ETV Bharat / entertainment

ವಿಠಲ್ ಮಲೆಕುಡಿಯ ನಕ್ಸಲ್​​ ನಂಟು ಆರೋಪ ಪ್ರಕರಣ ಆಧಾರಿತ 19.20.21 ಸಿನಿಮಾ ನಾಳೆ ತೆರೆಗೆ

ವಿಠಲ್ ಮಲೆಕುಡಿಯ ನಕ್ಸಲ್​​ ನಂಟು ಆರೋಪ ಪ್ರಕರಣ, ತಂದೆ ಮಗನ ಕಾನೂನು ಹೋರಾಟದ ಕಥೆ ತೆರೆ ಮೇಲೆ ಬರಲು ಕ್ಷಣಗಣನೆ ಆರಂಭವಾಗಿದೆ.

19.20.21 movie
19.20.21 ಸಿನಿಮಾ
author img

By

Published : Mar 2, 2023, 7:31 PM IST

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಬಹು ನಿರೀಕ್ಷಿತ ಹಾಗೂ ನೈಜ ಘಟನೆ ಆಧಾರಿತ ಸಿನಿಮಾ 19.20.21 ನಾಳೆ ತೆರೆ ಕಾಣಲಿದೆ. ಕರಾವಳಿ ಭಾಗದಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾ ಎಂದು ಚಿತ್ರತಂಡ ಹೇಳಿಕೊಂಡು ಬಂದಿದ್ದು, ಕಥೆ ಕೊನೆಗೂ ರಿವೀಲ್ ಆಗಿದೆ.

19.20.21 movie
ನಾಳೆ ತೆರೆಕಾಣಲಿದೆ 19.20.21 ಸಿನಿಮಾ

2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ಪಡೆಯಿಂದ ಬಂಧಿತರಾದ ವಿಠಲ್ ಮಲೆಕುಡಿಯ ಹಾಗೂ ಆತನ ತಂದೆ ಲಿಂಗಣ್ಣ ಮಲೆಕುಡಿಯ ಕಾನೂನು ಹೋರಾಟದ ಕಥೆಯೇ ಈ ಸಿನಿಮಾ. ನಕ್ಸಲರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಂದೆ ಮಗನನ್ನು ಬಂಧಿಸಲಾಗಿತ್ತು. ಆ ಸಮಯದಲ್ಲಿ ’ವಿಠಲ್ ಮಲೆಕುಡಿಯ‘ ಮಂಗಳೂರಿನ ವಿವಿಯಲ್ಲಿ ಪತ್ರಿಕೋದ್ಯಮ ವಿದ್ಯಾಭ್ಯಾಸ ಮಾಡುತ್ತಿದ್ದರು. ವಿಠಲ್ ಪರೀಕ್ಷೆ ಬರೆಯುವಾಗ ಪೊಲೀಸರು ಕೈಯಲ್ಲಿದ್ದ ಕೋಳ ಕೂಡ ತೆಗೆದಿರಲಿಲ್ಲ. ಈ ಘಟನೆ ರಾಜ್ಯಾದ್ಯಂತ ವ್ಯಾಪಕ ವಿರೋಧಕ್ಕೆ ಕಾರಣವಾಗಿತ್ತು. ತಮ್ಮ ಮೇಲಿನ ಆರೋಪದ ವಿರುದ್ಧ ಸತತ 9 ವರ್ಷಗಳ ಕಾಲ ಕಾನೂನು ಹೋರಾಟ ನಡೆಸಿದ್ದ ವಿಠಲ್ ಅವರಿಗೆ 2021ರಲ್ಲಿ ಕೋರ್ಟ್ ನಿರ್ದೋಷಿ ಎಂದು ತೀರ್ಪು ನೀಡಿತ್ತು.

ವಿಠಲ್ ಮಲೆಕುಡಿಯ ಅವರ ಈ ಹೋರಾಟದ ಕಥೆಯೇ 19.20.21 ಸಿನಿಮಾ. ಆಡಳಿತ ವ್ಯವಸ್ಥೆಯ ಅವ್ಯವಸ್ಥೆ ಹಾಗೂ ವಿಠಲ್ ಅವರ ಕಾನೂನು ಹೋರಾಟದ ರೋಚಕ ಕಥೆಯನ್ನು ಸೋಷಿಯಲ್ ಥ್ರಿಲ್ಲರ್ ಕಹಾನಿಯೊಂದಿಗೆ ತೆರೆ ಮೇಲೆ ತರುತ್ತಿದ್ದಾರೆ ನಿರ್ದೇಶಕ ಮಂಸೋರೆ. ಚಿತ್ರದಲ್ಲಿ ವಿಠಲ್ ಮಲೆಕುಡಿಯ ಪಾತ್ರದಲ್ಲಿ ರಂಗಭೂಮಿ ಕಲಾವಿದ ಶೃಂಗ ಬಿ.ವಿ ನಟಿಸಿದ್ದಾರೆ. ಉಳಿದಂತೆ ಬಾಲಾಜಿ ಮನೋಹರ್, ಸಂಪತ್, ಎಂ ಡಿ ಪಲ್ಲವಿ, ಮಹದೇವ್ ಹಡಪದ್, ಉಗ್ರಂ ಸಂದೀಪ್ ಒಳಗೊಂಡ ಪ್ರತಿಭಾನ್ವಿತರ ತಾರಾಗಣವೇ ಈ ಚಿತ್ರದಲ್ಲಿದೆ.

ಶಿವು ಬಿ.ಕೆ ಕುಮಾರ್ ಛಾಯಾಗ್ರಹಣ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ ಚಿತ್ರಕ್ಕಿದ್ದು, ಬಿಂದು ಮಾಲಿನಿ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಸುರೇಶ್ ಆರ್ಮುಗಂ ಸಂಕಲನ, ವೀರೇಂದ್ರ ಮಲ್ಲಣ್ಣ ಮತ್ತು ಅವಿನಾಶ್ ಜಿ ಸಂಭಾಷಣೆ, ಮಂಸೋರೆ ಮತ್ತು ವೀರೇಂದ್ರ ಮಲ್ಲಣ್ಣ ಚಿತ್ರಕಥೆ, ಕಿರಣ್ ಕಾವೇರಪ್ಪ ಸಾಹಿತ್ಯ ಚಿತ್ರಕ್ಕಿದೆ. ದೇವರಾಜ್ ಆರ್ ನಿರ್ಮಾಣ ಮಾಡಿರುವ ಈ ಚಿತ್ರಕ್ಕೆ ಸತ್ಯ ಹೆಗ್ಡೆ ಸಹ ನಿರ್ಮಾಣವಿದೆ.

ಇದನ್ನೂ ಓದಿ: ವಿಠಲ ಮಲೆಕುಡಿಯ ನಕ್ಸಲ್ ನಂಟು ಆರೋಪ ಪ್ರಕರಣ: 9 ವರ್ಷದ ಬಳಿಕ ತಂದೆ-ಮಗ ದೋಷಮುಕ್ತ

ಘಟನೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ನಿವಾಸಿಯಾಗಿರುವ ವಿಠಲ ಮಲೆಕುಡಿಯ ಹಾಗೂ ಅವರ ತಂದೆ ಲಿಂಗಣ್ಣ ಅವರಿಗೆ ನಕ್ಸಲ್ ನಂಟು ಇದೆ ಎಂದು 2012ರ ಮಾರ್ಚ್ 3ರಂದು ನಕ್ಸಲ್ ನಿಗ್ರಹ ದಳ ಬಂಧಿಸಿತ್ತು‌. ಬಂಧನದ ವೇಳೆ 36 ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿತ್ತು.‌ ಪ್ರಕರಣ ವಿಚಾರಣೆ ಮುಂದುವರಿದು, ವಿಠಲ ಮಲೆಕುಡಿಯ ಹಾಗೂ ಅವರ ತಂದೆ ಲಿಂಗಣ್ಣ ಮಲೆಕುಡಿಯ ಅವರನ್ನು ನಿರ್ದೋಷಿ ಎಂದು ತೀರ್ಪು‌ ನೀಡಲಾಯಿತು.

ಇದನ್ನೂ ಓದಿ: ರಿಯಲ್ ಸ್ಟಾರ್ ಉಪ್ಪಿ ಅಭಿನಯದ ಬಹುನಿರೀಕ್ಷಿತ ಕಬ್ಜ ಚಿತ್ರದ ಟ್ರೈಲರ್ ಬಿಡುಗಡೆ ಮುಹೂರ್ತ ಫಿಕ್ಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.