ETV Bharat / entertainment

ಅಭಿರಾಮಚಂದ್ರ ಟೀಸರ್ ರಿಲೀಸ್ ಮಾಡಿದ ಶಿವರಾಜ್‌ ಕುಮಾರ್ - ಸಿದ್ದು ಮೂಲಿಮನಿ

ಹೊಸ ಪ್ರತಿಭೆಗಳ ಅಭಿರಾಮಚಂದ್ರ ಚಿತ್ರದ ಟೀಸರ್ ಅನ್ನು ಹ್ಯಾಟ್ರಿಕ್​ ಹೀರೋ ಶಿವರಾಜ್​ ಕುಮಾರ್ ರಿಲೀಸ್ ಮಾಡಿದ್ದಾರೆ.

abhiramachandra
ಅಭಿರಾಮಚಂದ್ರ ಚಿತ್ರ ತಂಡದ ಜೊತೆ ನಟ ಶಿವರಾಜ್​ ಕುಮಾರ್​
author img

By

Published : Apr 3, 2023, 1:58 PM IST

ಬೆಂಗಳೂರು: ನಾಗೇಂದ್ರ ಗಾಣಿಗ ನಿರ್ದೇಶಿಸಿರುವ ಅಭಿರಾಮಚಂದ್ರ ಚಿತ್ರದ ಟೀಸರ್ ಅನ್ನು ನಟ ಶಿವರಾಜ್ ಕುಮಾರ್ ರಿಲೀಸ್ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ತುಂಬಾ ಬ್ಯೂಟಿಫುಲ್ ವಿಷ್ಯೂವಲ್ಸ್ ಇತ್ತು. ಮಕ್ಕಳ ಕಥೆ ಇದೆ. ಸ್ಟೋರಿ ಬೇರೆ ಬೇರೆ ತಿರುವು ಕಾಣುತ್ತಿದೆ. ಟೀಸರ್ ನೋಡುವಾಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನೆನಪಾಯ್ತು. ಆ ಸಿನಿಮಾ ರೀತಿ ಹಿಟ್ ಆಗಲಿ. ಟೈಟಲ್ ತುಂಬಾ ಪಾಸಿಟಿವ್ ಆಗಿದೆ. ಸಿನಿಮಾ ಮೇ ನಲ್ಲಿ ರಿಲೀಸ್ ಆಗಲಿದ್ದು, ನಾನೂ ಚಿತ್ರ ನೋಡುತ್ತೇನೆ, ನೀವು ನೋಡಿ. ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ಶಾಲಾ ದಿನಗಳ ಪ್ರೀತಿ, ತುಂಟಾಟ, ಮುಗ್ದ ಸ್ನೇಹವನ್ನು ಅಭಿರಾಮಚಂದ್ರ ಚಿತ್ರದಲ್ಲಿ ಕಟ್ಟಿ ಕೊಡಲಾಗಿದೆ. ಕಿರಿಕ್ ಪಾರ್ಟಿ ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾ. ರಥ ಕಿರಣ ಸಿದ್ದು ಮೂಲಿಮನಿ, ನಾಟ್ಯರಂಗ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಶಿವಾನಿ ರೈ ನಾಯಕಿ ಆಗಿ ಅಭಿನಯಿಸಿದ್ದಾರೆ.

ಕುಂದಾಪುರ, ಬೆಂಗಳೂರು, ಮೈಸೂರು ಭಾಗದಲ್ಲಿ ಶೂಟಿಂಗ್ ನಡೆಸಲಾಗಿದೆ. ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ರವಿ ಬಸ್ರೂರು ಮೂವೀಸ್ ನಡಿ ಸಿನಿಮಾ ಪ್ರಸ್ತುತಪಡಿಸಲಾಗುತ್ತಿದೆ. ವೀಣಾ ಸುಂದರ್, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ತಾರಾಬಳಗದಲ್ಲಿದ್ದಾರೆ.

ಎ.ಜಿ.ಎಸ್ ಎಂಟಟೈನ್ಮೆಂಟ್ ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್ ನಡಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಚಿತ್ರ ನಿರ್ಮಾಣ ಮಾಡಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನವಿದೆ. ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೊನೆ ಹಂತದಲ್ಲಿರುವ ಅಭಿರಾಮಚಂದ್ರ ಸಿನಿಮಾ ಮೇ ತಿಂಗಳಲ್ಲಿ ತೆರೆಗೆ ಬರಲಿದೆ.

ಇದನ್ನೂ ಓದಿ: 'ಡಾಲಿ ನಟ ರಾಕ್ಷಸ, ನವೀನ್​​ ಹೊಸ ರಾಕ್ಷಸ': 'ಗುರುದೇವ್​ ಹೊಯ್ಸಳ'ನಿಗೆ ಸಿನಿ ತಾರೆಗಳ ಮೆಚ್ಚುಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.