ಮೈಸೂರು: ಹಳೆ ಮೈಸೂರು ಭಾಗದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲು ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿ ಅವರು ಸಾಂಸ್ಕೃತಿಕ ನಗರಿಗೆ ಮೈಸೂರಿಗೆ ನಾಳೆ ಆಗಮಿಸುತ್ತಿದ್ದಾರೆ.
ಮೈಸೂರಿನ ಕೆ.ಆರ್.ನಗರ ತಾಲ್ಲೂಕಿನ ಮೈದಾನದಲ್ಲಿ ಮೈತ್ರಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅವರು ಕಾಂಗ್ರೆಸ್-ಜೆಡಿಎಸ್ ವಿರುದ್ಧ ವಾಗ್ಬಾಣಗಳನ್ನು ಬಿಟ್ಟಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಅವರು ಹೇಗೆ ಟಕ್ಕರ್ ನೀಡಲಿದ್ದಾರೆ ಎಂಬುವುದು ನೋಡಬೇಕಿದೆ.
ಕೆಅರ್.ನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಹುಲ್ಗಾಂಧಿ ಸಂಜೆ 5.30ಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಮದ್ಯ ನಿಷೇಧ:
ಕೆ.ಆರ್.ನಗರದಲ್ಲಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರು ಏ.13 ರಂದು ಬಹಿರಂಗ ಸಭೆಯಲ್ಲಿ ಭಾಗವಹಿಸಲಿರುವುದರಿಂದ ಕೆ.ಆರ್.ನಗರ ತಾಲ್ಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನಚ್ಚರಿಕಾ ಕ್ರಮವಾಗಿ ಕರ್ನಾಟಕ ಅಬಕಾರಿ ಸನ್ನದುಗಳು 1967ರ ನಿಯಮ 21ರಡಿ ಇಂದು ಬೆಳಿಗ್ಗೆ 6 ರಿಂದ ರಾತ್ರಿ 12ರವರೆಗೆ ಕೆ.ಆರ್.ನಗರ ತಾಲ್ಲೂಕಿನಾದ್ಯಂತ ಬರುವ ಎಲ್ಲಾ ಮಧ್ಯಂಗಡಿಗಳನ್ನು ಮುಚ್ಚುವಂತೆ, ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅಭಿರಾಮ್ ಜಿ. ಶಂಕರ್ ಆದೇಶ ಹೊರಡಿಸಿದ್ದಾರೆ.