ETV Bharat / elections

ಕಾಂಗ್ರೆಸ್ ಅಭ್ಯರ್ಥಿಯ ಕೈ ಬಿಡಲಾರೆ - ಎಚ್.ಡಿ ದೇವೇಗೌಡ - kannada news

ಕಾಂಗ್ರೆಸ್ ಅಭ್ಯರ್ಥಿಯನ್ನ ಕೈ ಬಿಡುತ್ತೇನೆ ಎಂಬ ಭಾವನೆ ಇರಬಹುದು, ಆದರೆ ನಾನು ಅಂತಹ ಕೆಲಸ ಮಾಡಲಾರೆ ಎಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ ದೇವೇಗೌಡರು ಸ್ಟಷ್ಟಪಡಿಸಿದರು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
author img

By

Published : Apr 13, 2019, 8:13 PM IST

ತುಮಕೂರು: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಎಚ್. ವಿಜಯಶಂಕರ್ ಅವರನ್ನು ಕೈ ಬಿಡುತ್ತೇನೆ ಎಂಬ ಭಾವನೆ ಇರಬಹುದು. ಆದರೆ, ನಾನು ಅಂತಹ ಕೆಲಸವನ್ನು ಮಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ತಿಳಿಸಿದರು.

ತುಮಕೂರಿನಲ್ಲಿ ನಡೆದ ಕುರುಬ ಸಮುದಾಯದ ಮುಖಂಡರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ, ವಚನ ಭ್ರಷ್ಟನಾಗುವುದಿಲ್ಲ ಎಂದರು.

ಪ್ರಚಾರಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

ದೇವೇಗೌಡರು ರಾಜ್ಯದ ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜ್ಯದ ಪ್ರತಿಯೊಂದು ಸಮುದಾಯಕ್ಕೂ ರಾಜಕೀಯ ಮೀಸಲಾತಿ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿರುವುದಾಗಿ ನಿನ್ನೆ ಮೈಸೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದರು. ತನ್ನ ರಾಜಕೀಯ ಶಿಷ್ಯನ ಮಾತನ್ನು ಈ ವೇಳೆ ನೆನಪಿಸಿಕೊಂಡ ದೇವೇಗೌಡರು, ರಾಜಕೀಯ ಚಾಣಾಕ್ಷತನ ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್, ಮಾಜಿ ಶಾಸಕ ಸುರೇಶ್ ಬಾಬು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.