ನವರಸ ನಾಯಕ ಜಗ್ಗೇಶ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆ ಕೇದರನಾಥ್ ಮತ್ತು ಬದ್ರಿನಾಥ್ ಯಾತ್ರೆಗೆ ಜಗ್ಗೇಶ್ ಅವರು ತೆರಳಿದ್ದರು. ಈ ವೇಳೆ, ಅಲ್ಲಿ ಬೆಟ್ಟ ಹತ್ತಿ ಇಳಿದ ಕಾರಣ ಹಾಗೂ ಸತತ ನಡೆದಾಟದ ಕಾರಣದಿಂದಾಗಿ ಅವರಿಗೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರು ವೈದ್ಯರ ಸಲಹೆ ಮೇರೆಗೆ ದೆಹಲಿ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ಗೆ ಒಳಗಾಗಿದ್ದಾರೆ. ಇಂದು ಮಧ್ಯರಾತ್ರಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.
-
L4L5 compression ಆಗಿ ನಡೆದಾಡಲು ಕಷ್ಟವಾಗಿ ಯಾವ ಕಾರ್ಯದಲ್ಲು ಭಾಗಿಯಾಗಲು ಸಾಧ್ಯವಾಗಲಿಲ್ಲಾ!
— ನವರಸನಾಯಕ ಜಗ್ಗೇಶ್ (@Jaggesh2) September 29, 2023 " class="align-text-top noRightClick twitterSection" data="
2ವಾರ pysiyo ಚಿಕಿತ್ಸೆ ಹಾಗು bedrest ಕಡ್ಡಾಯ ಎಂದು ಡಾ ಸಲಹೆ ನೀಡಿದ್ದಾರೆ..
ನಿಮ್ಮ ಮಾಹಿತಿಗಾಗಿ ಧನ್ಯವಾದ
ಶುಭಸಂಜೆ🙏 pic.twitter.com/KZgGvVffj6
">L4L5 compression ಆಗಿ ನಡೆದಾಡಲು ಕಷ್ಟವಾಗಿ ಯಾವ ಕಾರ್ಯದಲ್ಲು ಭಾಗಿಯಾಗಲು ಸಾಧ್ಯವಾಗಲಿಲ್ಲಾ!
— ನವರಸನಾಯಕ ಜಗ್ಗೇಶ್ (@Jaggesh2) September 29, 2023
2ವಾರ pysiyo ಚಿಕಿತ್ಸೆ ಹಾಗು bedrest ಕಡ್ಡಾಯ ಎಂದು ಡಾ ಸಲಹೆ ನೀಡಿದ್ದಾರೆ..
ನಿಮ್ಮ ಮಾಹಿತಿಗಾಗಿ ಧನ್ಯವಾದ
ಶುಭಸಂಜೆ🙏 pic.twitter.com/KZgGvVffj6L4L5 compression ಆಗಿ ನಡೆದಾಡಲು ಕಷ್ಟವಾಗಿ ಯಾವ ಕಾರ್ಯದಲ್ಲು ಭಾಗಿಯಾಗಲು ಸಾಧ್ಯವಾಗಲಿಲ್ಲಾ!
— ನವರಸನಾಯಕ ಜಗ್ಗೇಶ್ (@Jaggesh2) September 29, 2023
2ವಾರ pysiyo ಚಿಕಿತ್ಸೆ ಹಾಗು bedrest ಕಡ್ಡಾಯ ಎಂದು ಡಾ ಸಲಹೆ ನೀಡಿದ್ದಾರೆ..
ನಿಮ್ಮ ಮಾಹಿತಿಗಾಗಿ ಧನ್ಯವಾದ
ಶುಭಸಂಜೆ🙏 pic.twitter.com/KZgGvVffj6
ತಾವು ಸಿಟಿ ಸ್ಕ್ಯಾನ್ಗೆ ಒಳಗಾಗುತ್ತಿರುವ ಚಿತ್ರವನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ನಟ ಜಗ್ಗೇಶ್, "L4L5 compression ಆಗಿ ನಡೆದಾಡಲು ಕಷ್ಟವಾಗಿ ಯಾವ ಕಾರ್ಯದಲ್ಲೂ ಭಾಗಿಯಾಗಲು ಸಾಧ್ಯವಾಗಲಿಲ್ಲ! 2ವಾರ pysiyo (ಫಿಸಿಯೋ) ಚಿಕಿತ್ಸೆ ಹಾಗೂ ಬೆಡ್ರೆಸ್ಟ್ ಕಡ್ಡಾಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.. ನಿಮ್ಮ ಮಾಹಿತಿಗಾಗಿ ಧನ್ಯವಾದ ಶುಭಸಂಜೆ" ಎಂದು ಬರೆದುಕೊಂಡಿದ್ದಾರೆ.
ಕಾವೇರಿ ಹೋರಾಟಕ್ಕೆ ಗೈರು: ಇಂದು ರಾಜ್ಯದೆಲ್ಲೆಡೆ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ನಡೆಯುತ್ತಿರುವ ಬಂದ್ಗೆ ಚಿತ್ರರಂಗ ಕೂಡ ಬೆಂಬಲ ನೀಡಿದೆ. ಕಾವೇರಿಗಾಗಿ ಬೀದಿಗಿಳಿಯಲಿರುವ ಸ್ಯಾಂಡಲ್ವುಡ್ ತಾರೆಯರು, ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಗುರುರಾಜ್ ಕಲ್ಯಾಣ ಮಂಟಪದಲ್ಲಿ ನಡೆದ ಹೋರಾಟಕ್ಕೆ ಸಾಥ್ ನೀಡಿದ್ದಾರೆ. ಆದರೆ, ಸದಾ ಇಂತಹ ವಿಚಾರಗಳಲ್ಲಿ ಅನ್ನದಾತರ ಪರವಾಗಿ ನಿಲ್ಲುವ ನಟ ಜಗ್ಗೇಶ್ ಅವರು ಅನಾರೋಗ್ಯದ ನಿಮಿತ್ತ ಕಾವೇರಿ ಹೋರಾಟಕ್ಕೆ ಗೈರಾಗಿದ್ದರು.
ಕಾವೇರಿ ಹೋರಾಟದಲ್ಲಿ ನಟರಾದ ಶಿವರಾಜ್ ಕುಮಾರ್, ಉಪೇಂದ್ರ, ಶ್ರೀಮುರಳಿ, ದರ್ಶನ್, ಲೂಸ್ ಮಾದ ಯೋಗಿ, ಚಿಕ್ಕಣ್ಣ, ಶ್ರೀನಾಥ್, ಓಂ ಸಾಯಿ ಪ್ರಕಾಶ್, ರಘು ಮುಖರ್ಜಿ, ತಬಲ ನಾಣಿ, ಶ್ರೀಮುರಳಿ ವಿಜಯರಾಘವೇಂದ್ರ, ಶ್ರೀನಿವಾಸ್ ಮೂರ್ತಿ, ನಟಿಯರಾದ ಉಮಾಶ್ರೀ, ಪೂಜಾಗಾಂಧಿ, ಅನು ಪ್ರಭಾಕರ್, ರೂಪಿಕಾ, ಶೃತಿ, ಫಿಲ್ಮ್ ಚೇಂಬರ್ ಸದಸ್ಯರು ಸೇರಿದಂತೆ ನೂರಾರು ಕಲಾವಿದರು ಭಾಗವಹಿಸಿದ್ದರು.
ತೋತಾಪುರಿ 2 ರಿಲೀಸ್ಗೂ ಬಾರದ ಜಗ್ಗೇಶ್: ನವರಸನಾಯಕನ ಬಹುನಿರೀಕ್ಷಿತ ಚಿತ್ರ 'ತೋತಾಪುರಿ 2'. ರಾಜ್ಯಾದ್ಯಂತ ಈ ಸಿನಿಮಾ ನಿನ್ನೆ (ಸೆಪ್ಟೆಂಬರ್ 28) ಬಿಡುಗಡೆಯಾಗಿದೆ. ಚಿತ್ರ ರಿಲೀಸ್ ವೇಳೆಯೂ ನಟ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದು ಅವರ ಅಭಿಮಾನಿಗಳನ್ನು ಆತಂಕಕ್ಕೀಡು ಮಾಡಿತ್ತು. ಇದೀಗ ನಟ ತಮ್ಮ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಒಂದೇ ಸೂರಿನಡಿ ಬದುಕುತ್ತಿರುವ ನಾವೆಲ್ಲ ಒಂದೇ ಎನ್ನುವ ಭಾವೈಕ್ಯತೆಯ ಸಂದೇಶ ಹೊಂದಿದ್ದ 'ತೋತಾಪುರಿ' ಚಿತ್ರ ಕನ್ನಡ ಸಿನಿಮಾ ಪ್ರೇಮಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮುಂದುವರಿದ ಭಾಗ 'ತೋತಾಪುರಿ 2' ಥಿಯೇಟರ್ಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. 'ಸಿದ್ಲಿಂಗು' ಖ್ಯಾತಿಯ ವಿಜಯಪ್ರಸಾದ್ ನಿರ್ದೇಶನದಲ್ಲಿ ಮೂಡಿಬಂದಿರುವ 'ತೋತಾಪುರಿ 2' ಚಿತ್ರದಲ್ಲಿ ನವರಸನಾಯಕ ಜಗ್ಗೇಶ್ ಮತ್ತು ಡಾಲಿ ಧನಂಜಯ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಇದನ್ನೂ ಓದಿ: 'ತೋತಾಪುರಿ 2' ಟ್ರೇಲರ್ ಬಿಡುಗಡೆಗೊಳಿಸಿದ ಶಿವ ರಾಜ್‌ಕುಮಾರ್: ಜಗ್ಗೇಶ್-ಡಾಲಿ ಜುಗಲ್ಬಂದಿಗೆ ಏನಂದ್ರು?