರಣಿಗಳ ಸರಣಿ ಹತ್ಯೆಗಳು ಭಾರಿ ಸಂಚಲನ ಮೂಡಿಸಿವೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜ್ಯ ಕಾರ್ಯದರ್ಶಿ ಕೆ.ಎಸ್.ಶಾನ್ ಅವರನ್ನು ಶನಿವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪಕ್ಷದ ಕಚೇರಿಯಿಂದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

ಬೈಕ್‌ನಲ್ಲಿ ಹೋಗುತ್ತಿದ್ದ ಶಾನ್‌ಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮೊದಲು ಡಿಕ್ಕಿ ಹೊಡೆದಿದ್ದಾರೆ. ಆತ ನೆಲಕ್ಕೆ ಬಿದ್ದ ಕೂಡಲೇ ತೀವ್ರವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಗಾಯಾಳು ಶಾನ್ ಅವರನ್ನು ಕೊಚ್ಚಿಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕೈವಾಡವಿದೆ ಎಂದು ಎಸ್‌ಡಿಪಿಐ ಆರೋಪಿಸಿದೆ.

ಬಿಜೆಪಿ ಮುಖಂಡನ ಹತ್ಯೆ

ಮತ್ತೊಂದೆಡೆ ಬಿಜೆಪಿ ಮುಖಂಡ, ಪಕ್ಷದ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸ್ ಅವರನ್ನು ಹತ್ಯೆ ಮಾಡಿರುವುದು ಕೂಡ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಬೆಳಗ್ಗೆ ಕೆಲ ಅಪರಿಚಿತರ ಗುಂಪು ಶ್ರೀನಿವಾಸ್‌ ಅವರ ಮನೆಗೆ ನುಗ್ಗಿ ಹತ್ಯೆ ಮಾಡಿದ್ದಾರೆ. ಶಾನ್ ಸಾವಿಗೆ ಪ್ರತೀಕಾರವಾಗಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇಬ್ಬರು ರಾಜಕಾಣಿಗಳ ಹತ್ಯೆ ಹಿನ್ನೆಲೆಯಲ್ಲಿ ಆಲಪ್ಪುಳದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಹತ್ಯೆಯ ಘಟನೆಗಳನ್ನು ಸಿಎಂ ಪಿಣರಾಯಿ ವಿಜಯನ್ ಖಂಡಿಸಿದ್ದಾರೆ.

ಇದನ್ನೂ ಓದಿ: ಅಮೃತಸರದ ಸ್ವರ್ಣ ಮಂದಿರ ಅಪವಿತ್ರಗೊಳಿಸಲು ಯತ್ನ ಆರೋಪ : ಓರ್ವ ವ್ಯಕ್ತಿಯ ಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.