ಸುಲ್ತಾನ್ಪುರ (ಉತ್ತರ ಪ್ರದೇಶ): ಖಾಸಗಿ ಐಷಾರಾಮಿ ಬಸ್ವೊಂದನ್ನು ತಪಾಸಣೆಗಾಗಿ ಪೊಲೀಸರು ನಿಲ್ಲಿಸಿದಾಗ ಸೀಟ್ ಅಡಿಯಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿಯನ್ನು ಕುಳ್ಳಿರಿಸಿರುವುದು ಕಂಡು ಬಂದಿದೆ. ಉತ್ತರ ಪ್ರದೇಶದ ಸುಲ್ತಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಘಟನೆ ಹಿನ್ನಲೆ
ಬಾಲಕಿಯ ಸಹೋದರಿ (ಮಲತಾಯಿಯ ಮಗಳು) ಔಷಧಗಳನ್ನು ಖರೀದಿಸುವ ನೆಪದಲ್ಲಿ ತನ್ನ ಮನೆಗೆ ಆಕೆಯನ್ನು ಕರೆಯಿಸಿಕೊಂಡಿದ್ದಾಳೆ. ಅಲ್ಲಿಂದ ಆಕೆಯನ್ನು ಶಿವ ಪೂಜನ್ ಸಿಂಗ್ ಎಂಬಾತನ ಮನೆಗೆ ಕರೆದೊಯ್ದು ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬಳಿಕ ಆಕೆಯನ್ನು ಬಸ್ ಮೂಲಕ ಕರೆದೊಯ್ಯಲಾಗುತ್ತಿತ್ತು. ಈ ವೇಳೆ, ಪೊಲೀಸರ ಕೈಗೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.
ಇದನ್ನೂ ಓದಿ: ಪತ್ನಿಯನ್ನೇ ವೇಶ್ಯೆಯೆಂದು ಬಿಂಬಿಸಿದ ಆರೋಪ: ಪತಿ ವಿರುದ್ಧ ದಾಖಲಾಯ್ತು FIR
ಸಂತ್ರಸ್ತೆಯ ಸಹೋದರಿ, ಬಸ್ ಚಾಲಕ ಹಾಗೂ ಇನ್ನೊಬ್ಬ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ವೈದ್ಯಕೀಯ ಪರೀಕ್ಷೆಯ ನಂತರ ಬಾಲಕಿಯನ್ನು ಕುಟುಂಬಕ್ಕೆ ಒಪ್ಪಿಸಲಾಗಿದೆ ಎಂದು ಸುಲ್ತಾನಪುರ ಪೊಲೀಸ್ ವರಿಷ್ಠಾಧಿಕಾರಿ ವಿಪಿನ್ ಮಿಶ್ರಾ ತಿಳಿಸಿದ್ದಾರೆ.