ETV Bharat / entertainment

'ಮಾರಕಾಸ್ತ್ರ' ಚಿತ್ರಕ್ಕಾಗಿ ಮತ್ತೆ ಖಾಕಿ ತೊಟ್ಟ ಆ್ಯಕ್ಷನ್ ಕ್ವೀನ್ ಮಾಲಾಶ್ರೀ - ನಟಿ ಮಾಲಾಶ್ರೀ

ನಟಿ ಮಾಲಾಶ್ರೀ ಅವರು ಕೊನೆಯದಾಗಿ ಉಪ್ಪು ಹುಳಿ ಖಾರ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

Marakasthra Movie team
ಮಾರಕಾಸ್ತ್ರ ಚಿತ್ರತಂಡ
author img

By

Published : Jun 15, 2023, 4:04 PM IST

ಕನ್ನಡ ಚಿತ್ರರಂಗದಲ್ಲಿ ಆ್ಯಕ್ಷನ್ ಕ್ವೀನ್ ಎಂದೇ ಖ್ಯಾತರಾಗಿರುವ ನಟಿ ಮಾಲಾಶ್ರೀ ಪ್ರಮುಖ ಪಾತ್ರದಲ್ಲಿ ನಟಿಸಿರುವ "ಮಾರಕಾಸ್ತ್ರ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಮಾಲಾಶ್ರೀ ಅವರೇ ಮಾರಕಾಸ್ತ್ರ ಚಿತ್ರದ ಟೀಸರ್ ಬಿಡುಗಡೆ ಮಾಡಿದರು.

ಟೀಸರ್​ ಬಿಡುಗಡೆ ಮಾಡಿ ಮಾತನಾಡಿದ ನಟಿ ಮಾಲಾಶ್ರೀ, ನನಗೆ ಧನಕುಮಾರ್‌ ಮಾಸ್ಟರ್ ಮೂಲಕ ಈ ತಂಡದ ಪರಿಚಯವಾಯಿತು. ನಿರ್ದೇಶಕ ಗುರುಮೂರ್ತಿ ಸುನಾಮಿ‌ ಅವರು ಹೇಳಿದ ಕಥೆ ಕೂಡ ಇಷ್ಟವಾಯಿತು. ನಾನು ಈ ಚಿತ್ರವನ್ನು ಒಪ್ಪಿಕೊಳ್ಳಲು ನಿರ್ದೇಶಕರೇ ಕಾರಣ. ಏಕೆಂದರೆ ಅವರು ವಿಕಲ ಚೇತನರಾಗಿದ್ದರು ಕೂಡ, ಅವರಲ್ಲಿರುವ ಸಿನಿಮಾ ಪ್ರೀತಿ ಕಂಡು ಸಂತೋಷವಾಯಿತು. ಮೊದಲು 11 ದಿನಗಳ ಕಾಲ ನನ್ನ ಚಿತ್ರೀಕರಣ ಎಂದು ನಿಗದಿಯಾಗಿತ್ತು. ಆನಂತರ ಒಟ್ಟು 60 ದಿನಗಳ ಕಾಲ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದೇನೆ. ನಾಲ್ಕು ಸಾಹಸ ಸನ್ನಿವೇಶಗಳಿವೆ. ನಾನು ಆ್ಯಕ್ಷನ್ ಕ್ವೀನ್ ಎಂದು‌ ಕರೆಸಿಕೊಳ್ಳಲು‌ ಥ್ರಿಲ್ಲರ್ ಮಂಜು ಮಾಸ್ಟರ್ ಪ್ರಮುಖ ಕಾರಣ. ಅವರ ಜೊತೆಗೆ ಈ ಚಿತ್ರದಲ್ಲೂ ಕೆಲಸ ಮಾಡಿರುವುದು ಖುಷಿಯಾಗಿದೆ. "ಮಾರಕಾಸ್ತ್ರ" ಚಿತ್ರದ ಸಾಹಸ ಸನ್ನಿವೇಶಗಳು ನನ್ನ ಹಿಂದಿನ "ಚಾಮುಂಡಿ", " ಶಕ್ತಿ" ಮುಂತಾದ ಚಿತ್ರಗಳ ಸಾಹಸ ಸನ್ನಿವೇಶಗಳನ್ನು ನೆನಪಿಸಿತು. ಇದರಲ್ಲಿ ನನ್ನದು ಪೊಲೀಸ್ ಅಧಿಕಾರಿಯ ಪಾತ್ರ ಎಂದು ಹೇಳಿದರು.

Marakasthra Movie team
ಮಾರಕಾಸ್ತ್ರ ಚಿತ್ರತಂಡ

ಈ ಚಿತ್ರದಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಹರ್ಷಿಕಾ ಪೂಣಚ್ಚ ಕಾಣಿಸಿಕೊಂಡಿದ್ದಾರೆ. ಪುನೀತ್ ರಾಜಕುಮಾರ್​ ‌ಹೋಲುವ ಆನಂದ್ ಕೂಡ ವಿಭಿನ್ನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದರ ಜೊತೆಗೆ ಭರತ್ ಸಿಂಗ್, ಉಗ್ರಂ ಮಂಜು ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಬಳಿಕ ನಿರ್ದೇಶಕ ಗುರುಮೂರ್ತಿ ಸುನಾಮಿ ಮಾತನಾಡಿ, ನಾನು ಮೂಲತಃ ಬಳ್ಳಾರಿಯವನು. ಇದು ನನ್ನ ಮೊದಲ ಚಿತ್ರ. ಪ್ರಥಮ ಚಿತ್ರದಲ್ಲೇ ಮಾಲಾಶ್ರೀ ಅವರಿಗೆ ಆ್ಯಕ್ಷನ್ ಕಟ್ ಹೇಳುತ್ತೇನೆ ಅಂದುಕೊಂಡಿರಲಿಲ್ಲ. "ಮಾರಕಾಸ್ತ್ರ" ಒಂದು ಕೌಟುಂಬಿಕ ಚಿತ್ರ‌. ಇದರಲ್ಲಿ ಆ್ಯಕ್ಷನ್, ಸಸ್ಪೆನ್ಸ್, ಥ್ರಿಲ್ಲರ್ ಎಲ್ಲವೂ ಇದೆ. ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸದಲ್ಲಿದ್ದೇವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದೆ ಎಂದರು.

"ಮಾರಕಾಸ್ತ್ರ" ಚಿತ್ರದ ಕಥೆ ಚೆನ್ನಾಗಿದೆ. ಚಿತ್ರದ ಹಾಡು ಹೇಳುವುದಕ್ಕೆ ಹೋದ ನಾನು ನಿರ್ಮಾಪಕನಾದೆ. ಈ ಚಿತ್ರದಲ್ಲಿ ನಟನೆ ಕೂಡ ಮಾಡಿದ್ದೇನೆ. ನನಗೆ ನನ್ನ ದೇಶದ ಮೇಲೆ ಅಭಿಮಾನ ಹೆಚ್ಚು. ಹಾಗಾಗಿ ಈ ಚಿತ್ರದ ಹಾಡೊಂದರ ಚಿತ್ರೀಕರಣವನ್ನು ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಸುಮಾರು 32 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ಸದ್ಯದಲ್ಲೇ ಹಾಡನ್ನು ಬಿಡುಗಡೆ ಮಾಡುತ್ತೇವೆ ಎಂದರು ನಿರ್ಮಾಪಕ ನಟರಾಜ್.

ಈ ಚಿತ್ರಕ್ಕೆ ಸಹ ನಿರ್ಮಾಪಕಿ ಕೋಮಲ ನಟರಾಜ್, ಕ್ರಿಯೇಟಿವ್ ಹೆಡ್ ಆಗಿ ಧನಕುಮಾರ್, ಕಾರ್ಯಕಾರಿ ನಿರ್ಮಾಪಕರಾಗಿ ಮಂಜುನಾಥ್ ಕೆಲಸ ಮಾಡಿದ್ದು, ‌ಮಂಜುಕವಿ ಈ ಚಿತ್ರಕ್ಕೆ ‌ಸಂಗೀತ ನೀಡಿದ್ದು, ಸತೀಶ್ ಬಾಬು ಹಿನ್ನೆಲೆ ಸಂಗೀತ ನೀಡಿದ್ದಾರೆ. ಈ ಚಿತ್ರಕ್ಕೆ ಅರುಣ್ ಸುರೇಶ್ ಛಾಯಾಗ್ರಹಣವಿದ್ದು, ಸದ್ಯದಲ್ಲೇ ‌ಮಾರಕಾಸ್ತ್ರ ಚಿತ್ರವನ್ನು ಬಿಡುಗಡೆ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸೆಟ್ಟೇರಿತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ : ಟೈಟಲ್ ಏನು ಗೊತ್ತಾ ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.