ವಿಜಯಪುರ: ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದ್ದ ಮಹಿಳೆವೋರ್ವಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಇಂಡಿ ತಾಲೂಕಿನಲ್ಲಿ ನಡೆದಿದೆ.
ಇಂಡಿ ತಾಲೂಕಿನ ಐರಸಂಗ ಗ್ರಾಮದ ಮತಗಟ್ಟೆ 32ರಲ್ಲಿ ದುರ್ಘಟನೆ ಸಂಭವಿಸಿದ್ದು, ಮಹಾದೇವಿ ಮಹಾದೇವಪ್ಪ ಸಿಂದಖೇಡ್ (55) ಮೃತ ಮಹಿಳೆ.
ಮತದಾನ ಮಾಡಿ ಹೊರ ಬಂದ ಬಳಿಕ ಕುಸಿದುಬಿದ್ದ ಮಹಾದೇವಿ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಹಾದೇವಿ ಇಹಲೋಕ ತ್ಯಜಿಸಿದ್ದಾರೆ.