ETV Bharat / entertainment

ಭಾರತದ ಟಾಪ್ ನಿರ್ದೇಶಕರ ಸಾಲಿನಲ್ಲಿ ಅರ್ಜುನ್ ಜನ್ಯ ಸೇರಲಿದ್ದಾರೆ: ಶಿವಣ್ಣ - arjun janya

'45' ಚಿತ್ರದ ಮುಹೂರ್ತ ಸಮಾರಂಭ ಮೈಸೂರಿನಲ್ಲಿ ನೆರವೇರಿದ್ದು, ಮೊದಲ ದೃಶ್ಯಕ್ಕೆ ಗೀತಾ ಶಿವ ರಾಜ್​​ಕುಮಾರ್ ಕ್ಲಾಪ್ ಮಾಡಿದ್ದಾರೆ.

45 movie Muhurta
'45' ಚಿತ್ರತಂಡ
author img

By

Published : Apr 28, 2023, 6:15 PM IST

ಹ್ಯಾಟ್ರಿಕ್ ಹೀರೋ ಶಿವ ರಾಜ್​​​ಕುಮಾರ್, ರಿಯಲ್​ ಸ್ಟಾರ್ ಉಪೇಂದ್ರ, ಬೇಡಿಕೆ ನಟ ರಾಜ್ ಬಿ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ '45' ಚಿತ್ರದ ಮುಹೂರ್ತ ಮೈಸೂರಿನಲ್ಲಿ ನೆರವೇರಿತು. ದೇವರ ಬಳಿ ಚಿತ್ರೀಕರಿಸಲಾದ ಮೊದಲ ದೃಶ್ಯಕ್ಕೆ ಗೀತಾ ಶಿವ ರಾಜ್​​ಕುಮಾರ್ ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.

45 movie Muhurta
'45' ಚಿತ್ರತಂಡ

ಮೊದಲು ಮಾತನಾಡಿದ ಹ್ಯಾಟ್ರಿಕ್​ ಹೀರೋ ಶಿವ ರಾಜ್​​​ಕುಮಾರ್, ಇದೊಂದು ಫಿಲಾಸಫಿಕಲ್ ಎಂಟರ್​ಟೈನ್​ಮೆಂಟ್ ಸಿನಿಮಾ ಎಂದು ಬಣ್ಣಿಸಿದರು. ಕಳೆದ ಒಂದು ವರ್ಷದಿಂದ ಈ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ. ಅರ್ಜುನ್ ಜನ್ಯ ಕಥೆ ಹೇಳಿದಾಗ ಬಹಳ ಇಷ್ಟವಾಗಿತ್ತು. ಆ ನಂತರ ಅನಿಮೇಶನ್ ರೂಪದಲ್ಲಿ ಚಿತ್ರವನ್ನು ತೋರಿಸಿದ್ದಾರೆ. ಅವರು ಪ್ರತಿಭಾವಂತ. ಈ ಸಿನಿಮಾದ ನಂತರ ಭಾರತದ ಟಾಪ್ ನಿರ್ದೇಶಕರ ಸಾಲಿನಲ್ಲಿ ಅರ್ಜುನ್ ಜನ್ಯ ಕೂಡ ಒಬ್ಬರಾಗುತ್ತಾರೆ ಎಂಬ ನಂಬಿಕೆ ಇದೆ. ತುಂಬಾ ಪ್ರಬುದ್ಧವಾಗಿರುವ ಪಾತ್ರ ಈ ಚಿತ್ರದಲ್ಲಿದೆ ಎಂದರು.

45 movie Muhurta
'45' ಚಿತ್ರದ ಮುಹೂರ್ತ ಸಮಾರಂಭ

ನಟ ರಾಜ್ ಬಿ ಶೆಟ್ಟಿ ಮಾತನಾಡಿ, ಸಾಮಾನ್ಯವಾಗಿ ನಟರಿಗೆ ನಿರ್ದೇಶಕರು ಚಿತ್ರದ ಕಥೆ ಹೇಳಿದರೆ, ಅರ್ಜುನ್ ಜನ್ಯ ಅವರು ನನಗೆ ಚಿತ್ರವನ್ನೇ ತೋರಿಸಿದರು. ಒಂದು ಚಿತ್ರಕ್ಕೆ ನಾವು ಸಹ ಸಾಕಷ್ಟು ತಯಾರಿ ಮಾಡಿಕೊಳ್ಳುವುದರಿಂದ, ಮೊದಲು ನನ್ನ ತಂಡದ ಬಗ್ಗೆ ನನಗೆ ಹೆಮ್ಮೆ ಇತ್ತು. ಆದರೆ, ಅರ್ಜುನ್ ಜನ್ಯ ಮತ್ತು ಅವರ ತಂಡದ ಕೆಲಸ ನೋಡಿ ಆಶ್ಚರ್ಯವಾಯಿತು. ಅವರು ಈ ಚಿತ್ರಕ್ಕೆ ಮಾಡಿಕೊಂಡ ತಯಾರಿ ಅದ್ಭುತ. ಒಬ್ಬ ನಟನಾಗಿ, ಪ್ರೇಕ್ಷಕನಾಗಿ ಸಿನಿಮಾದ ಬಗ್ಗೆ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆ ಇದೆ ಎಂದು ಹೇಳಿದರು.

ಮೊದಲ ಬಾರಿಗೆ ಹೆಸರಾಂತ ಕಲಾವಿದರು ಮತ್ತು ತಂತ್ರಜ್ಞರ ಜೊತೆ ಈ ಸಿನಿಮಾದಲ್ಲಿ ಅಭಿನಯಿಸುತ್ತಿರುವುದಕ್ಕೆ ಬಹಳ ಖುಷಿಯಾಗುತ್ತಿದೆ. ಬೋಲ್ಡ್ ಆಗಿರುವ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು ಚಿತ್ರದ ನಾಯಕ ನಟಿ ಕೌಸ್ತುಭ ಮಣಿ. ನಂತರ ಮಾತನಾಡಿದ ನಿರ್ಮಾಪಕ ರಮೇಶ್ ರೆಡ್ಡಿ ಅವರಿಗೆ ಅರ್ಜುನ್ ಜನ್ಯ ಹೇಳಿದ ಕಥೆ ಬಹಳ ಇಷ್ಟವಾಯಿತಂತೆ. 'ಚಿತ್ರ ಘೋಷಣೆಯಾಗಿ ಹಲವು ತಿಂಗಳುಗಳಾಗಿದ್ದು, ನಿಧಾನ ಗತಿಯಲ್ಲಿ ಸಾಗುತ್ತಿತ್ತು. ಈ ಬಗ್ಗೆ ಅರ್ಜುನ್ ಜನ್ಯ ಅವರನ್ನು ಕೇಳಿದಾಗ, ಅವರು ಅನಿಮೇಶನ್ ಮೂಲಕ ಸಿನಿಮಾ ತೋರಿಸಿದರು. ಚಿತ್ರೀಕರಣ ಶುರುವಾಗುವುದಕ್ಕಿಂತ ಮೊದಲೇ, ಚಿತ್ರ ತೋರಿಸಿದರು. ನಾವು ಅಂದುಕೊಂಡಿರುವುದಕ್ಕಿಂತ ಸಿನಿಮಾ ಚೆನ್ನಾಗಿ ಬರುತ್ತದೆ ಎಂಬ ನಂಬಿಕೆಯಿದೆ' ಎಂದರು ರಮೇಶ್ ರೆಡ್ಡಿ. 45 ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಂ. ರಮೇಶ್ ರೆಡ್ಡಿ ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: ಪುನಿತ್ - ಯುವ ರಾಜ್​ಕುಮಾರ್​ ನಡುವೆ ಸಾಮ್ಯತೆ ಹುಡುಕುತ್ತಿರುವ ಫ್ಯಾನ್ಸ್​: '5'ರ ಸೀಕ್ರೆಟ್​ ಇಲ್ಲಿದೆ

ಅರ್ಜುನ್ ಜನ್ಯ ಮಾತನಾಡಿ, 'ಸುಮಾರು 9 ತಿಂಗಳ ಕಾಲ ಪ್ರೀ ಪ್ರೊಡಕ್ಷನ್ ಕೆಲಸಗಳನ್ನು ಮಾಡಿ ಈಗ ಚಿತ್ರೀಕರಣಕ್ಕೆ ಹೊರಡುತ್ತಿದ್ದೇವೆ. ಮೊದಲು ಶಿವಣ್ಣ ಅವರಿಗೆ ಕಥೆ ಹೇಳಿದಾಗ, ನೀವೇ ಈ ಸಿನಿಮಾ ಮಾಡಿ ಎಂದು ಹುರಿದುಂಬಿಸಿದರು. ಈ ಚಿತ್ರದ ಮೂಲಕ ಒಂದು ದೊಡ್ಡ ಫಿಲಾಸಫಿಯನ್ನು ಸರಳ ರೀತಿಯಲ್ಲಿ, ಕ್ಲಾಸ್ ಮತ್ತು ಮಾಸ್ ಆಗಿ ಹೇಳುವ ಪ್ರಯತ್ನ ಮಾಡುತ್ತಿದ್ದೇನೆ' ಎಂದರು.

ಇದನ್ನೂ ಓದಿ: ದೈವದೊಂದಿಗೆ ಡಿವೈನ್​ ಸ್ಟಾರ್​: ನೇಮೋತ್ಸವದಲ್ಲಿ ರಿಷಬ್​ ಶೆಟ್ಟಿ ಭಾಗಿ, ವಿಡಿಯೋ ನೋಡಿದ್ರಾ?

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಈ ಚಿತ್ರದ ಮೂಲಕ ಸಿನಿಮಾ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ-ಚಿತ್ರಕಥೆ ಬರೆದು ಸಂಗೀತ ಸಂಯೋಜಿಸಿದ್ದು, ಸತ್ಯ ಹೆಗಡೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಅನಿಲ್ ಕುಮಾರ್ ಸಂಭಾಷಣೆ ಬರೆದಿದ್ದು, ಕೆ. ಎಂ ಪ್ರಕಾಶ್ ಅವರ ಸಂಕಲನ ಈ ಚಿತ್ರಕ್ಕಿದೆ. 80 ದಿನಗಳ ಕಾಲ ಬೆಂಗಳೂರು, ಮೈಸೂರು ಸೇರಿದಂತೆ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಕನ್ನಡವಲ್ಲದೇ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲೂ ಮೂಡಿಬರುತ್ತಿರುವ ಈ ಚಿತ್ರವನ್ನು 2024ರಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.