ನಟ ಚೇತನ್ ಒಂದಲ್ಲಾ ಒಂದು ಹೇಳಿಕೆ ನೀಡುವ ಮೂಲಕ ಸಾಕಷ್ಟು ವಿವಾದಗಳನ್ನು ತಮ್ಮ ಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಈ ಹಿಂದೆ ಕಾಂತಾರ ಚಿತ್ರದ ಭೂತಕೋಲದ ಬಗ್ಗೆ ಮಾತನಾಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ನಟ ಚೇತನ್ ಇದೀಗ ಮೊತ್ತೊಂದು ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.
- — Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 19, 2022 " class="align-text-top noRightClick twitterSection" data="
— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 19, 2022
">— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) November 19, 2022
''ನಿನ್ನೆ ನಡೆದ ಕಾಲೇಜ್ ಫೆಸ್ಟ್‌ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕಾಗಿ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಿಸಿ ಮತ್ತು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದು ಅಸಂಬದ್ಧ ಮತ್ತು ಅಪಾಯಕಾರಿ.
ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರು, ನಮ್ಮ ಶತ್ರುಗಳಲ್ಲ. ವಾಕ್ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು'' ಎಂದು ಟ್ವೀಟ್ ಮಾಡುವ ಮೂಲಕ ಸಾರ್ವಜನಿಕರಿಂದ ತೀರ್ವ ಟೀಕೆಗೆ ಒಳಗಾಗುತ್ತಿದ್ದಾರೆ.
ಇದನ್ನೂ ಓದಿ: 'ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್'.. ಸಿ ಎಂ ಇಬ್ರಾಹಿಂ ವಿರುದ್ಧ ಚೇತನ್ ಟ್ವೀಟ್
ಮಾರತ್‌ಹಳ್ಳಿ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಮೂವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದಾಗ ತಮಾಷೆ ಮಾಡಲು ಹೀಗೆ ಮಾಡಿದ್ದೇವೆ ಎಂದಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ಮುಂದುವರಿಸಿದ್ದಾರೆ.
ಈ ಹಿಂದೆ ಕಾಂತಾರ ಸಿನಿಮಾ ವಿಚಾರವಾಗಿ ತೀವ್ರ ಟೀಕೆಗೆ ಒಳಗಾಗಿದ್ದರು. ಭೂತಕೋಲ ಕೇವಲ ಹಿಂದೂ ಧರ್ಮದ ಆಚರಣೆ ಅಲ್ಲ ಎಂಬ ಹೇಳಿಕೆ ತೀವ್ರ ವಿವಾದಕ್ಕೆ ಒಳಗಾಗಿತ್ತು. ಇದೀಗ ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರು ಎಂಬ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.