ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್, ಪಿಆರ್ಕೆ ಪ್ರೊಡಕ್ಷನ್ಸ್ನಿಂದ ಸದಭಿರುಚಿಯ ಸಿನಿಮಾಗಳ ಜೊತೆಗೆ ಹೊಸ ಟ್ಯಾಲೆಂಟ್ ಇರುವ ನಿರ್ದೇಶಕರು ಹಾಗೂ ನಟ, ನಟಿಯರಿಗೆ ಅವಕಾಶ ನೀಡುತ್ತಿದೆ. ಆದರೆ ಅಪ್ಪು ನಿಧನದ ಬಳಿಕ ಪಿಆರ್ಕೆ ಬ್ಯಾನರ್ನಿಂದ ಹೊಸ ಸಿನಿಮಾ ಅನೌನ್ಸ್ ಮಾಡಿ, ಸೈಲೆಂಟ್ ಆಗಿ ಮುಹೂರ್ತ ಕೂಡ ಮಾಡಲಾಗಿದೆ.
![achar-and-co-movie-shooting-progress](https://etvbharatimages.akamaized.net/etvbharat/prod-images/kn-bng-04-puneeth-prk-producation-aacharco-cinema-shootinig-spotge-ashwin-visit-7204735_26052022180817_2605f_1653568697_354.jpg)
ಇದು ಪುನೀತ್ ರಾಜ್‍ಕುಮಾರ್ ಬ್ಯಾನರ್ 10ನೇ ಸಿನಿಮಾ ಆಗಿದ್ದು, ಈ ಚಿತ್ರಕ್ಕೆ 'ಆಚಾರ್ & ಕೋ' ಎಂದು ವಿಭಿನ್ನ ಟೈಟಲ್ ಇಡಲಾಗಿದೆ. ಇದೇ ಮೊದಲ ಬಾರಿಗೆ ಮಹಿಳಾ ನಿರ್ದೇಶಕಿ, ಸಿಂಧು ಶ್ರೀನಿವಾಸ ಮೂರ್ತಿ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದು 60ರ ದಶಕದ ಬೆಂಗಳೂರಿನಲ್ಲಿ ನಡೆಯುವ ಕಥೆಯಾಗಿದೆ. ಸೈಲೆಂಟ್ ಆಗಿ ಈ ಸಿನಿಮಾಗೆ ಮುಹೂರ್ತ ಮಾಡಿ, ಈಗಾಗಲೇ ಮೈಸೂರಿನಲ್ಲಿ ಬಹುತೇಕ ಚಿತ್ರೀಕರಣ ಮಾಡುವ ಮೂಲಕ, ಆಚಾರ್ & ಕೋ ಚಿತ್ರದ ಪೋಸ್ಟ್ ಪ್ರೊಡಕ್ಷನ್ನಲ್ಲಿ ಬ್ಯುಸಿಯಾಗಿದೆ.
ಹಿರಿಯ ನಟ ಅಶೋಕ್ ಹಾಗೂ ಸುಧಾ ಬೆಳವಾಡಿ ಹೊರತುಪಡಿಸಿ, ಉಳಿದ ಹೊಸ ಪ್ರತಿಭೆಗಳು, ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮೈಸೂರಿನಲ್ಲಿ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‍ಕುಮಾರ್, ಶೂಟಿಂಗ್ ಸ್ಪಾಟ್ಗೆ ಭೇಟಿ ನೀಡಿ ಚಿತ್ರತಂಡದ ಜೊತೆ ಒಂದು ಗಂಟೆಗೂ ಹೆಚ್ಚು ಕಾಲ ಕಳೆದಿದ್ದಾರೆ.
60ನೇ ದಶಕದ ಬೆಂಗಳೂರನ್ನ ಆಚಾರ್ & ಕೋ ಸಿನಿಮಾದಲ್ಲಿ ಚಿತ್ರಿಸಲು ನಿರ್ದೇಶಕಿ ಸಿಂಧು ಶ್ರೀನಿವಾಸ್ ಮೂರ್ತಿ ಪ್ರಯತ್ನ ಮಾಡುತ್ತಿದ್ದಾರೆ. ಬಿಂದು ಮಾಲಿನಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅಭಿಮನ್ಯು ಸದಾನಂದನ್ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.
ಪಿ.ಆರ್.ಕೆ ಬ್ಯಾನರ್ ಅಡಿ ಮಹಿಳಾ ನಿರ್ದೇಶನದ ಮೊದಲ ಚಿತ್ರವಾಗಿದೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಈ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಆಚಾರ್ & ಕೋ ಸಿನಿಮಾದ ಓಟಿಟಿಯಲ್ಲಿ ರಿಲೀಸ್ ಆಗುತ್ತಾ, ಚಿತ್ರಮಂದಿರದಲ್ಲಿ ಬಿಡುಗಡೆ ಆಗುತ್ತಾ ಕಾದುನೋಡಬೇಕು.
ಓದಿ: ಡಿಕೆಶಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿರುವುದಕ್ಕೆ ಹೆದರುವ ಅಗತ್ಯವಿಲ್ಲ : ಡಿ ಕೆ ಸುರೇಶ್