ಮಂಡ್ಯ: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.
ಮಳವಳ್ಳಿ ತಾಲೂಕಿನ ಸಾಹಳ್ಳಿ ಗ್ರಾಮದ ಚೇತನ (18) ಎಂಬಾತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮತ್ತೊಂದು ಘಟನೆಯಲ್ಲಿ ಮಳವಳ್ಳಿ ತಾಲೂಕಿನ ಹಾನವಾಡಿ ಗ್ರಾಮದ ರಾಜೇಶ್ (25) ಯುವಕ ಕೆಲಸ ಸಿಗದ ಕಾರಣಕ್ಕೆ ನೇಣಿಗೆ ಕೊರಳೊಡ್ಡಿ ಸಾವನಪ್ಪಿದ್ದಾನೆ.
ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮಳವಳ್ಳಿ ಗ್ರಾಮಾಂತರ ಮತ್ತು ಬೆಳಕವಾಡಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: ದುಡ್ಡಿನಾಸೆಗೆ ಬಾಲಕನ ಅಪಹರಣ, ಮಾರಾಟ: ನಾಲ್ಕು ದಿನದಲ್ಲಿ ಪ್ರಕರಣ ಭೇದಿಸಿದ ಪೊಲೀಸರು