ETV Bharat / entertainment

ನಿಮ್ಮ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ: ನಟ ದರ್ಶನ್​ - Darshan social media post

ನಟ ದರ್ಶನ್​ ಮೇಲೆ ನಡೆದ ಅಮಾನವೀಯ ಘಟನೆಯನ್ನು ಅಭಿಮಾನಿಗಳು ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ತಾರೆಗಳು ಖಂಡಿಸಿದ್ದರು. ಇದೀಗ ದರ್ಶನ್​ ಸೋಶಿಯಲ್​ ಮೀಡಿಯಾ ಪೋಸ್ಟ್ ಮೂಲಕ ​ಧನ್ಯವಾದ ಸಲ್ಲಿಸಿದ್ದಾರೆ.

Darshan Thoogudeepa
ನಟ ದರ್ಶನ್​
author img

By

Published : Dec 22, 2022, 12:36 PM IST

Updated : Dec 22, 2022, 12:59 PM IST

ಭಾನುವಾರ ಸಂಜೆ ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಎರಡನೇ ಹಾಡು ಬಿಡುಗಡೆ ಸಮಾರಂಭದಲ್ಲಿ ನಟ ದರ್ಶನ್​ ಮೇಲೆ ನಡೆದ ಅಮಾನವೀಯ ಘಟನೆಯನ್ನು ಅಭಿಮಾನಿಗಳು ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ತಾರೆಗಳು ಖಂಡಿಸಿದ್ದರು. ಇದೀಗ ಬೆಂಬಲಕ್ಕೆ ನಿಂತ ಸರ್ವರಿಗೂ ಮನಸ್ಪೂರ್ವಕವಾಗಿ ನಟ ದರ್ಶನ್​ ಧನ್ಯವಾದ ಸಲ್ಲಿಸಿದ್ದಾರೆ.

  • ನಿಮ್ಮ ಈ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ pic.twitter.com/PI7ikiciij

    — Darshan Thoogudeepa (@dasadarshan) December 21, 2022 " class="align-text-top noRightClick twitterSection" data=" ">

ಘಟನೆ ನಡೆದ ಎರಡು ದಿನಗಳ ಬಳಿಕ ಪ್ರತಿಕ್ರಿಯಿಸಿರುವ ದರ್ಶನ್, ತಮ್ಮ ಬೆಂಬಲಕ್ಕೆ ನಿಂತ ಚಿತ್ರರಂಗದ ನಟ – ನಟಿಯರಿಗೆ ಧನ್ಯವಾದ ಹೇಳಿದ್ದಾರೆ. ಖುಷಿ ವಿಚಾರವೆಂದರೆ ಕಿಚ್ಚ ಸುದೀಪ್‌ ಬೆಂಬಲಕ್ಕೂ ದರ್ಶನ್ ಧನ್ಯವಾದ ತಿಳಿಸಿದ್ದಾರೆ. ಸುದೀಪ್‌, ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದರ್ಶನ್​​ ಮೇಲಿನ ಕೃತ್ಯಕ್ಕೆ ವ್ಯಾಪಕ ಖಂಡನೆ: ಕೆಟ್ಟ ಪದ ಬಳಸುವವರ ಟ್ವಿಟರ್ ಖಾತೆ ಬ್ಯಾನ್ ಮಾಡಲು ರಮ್ಯಾ ಮನವಿ

'ಈ ಸಮಯದಲ್ಲಿ ನನಗಿಂತಲೂ ನನ್ನ ಸೆಲೆಬ್ರಿಟಿಗಳಿಗೆ ಹೆಚ್ಚು ನೋವಾಗಿದೆ ಎಂಬ ಅರಿವು ನನಗಿದೆ. ಇಂಥ ಘಟನೆಗಳು ಒಬ್ಬ ವ್ಯಕ್ತಿಯನ್ನು ಮತ್ತಷ್ಟು ಬಲಪಡಿಸುತ್ತದೆಯೇ ಹೊರತು ಬಲಹೀನನನ್ನಾಗಿ ಮಾಡುವುದಿಲ್ಲ. ಅದಕ್ಕೆ ತಕ್ಕ ಹಲವು ಉದಾಹರಣೆಗಳು ನಮ್ಮ ನೆಲದಲ್ಲೇ ನೋಡಿದ್ದೇವೆ. ಈ ಸಮಯದಲ್ಲಿ ನ್ಯಾಯದ ಪರ ನಿಂತ ಚಿತ್ರರಂಗದ ಗೆಳೆಯರು, ನಟರಿಗೆ ಧನ್ಯವಾದಗಳು.

ಈ ಘಟನೆಯನ್ನು ತಪ್ಪು ಹಾದಿಯಲ್ಲಿ ಪ್ರೇರೇಪಿಸಲು ಪ್ರಯತ್ನಿಸಿದ ಕೆಲವರಿಗೂ ಧನ್ಯವಾದಗಳು. ಮೊದಲಿಂದಲೂ ಹೇಳಿಕೊಂಡು ಬಂದಿದ್ದೇನೆ. ಹಾಳು ಮಾಡೋಕೆ ನೂರು ಜನ ಇದ್ದರೆ, ಕಾಯೋಕೆ ನಮ್ಮ ಕೋಟ್ಯಂತರ ಅಭಿಮಾನಿಗಳಿರುತ್ತಾರೆ. ನಿಮ್ಮ ಈ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ' ಎಂದು ದರ್ಶನ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ದ್ವೇಷವೇ ಎಲ್ಲದಕ್ಕೂ ಉತ್ತರವಲ್ಲ, ಹೊಸಪೇಟೆ ಘಟನೆ ನನ್ನನ್ನು ಘಾಸಿಗೊಳಿಸಿದೆ: ಕಿಚ್ಚ ಸುದೀಪ್​

Last Updated : Dec 22, 2022, 12:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.