ETV Bharat / entertainment

'ನನ್ನ ಬೆಳವಣಿಗೆಯಲ್ಲಿ ಮಾಧ್ಯಮದವರ ಪಾಲು ಸಾಕಷ್ಟಿದೆ': ಕ್ಷಮೆ ಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ - Darshan latest news

Darshan Thoogudeepa Apology: ಚಾಲೆಂಜಿಂಗ್ ಸ್ಟಾರ್​ ದರ್ಶನ್ ಮಾಧ್ಯಮದವರಲ್ಲಿ ಕ್ಷಮೆ ಯಾಚಿಸಿ ಪೋಸ್ಟ್ ಶೇರ್ ಮಾಡಿದ್ದಾರೆ.

Darshan Thoogudeepa Apology
ಮಾಧ್ಯಮದವರಲ್ಲಿ ಕ್ಷಮೆಯಾಚಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
author img

By ETV Bharat Karnataka Team

Published : Aug 25, 2023, 5:00 PM IST

Updated : Aug 25, 2023, 5:21 PM IST

ಕನ್ನಡದ ಸುದ್ದಿ ಮಾಧ್ಯಮಗಳು ಮತ್ತು ಸ್ಯಾಂಡಲ್​ವುಡ್​​ ಚಾಲೆಂಜಿಂಗ್ ಸ್ಟಾರ್​ ದರ್ಶನ್ ಅವರ ನಡುವೆ ಕಳೆದ ಕೆಲವು ವರ್ಷಗಳಿಂದ ಬಿರುಕುಂಟಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್ ಅವರಿಂದು ವರಮಹಾಲಕ್ಷ್ಮಿ ಹಬ್ಬಕ್ಕೆ ಶುಭಾಶಯ ಕೋರುವುದರ ಜೊತೆಗೆ ಮಾಧ್ಯಮದವರಲ್ಲೂ ಕ್ಷಮೆ ಕೇಳಿದ್ದಾರೆ. "ಮಿತ್ರರಾದ ರಾಕ್‌ಲೈನ್ ವೆಂಕಟೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದಿದ್ದು, ಇಡೀ ಪ್ರಕರಣ ಸುಖಾಂತ್ಯಗೊಂಡಿದೆ" ಎಂದು ಅವರು ತಿಳಿಸಿದ್ದಾರೆ.

ದರ್ಶನ್​ ತೂಗುದೀಪ ಪೋಸ್ಟ್: ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘ ಬರಹದ ಪೋಸ್ಟ್​ ಹಂಚಿಕೊಂಡಿದ್ದಾರೆ. ''ಸಮಸ್ತ ಕರ್ನಾಟಕ ಜನತೆಗೆ, ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ, ಮಿತ್ರ ರಾಕ್‌ಲೈನ್ ವೆಂಕಟೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ.''

''ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರೆ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಹೀಗೆ ಮಾಡಿದರೋ ಗೊತ್ತಿಲ್ಲ. ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ, ಮುಂದೆ, ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ.''

  • ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು pic.twitter.com/8I1weYojCX

    — Darshan Thoogudeepa (@dasadarshan) August 25, 2023 " class="align-text-top noRightClick twitterSection" data=" ">

''ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ನಡೆದಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲರೂ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ. ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ'' - ಪ್ರೀತಿಯಿಂದ, ದರ್ಶನ್​ ತೂಗುದೀಪ.

ಇದನ್ನೂ ಓದಿ: ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಗಟ್ಟಿಮೇಳ ಧಾರಾವಾಹಿಯ ವೇದಾಂತ್: ಆ್ಯಕ್ಷನ್​ ಕಟ್​ ಹೇಳಲಿದ್ದಾರೆ ಜೇಮ್ಸ್ ಡೈರೆಕ್ಟರ್

ದರ್ಶನ್​ ತೂಗುದೀಪ ಪೋಸ್ಟ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನ ಸಂಖ್ಯೆಯ ಸಾಮಾಜಿಕ ಜಾಲತಾಣ ಬಳಕೆದಾರರು ನಟನ ಈ ಗುಣವನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಸೋಷಿಯಲ್​ ಮೀಡಿಯಾದಲ್ಲಿ ಚರ್ಚೆ ಮುಂದುವರೆದಿದೆ.

ಇದನ್ನೂ ಓದಿ: 'ನಿಖಿಲ್​ಗಾಗಿ ಕಥೆ ರೆಡಿ ಮಾಡಿದ್ದೇನೆ, ಆದ್ರೆ ಮಗನಿಗೊಂದು ಭಯವಿದೆ': ಹೆಚ್​ ಡಿ ಕುಮಾರಸ್ವಾಮಿ

Last Updated : Aug 25, 2023, 5:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.