ಕೊಲ್ಕತ್ತಾ: ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನಕ್ಕೆ ಪಶ್ಚಿಮ ಬಂಗಾಳದ ಲೈಂಗಿಕ ಕಾರ್ಯಕರ್ತೆಯರು ತಮ್ಮ ಸಮುದಾಯದವರಿಗೆ ನೋಟಾ ಬಟನ್ ಒತ್ತಿರಿ ಎಂದು ಆಗ್ರಹಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸುಮಾರು 65,000 ಲೈಂಗಿಕ ಕಾರ್ಯಕರ್ತೆಯರು ಇದ್ದಾರೆ. ಈ ಕಾರ್ಯಕರ್ತೆಯರು ಒಳಪಡುವ ಕ್ಷೇತ್ರಗಳಲ್ಲಿ ನೋಟಾ ಬಟನ್ ಒತ್ತಿರಿ ಎಂದು ದರ್ಬಾರ್ ಮಹಿಳಾ ಸಮನ್ವಯ ಸಮಿತಿ (ಡಿಎಂಎಸ್ಸಿ) ಒತ್ತಾಯಿಸಿದೆ.
ಲೈಂಗಿಕ ಕಾರ್ಯಕರ್ತೆಯರನ್ನು ಕಾರ್ಮಿಕ ಕಾನೂನಿನಡಿ ತಂದು ಅವರಿಗೂ ಕಾಯ್ದೆ ಸೌಲಭ್ಯ ದೊರೆಯುವಂತೆ ಮಾಡಬೇಕು ಎಂದು ಕಳೆದ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿದ್ದಾರೆ. ಇದುವರೆಗೂ ಯಾವುದೇ ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಆಸಕ್ತಿ ತೋರುತ್ತಿಲ್ಲ. ಹೀಗಾಗಿ, ನೋಟಾ ಬಟನ್ ಒತ್ತುವ ಮೂಲಕ ಪ್ರತಿರೋಧ ವ್ಯಕ್ತಪಡಿಸುತ್ತಿದ್ದೇವೆ ಎಂದು ಕಾರ್ಯಕರ್ತೆಯೊಬ್ಬರು ಹೇಳಿದ್ದಾರೆ.