ETV Bharat / entertainment

ಗ್ಯಾಂಗ್​​ಸ್ಟರ್ ಅವತಾರದಲ್ಲಿ ಡೆಡ್ಲಿ ಸೋಮ ಆದಿತ್ಯ: 'ಟೆರರ್' ಮುಹೂರ್ತ ಸಮಾರಂಭ ಸಂಪನ್ನ - actor aditya movies

ನಟ ಆದಿತ್ಯ ಅವರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ 'ಟೆರರ್' ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ.

terror movie
ಟೆರರ್ ಸಿನಿಮಾ
author img

By

Published : Jan 27, 2023, 1:25 PM IST

ಕನ್ನಡ ಚಿತ್ರರಂಗದಲ್ಲಿ ಡೆಡ್ಲಿ ಸೋಮ ಅಂತಾ ಪ್ರಖ್ಯಾತಿ ಪಡೆದಿರುವ ನಟ‌ ಆದಿತ್ಯ. ಬೆಂಗಳೂರು ಅಂಡರ್ ವರ್ಲ್ಡ್ ಚಿತ್ರದ ಬಳಿಕ ಇವರು ಟೆರರ್ ಎಂಬ ಚಿತ್ರದ ಮೂಲಕ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲು ರೆಡಿ ಆಗಿದ್ದಾರೆ‌. ಮಾಸ್ ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಸೌಂಡ್ ಮಾಡುತ್ತಿರುವ ಟೆರರ್ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಕೆ.ಆರ್.ಜಿ ಸ್ಟುಡಿಯೋಸ್​ನ ಕಾರ್ತಿಕ್ ಗೌಡ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಐಪಿಎಸ್ ಅಧಿಕಾರಿ ರವಿಕಾಂತೇಗೌಡ ಅವರು ಕ್ಯಾಮರಾ ಚಾಲನೆ ಮಾಡಿದರು.

ಯಂಗ್ ಗ್ಯಾಂಗ್‌​ಸ್ಟರ್ ಪಾತ್ರದಲ್ಲಿ ಆದಿತ್ಯ: ಈ‌ ಸಿನಿಮಾ ಬಗ್ಗೆ ಮೊದಲು ಮಾತನಾಡಿದ‌ ನಟ ಆದಿತ್ಯ, "ನಟ ಧರ್ಮ ಅವರ ಮೂಲಕ ರಂಜನ್ ಪರಿಚಯವಾಯಿತು. ಅವರು ಹೇಳಿದ ಕಥೆ ಬಹಳ ಹಿಡಿಸಿತು. ಚಿತ್ರ ಎರಡು ಶೇಡ್​ಗಳಲ್ಲಿರುತ್ತದೆ. ಪಾತ್ರ ಬಹಳ ಸ್ಟೈಲಿಶ್ ಆಗಿರುತ್ತದೆ. ಯಂಗ್ ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ" ಎಂದರು.

actor aditya
ನಟ ಆದಿತ್ಯ

ಟೆರರ್ ಚಿತ್ರತಂಡ: ನಿರ್ದೇಶಕ ರಂಜನ್ ಶಿವರಾಮ ಗೌಡ ಮಾತನಾಡಿ, "ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಮಾಫಿಯಾ ಸುತ್ತ ಕಥೆ ಇದೆ. ಆದಿತ್ಯ ಅವರಿಗೆ ಕಥೆ ಇಷ್ಟವಾಯಿತು. ಗ್ಯಾಂಗ್​ಸ್ಟರ್ ಪಾತ್ರದಲ್ಲಿ ಅದ್ಭುತವಾಗಿ ಕಾಣಿಸಿಕೊಳ್ಳಲಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲೇ ನಡೆಯುತ್ತದೆ. ಸಿಲ್ಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನೀಡಲಿದ್ದಾರೆ. ಕಾರ್ತಿಕ್ ಶರ್ಮಾ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸಂಕಲನ ನಮ್ಮ ಚಿತ್ರಕ್ಕಿದೆ. ಧರ್ಮ, ಪ್ರಮೋದ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ" ಎಂದು ತಿಳಿಸಿದರು.

ಪ್ಯಾನ್​ ಇಂಡಿಯಾ ಸಿನಿಮಾ ಟೆರರ್: ನಿರ್ಮಾಪಕ ಸಿಲ್ಕ್ ಮಂಜು ಮಾತನಾಡಿ, "ನಮ್ಮ "A" ಚಿತ್ರ ತೆರೆ ಕಂಡು ಇಂದಿಗೆ ಸರಿಯಾಗಿ ಇಪ್ಪತ್ತೈದು ವರ್ಷಗಳಾಯಿತು. ಹಾಗಾಗಿ ಇಂದು "ಟೆರರ್" ಚಿತ್ರ ಆರಂಭಿಸಿದ್ದೇವೆ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ" ಎಂದು ಹೇಳಿದರು.

ಇದನ್ನೂ ಓದಿ: ಪ್ಯಾನ್‌ ಇಂಡಿಯಾ ಚಿತ್ರದಲ್ಲಿ ನಟ ಆದಿತ್ಯ..ಟೆರರ್ ಫಸ್ಟ್ ಲುಕ್ ರಿಲೀಸ್​

ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ಲಹರಿ ವೇಲು, ಜೇಡ್ರಳ್ಳಿ ಕೃಷ್ಣಪ್ಪ ಮುಂತಾದವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ನಟ ಆದಿತ್ಯ ಅವರ ಬಹುನಿರೀಕ್ಷಿತ ಚಿತ್ರಕ್ಕೆ ಶುಭ ಹಾರೈಸಿದರು. ಶೀಘ್ರದಲ್ಲೇ ಟೆರರ್ ಶೂಟಿಂಗ್​ ಆರಂಭ ಆಗಲಿದೆ. ಆದಿತ್ಯ ಅವರ ಮೊದಲ ಪ್ಯಾನ್​ ಇಂಡಿಯಾ ಚಿತ್ರದ ಫಸ್ಟ್ ಲುಕ್ ಹಾಗೂ ಕ್ಯಾರೆಕ್ಟರ್ ಟೀಸರ್ ಲಹರಿ ಮ್ಯೂಸಿಕ್ ಯೂಟ್ಯೂಬ್ ಮೂಲಕ ಕಳೆದ ಡಿಸೆಂಬರ್​ ಕೊನೆ ವಾರದಲ್ಲಿ ಬಿಡುಗಡೆ ಆಗಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿತ್ತು.

ಇದನ್ನೂ ಓದಿ: 'ಕೆಡಿ' ಅಡ್ಡಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್​ ಸೂಪರ್​ ಸ್ಟಾರ್​​ ಸಂಜಯ್ ದತ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.