ಬೆಂಗಳೂರು : ನಗರದಲ್ಲಿ ಯುಗಾದಿ ಹಬ್ಬದ ದಿನದಂದು ಡಾ.ವಿಷ್ಣು ಸೇನಾ ಸಮಿತಿಯ ಸದಸ್ಯರು, ಮತ್ತೊಮ್ಮೆ ಮೋದಿ ಪ್ರಧಾನ ಮಂತ್ರಿಯಾಗಬೇಕೆಂದು ಕೋರಿ ಚುನಾವಣಾ ಪ್ರಚಾರ ಕೈಗೊಂಡರು.
ನೆಲಮಂಗಲ ತಾಲೂಕಿನ ನರಸೀಪುರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಡಾ. ವಿಷ್ಣು ಸೇನಾ ಸಮಿತಿಯ ಪದಾಧಿಕಾರಿಗಳು ಸೇರಿ ಮೋದಿ ಪರ ಪ್ರಚಾರ ನಡೆಸಿದ್ದಾರೆ. ಗ್ರಾಮದ ಮನೆ ಮನೆಗಳಿಗೆ ತೆರಳಿ ಸಾರ್ವಜನಿಕರಲ್ಲಿ ನರೇಂದ್ರ ಮೋದಿಯ ಸಾಧನೆಗಳನ್ನು ತಿಳಿಸುತ್ತಾ ಮತಯಾಚಿಸಿದರು.
ಯುಗಾದಿ ದಿನ ಬೇವು-ಬೆಲ್ಲ ತಿಂದು ಹಬ್ಬದಾಚರಣೆಗೆ ಸೀಮಿತವಾಗಿರದೇ ದೇಶದ ಒಳಿತಿಗಾಗಿ ಬಿಜೆಪಿಯನ್ನು ಅಧಿಕಾರ ತರಬೇಕೆಂದು ಮನವಿ ಮಾಡುತ್ತಿದ್ದೇವೆ. ಹಲವಾರು ಊರಿನ ಯುವಕರ ಜೊತೆ ಸೇರಿ ಹಬ್ಬದ ಭಾಗವಾಗಿ ಪ್ರಚಾರ ಕೈಗೊಂಡಿದ್ದೇವೆ. ನಾವೆಲ್ಲರೂ ಒಗ್ಗಟ್ಟಿನಿಂದ ಪ್ರಚಾರ ನಡೆಸುತ್ತಿದ್ದೇವೆ ಎಂದು ತಿಳಿಸಿದರು.