ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ವಿದ್ಯಾಸಾಗರ್ ಅವರು ತೀವ್ರ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಈ ಬಗ್ಗೆ ಕಳೆದ ಕೆಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಮೀನಾ ಬೆಂಗಳೂರಿನ ವಿದ್ಯಾಸಾಗರ್ ಅವರನ್ನು 2009ರಲ್ಲಿ ವಿವಾಹವಾಗಿದ್ದರು. ಅವರಿಗೆ ನೈನಿಕಾ ಎಂಬ ಮಗಳಿದ್ದಾಳೆ. ವಿದ್ಯಾಸಾಗರ್ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ವಿವಾಹದ ಬಳಿಕ ವಿದ್ಯಾ ಸಾಗರ್ ಮತ್ತು ಮೀನಾ ಚೆನ್ನೈನಲ್ಲಿ ವಾಸ್ತವ್ಯ ಹೂಡಿದ್ದರು ಎಂದು ತಿಳಿದು ಬಂದಿದೆ.
ಬಾಲ ಕಲಾವಿದೆಯಾಗಿ ಚಲನಚಿತ್ರಗಳಲ್ಲಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದ್ದ ಮೀನಾ, ನಂತರ 90ರ ದಶಕದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದರು. ದಕ್ಷಿಣ ಭಾರತ ಚಿತ್ರರಂಗದ ಅನೇಕ ನಟರೊಂದಿಗೆ ನಟಿಸಿದ್ದಾರೆ.
ನಟಿ ಮೀನಾ ಅವರು ತೆಲುಗು, ತಮಿಳು, ಕನ್ನಡ, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ವಿದ್ಯಾಸಾಗರ್ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ರಾಜಕೀಯ ಮುಖಂಡರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ಅವರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ನಡೆಯಲಿದೆ.
ಇದನ್ನೂ ಓದಿ: ಮೈಸೂರಿನ ಸೈಬರ್ ಠಾಣೆಗೆ ದೂರು ನೀಡಿದ ನಟಿ ಪವಿತ್ರ ಲೋಕೇಶ್