'ದಿ ಫ್ಯಾಮಿಲಿ ಮ್ಯಾನ್' ವೆಬ್ ಸೀರಿಸ್ ಜನಪ್ರಿಯತೆಯ ನಟ ಮನೋಜ್ ಬಾಜಪೇಯಿ ಅವರ ತಾಯಿ ಗೀತಾ ದೇವಿ (80) ಇಂದು ಕೊನೆಯುಸಿರೆಳೆದಿದ್ದಾರೆ. ನಿಧನ ಸುದ್ದಿಯನ್ನು ಮನೋಜ್ ಅವರ ವಕ್ತಾರರು ಖಚಿತಪಡಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ದೆಹಲಿಯ ಮ್ಯಾಕ್ಸ್ ಪುಷ್ಪಾಂಜಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಮ್ಮ ಬದುಕಿನ ಕೊನೆಯ ಕ್ಷಣಗಳಲ್ಲಿ ಮನೋಜ್ ತಮ್ಮ ತಾಯಿಯ ಜೊತೆಯಲ್ಲಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ನಟನ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ. ಸ್ಟೇ ಸ್ಟ್ರಾಂಗ್ ಮನೋಜ್ ಸರ್, ಅವರ ಆತ್ಮಕ್ಕೆ ಶಾಂತಿ ಸಿಗಲಿ, ನಿಮಗೆ ದುಃಖ ಸಹಿಸುವ ಶಕ್ತಿಯನ್ನು ಆ ಭಗವಂತ ಕೊಡಲಿ ಎಂದು ಸೋಶಿಯಲ್ ಮೀಡಿಯಾ ಬಳಕೆದಾರರು ಬರೆದಿದ್ದಾರೆ.
ಗೀತಾದೇವಿ ಅವರು ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಮನೋಜ್ ತಂದೆಯನ್ನು ಕಳೆದುಕೊಂಡಿದ್ದರು.
ಇದನ್ನೂ ಓದಿ: ಕೆಜಿಎಫ್ ತಾತ ಖ್ಯಾತಿಯ ನಟ ಕೃಷ್ಣ ಜಿ ರಾವ್ ಇನ್ನಿಲ್ಲ