ETV Bharat / entertainment

ನಿಖಿಲ್ ಶೂಟಿಂಗ್ ಸೆಟ್​ಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭೇಟಿ... ಅಭಿಮಾನಿಗಳಲ್ಲಿ ಕುತೂಹಲ - sandalwood news

ನಿಖಿಲ್ ಕುಮಾರಸ್ವಾಮಿ ಶೂಟಿಂಗ್ ಸೆಟ್​ಗೆ ಸರ್​ಪ್ರೈಸ್​ ಎಂಟ್ರಿ ನೀಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ - ಧ್ರುವಾ ಮತ್ತು ನಿಖಿಲ್ ಕೆಲಕಾಲ ಪರಸ್ಪರ ಮಾತುಕತೆ

Dhruva Sarja meets Nikhil Kumar
ನಿಖಿಲ್ ಶೂಟಿಂಗ್ ಸೆಟ್​ಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭೇಟಿ
author img

By ETV Bharat Karnataka Team

Published : Oct 2, 2023, 11:43 AM IST

Updated : Oct 2, 2023, 12:10 PM IST

ನಿಖಿಲ್ ಶೂಟಿಂಗ್ ಸೆಟ್​ಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭೇಟಿ

ನಿಖಿಲ್ ಕುಮಾರಸ್ವಾಮಿ ಸದ್ಯ ಸಖತ್ ಬ್ಯುಸಿ ಆಗಿದ್ದಾರೆ. ಅತ್ತ ರಾಜಕೀಯ ಗಣ್ಯರ ಭೇಟಿ, ದೆಹಲಿ ಪ್ರವಾಸ ಹೀಗೆ ಒಂದಲ್ಲ ಒಂದು ರೀತಿ ರಾಜಕೀಯ ವಿಚಾರದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಒಂದು ಕಡೆ ರಾಜಕೀಯದ ಕೆಲಸ ಇನ್ನೊಂದೆಡೆ ಈಗಾಗಲೇ ಅನೌನ್ಸ್ ಮಾಡಿ ಶೂಟಿಂಗ್ ಶುರು ಮಾಡಿರುವ ಸಿನಿಮಾ ಕಂಪ್ಲೀಟ್ ಮಾಡುವ ತರಾತುರಿಯಲ್ಲಿ ನಿಖಿಲ್​ ಕುಮಾರಸ್ವಾಮಿ ಇದ್ದಾರೆ. ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪರವಾಗಿ ನಿಖಿಲ್ ಪ್ರಚಾರದ ಜೊತೆ ಚುನಾವಣೆಗಾಗಿ ವೇದಿಕೆ ಸಿದ್ಧಪಡಿಸಬೇಕಿದೆ. ಹಾಗಾಗಿ ರಾಜಕೀಯ ಮತ್ತು ಸಿನಿಮಾ ಎರಡನ್ನೂ ಬ್ಯಾಲೆನ್ಸ್ ಮಾಡುವಲ್ಲಿ ಫುಲ್ ಬ್ಯುಸಿ ಆಗಿದ್ದಾರೆ.

ಸದ್ಯ ಲೈಕಾ ಸಂಸ್ಥೆ ನಿರ್ಮಿಸುತ್ತಿರುವ ಹಾಗೂ ಲಕ್ಷ್ಮಣ್ ನಿರ್ದೇಶನ ಮಾಡುತ್ತಿರುವ ಚಿತ್ರದಲ್ಲಿ ನಿಖಿಲ್ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರದ ಸೆಕೆಂಡ್ ಶೆಡ್ಯೂಲ್ ಕೂಡಾ ಆರಂಭವಾಗಿದೆ. ಐದು ತಿಂಗಳಲ್ಲಿ ಈ ಸಿನಿಮಾ ಕಂಪ್ಲೀಟ್ ಮಾಡಬೇಕು ಎನ್ನುವ ಟಾರ್ಗೆಟ್ ಇಟ್ಟುಕೊಂಡಿರುವ ಚಿತ್ರ ತಂಡ, ಬಿರುಸಿನಿಂದ ಶೂಟಿಂಗ್ ಕೆಲಸವನ್ನು ಕೈಗೊಂಡಿದೆ. ಈ ನಡುವೆ ಸಿನಿಮಾ ಚಿತ್ರೀಕರಣ ನಡೆಯುತ್ತಿದ್ದ ಜಾಗಕ್ಕೆ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ ಸರ್ಪ್ರೈಸ್ ಎಂಟ್ರಿ ಕೊಟ್ಟಿದ್ದಾರೆ.

ನಿಖಿಲ್ ಹಾಗೂ ಧ್ರುವಾ ಸರ್ಜಾ ಒಟ್ಟಿಗೆ ಕಾಣಿಸಿಕೊಂಡಿದ್ದು ತೀರ ಕಡಿಮೆಯೇ ಎನ್ನಬಹುದು. ಆದರೆ, ಇದೇ ಮೊದಲ ಬಾರಿಗೆ ಇಬ್ಬರು ಭೇಟಿ ಮಾಡಿದ್ದಾರೆ. ಇದು ಅವರ ಅಭಿಮಾನಿ ಒಲಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ನಿಖಿಲ್​ ಭೇಟಿ ಮಾಡಿದ ಧ್ರುವಾ ಕೆಲ ಸಮಯ ಮಾತುಕತೆ ನಡೆಸಿದರು. ಇದೇ ಸಮಯದಲ್ಲಿ ನಿಖಿಲ್ ಅವರ ಹೊಸ ಸಿನಿಮಾ ಬಗ್ಗೆ ಹಾಗೂ ಧ್ರುವಾ ಅವರ ಮಾರ್ಟಿನ್ ಚಿತ್ರದ ಬಗ್ಗೆ ಪರಸ್ಪರ ಇಬ್ಬರೂ ನಾಯಕ ನಟರು ಚರ್ಚೆ ನಡೆಸಿದರು. ಇದಷ್ಟೇ ಅಲ್ಲದೆ ಇಬ್ಬರೂ ಒಂದಿಷ್ಟು ವೈಯಕ್ತಿಕ ವಿಚಾರಗಳ ಬಗ್ಗೆಯೂ ಮಾತನಾಡುತ್ತಾ ಕೆಲ ಸಮಯ ಕಳೆದಿದ್ದು ವಿಶೇಷವಾಗಿತ್ತು.

Dhruva Sarja meets Nikhil Kumar
ನಿಖಿಲ್ ಶೂಟಿಂಗ್ ಸೆಟ್​ಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭೇಟಿ

ಅಪರೂಪಕ್ಕೆ ಶೂಟಿಂಗ್ ಸೆಟ್​​ಗೆ ಬಂದ ಧ್ರುವಾ ಅವರನ್ನು ಕಂಡು ನಿಖಿಲ್ ಕೂಡ ಅಚ್ಚರಿಗೆ ಒಳಗಾಗಿದ್ದರು. ಅಪರೂಪದ ಗೆಳೆಯನನ್ನ ಪ್ರೀತಿಯಿಂದ ಬರಮಾಡಿಕೊಂಡ ನಿಖಿಲ್​ ಕುಮಾರಸ್ವಾಮಿ ಧ್ರುವಾ ಅವರನ್ನು ಪ್ರೀತಿಯಿಂದಲೇ ಬೀಳ್ಕೊಟ್ಟಿದ್ದಾರೆ. ಒಟ್ಟಾರೆ ಈ ಇಬ್ಬರು ಸ್ಟಾರ್ ನಟರ ಭೇಟಿ ಅಭಿಮಾನಿಗಳಿಗೆ ಖುಷಿ ಕೊಡುವುದರ ಜೊತೆಗೆ ಕುತೂಹಲವನ್ನೂ ಹುಟ್ಟು ಹಾಕಿರುವುದಂತೂ ಸುಳ್ಳಲ್ಲ.

ಇದನ್ನೂ ಓದಿ: 'ಸಲಾರ್​' ಪ್ರಶಾಂತ್​ ನೀಲ್​ ನಿರ್ದೇಶನದ 'ಉಗ್ರಂ' ರಿಮೇಕ್​; ರವಿ ಬಸ್ರೂರು ವಿಡಿಯೋ ವೈರಲ್​

ಎನ್​ಡಿಗೆ ಜೊತೆ ಜೆಡಿಎಸ್ ಮೈತ್ರಿ ವಿಚಾರವಾಗಿ ಇತ್ತೀಚೆಗೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಸಿಎಂ ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ವೇಳೆ ನಿಖಿಲ್ ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು.

ನವದೆಹಲಿಯಿಂದ ಆಗಮಿಸಿದ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ಬಿಜೆಪಿ ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಕಳೆದ ವಾರವಷ್ಟೇ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪರನ್ನು ನಿಖಿಲ್ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದರು. ಆ ಬಳಿಕ ನಿಖಿಲ್ ಅವರು ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅತ್ತ ಸಿನಿಮಾ ಶೂಟಿಂಗ್​ನಲ್ಲೂ ನಿಖಿಲ್ ಬ್ಯುಸಿ ಆಗಿದ್ದಾರೆ.

Last Updated : Oct 2, 2023, 12:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.