ಟಾಲಿವುಡ್ ಸ್ಟಾರ್ ನಟ ನಾಗ ಚೈತನ್ಯ ಹೊಸ ಸಿನಿಮಾಗೆ ತಯಾರಿ ನಡೆಸುತ್ತಿದ್ದಾರೆ. ತಮ್ಮ ಮುಂದಿನ ಪ್ರಾಜೆಕ್ಟ್ ಸಲುವಾಗಿ ಚಂದೂ ಮೊಂಡೇಟಿ (Chandoo Mondeti) ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ನಟ ಆಂಧ್ರಪ್ರದೇಶದ ಶ್ರೀಕಾಕುಳಂ ಹಳ್ಳಿಗೆ ಭೇಟಿ ನೀಡಿ ಮೀನುಗಾರ ಸಮುದಾಯದ ಜನರೊಂದಿಗೆ ಕೆಲ ಕಾಲ ಕಳೆದಿದ್ದಾರೆ. ಮೀನುಗಾರ ಸಂಸ್ಕೃತಿ, ನೆಲ, ಭಾಷೆ, ಜೀವನಶೈಲಿಯ ಬಗ್ಗೆ ತಿಳಿದುಕೊಂಡಿದ್ದಾರೆ. ಅಂದ ಹಾಗೇ, ನಾಗ ಚೈತನ್ಯ ಅವರು ನಟಿಸುತ್ತಿರುವ 23ನೇ ಚಿತ್ರ ಇದಾಗಿದೆ. ನೈಜ ಘಟನೆಯ ಸುತ್ತ ಇಡೀ ಕಥೆಯನ್ನು ಕಟ್ಟಿಕೊಡಲಾಗಿದೆ.
-
The love for Yuvasamrat @chay_akkineni is 💯✅#NC23 #NagaChaitanya pic.twitter.com/TiRCOdT0cu
— Trends NagaChaitanya™ (@TrendsChaitu) August 3, 2023 " class="align-text-top noRightClick twitterSection" data="
">The love for Yuvasamrat @chay_akkineni is 💯✅#NC23 #NagaChaitanya pic.twitter.com/TiRCOdT0cu
— Trends NagaChaitanya™ (@TrendsChaitu) August 3, 2023The love for Yuvasamrat @chay_akkineni is 💯✅#NC23 #NagaChaitanya pic.twitter.com/TiRCOdT0cu
— Trends NagaChaitanya™ (@TrendsChaitu) August 3, 2023
'ಕಾರ್ತಿಕೇಯ 2' ನಂತಹ ಬ್ಲಾಕ್ ಬಸ್ಟರ್ ಹಿಟ್ ಪ್ಯಾನ್ ಇಂಡಿಯಾ ಸಿನಿಮಾವನ್ನು ನೀಡಿರುವ ಚಂದೂ ಮೊಂಡೇಟಿ ಅವರು ಈ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಚಿತ್ರಕ್ಕೆ NC23 ಎಂದು ತಾತ್ಕಾಲಿಕ ಟೈಟಲ್ ಇಡಲಾಗಿದೆ. ಶೀಘ್ರದಲ್ಲೇ ಈ ಚಿತ್ರ ಸೆಟ್ಟೇರಲಿದೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಸಿನಿಮಾವನ್ನು ಪ್ರಸ್ತುತಪಡಿಸಲಿದ್ದಾರೆ. ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್ ಅಡಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
NC23 ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಇದೇ ತಿಂಗಳಿನಿಂದ ಚಿತ್ರೀಕರಣ ಆರಂಭಿಸಲು ಚಿತ್ರತಂಡ ಪ್ಲಾನ್ ಮಾಡಿದೆ. ನಾಗ ಚೈತನ್ಯ, ಚಂದೂ ಮೊಂಡೇಟಿ ಹಾಗೂ ಬನ್ನಿ ವಾಸ್ ನಿನ್ನೆ ವೈಜಾಗ್ನಲ್ಲಿ ಭೇಟಿಯಾಗಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಶ್ರೀಕಾಕುಳಂ ಗ್ರಾಮಕ್ಕೆ ತೆರಳಿ ಮೀನುಗಾರರ ಕುಟುಂಬವನ್ನು ಭೇಟಿ ಮಾಡಿದ್ದಾರೆ.
ಇದನ್ನೂ ಓದಿ: ನನ್ನ ಸಿನಿ ಜರ್ನಿಯಲ್ಲೇ ನಾನು ಕೇಳಿರುವ ಉತ್ತಮ ಕಥೆ 'ಕೌಸಲ್ಯ ಸುಪ್ರಜಾ ರಾಮ': ಡಾರ್ಲಿಂಗ್ ಕೃಷ್ಣ
ಬಳಿಕ ಮಾತನಾಡಿದ ನಾಯಕ ನಾಗ ಚೈತನ್ಯ, "ಚಂದು ಅವರು 6 ತಿಂಗಳ ಹಿಂದೆ ನನ್ನಲ್ಲಿ ಕಥೆಯನ್ನು ಹೇಳಿದ್ದರು. ನಾನು ತುಂಬಾ ಉತ್ಸುಕನಾಗಿದ್ದೇನೆ. ನೈಜ ಘಟನೆಗಳನ್ನು ಆಧರಿಸಿ ಅವರು ಕಥೆಯನ್ನು ಅಭಿವೃದ್ಧಿಪಡಿಸಿದ್ದಾರೆ. ವಾಸ್ ಮತ್ತು ಚಂದೂ ಎರಡು ವರ್ಷಗಳಿಂದ ಕಥೆಯ ಮೇಲೆ ಕೆಲಸ ಮಾಡುತ್ತಿದ್ದಾರೆ. ಕಥೆ ತುಂಬಾ ಸ್ಪೂರ್ತಿದಾಯಕವಾಗಿದೆ. ಮೀನುಗಾರರ ಜೀವನಶೈಲಿ, ಅವರ ಭಾಷೆ ಮತ್ತು ಹಳ್ಳಿಯ ಸೊಬಗನ್ನು ತಿಳಿಯಲು ನಾವು ಇಲ್ಲಿಗೆ ಬಂದಿದ್ದೇವೆ. ಪ್ರಿ ಪ್ರೊಡಕ್ಷನ್ ಕೆಲಸಗಳು ಇಂದಿನಿಂದ ಪ್ರಾರಂಭವಾಗುತ್ತವೆ" ಎಂದು ತಿಳಿಸಿದರು.
ನಂತರ ನಿರ್ದೇಶಕ ಚಂದೂ ಮೊಂಡೇಟಿ ಮಾತನಾಡಿ, "ಕಾರ್ತಿಕ್ ಎಂಬ ಸ್ಥಳೀಯ ವ್ಯಕ್ತಿ 2018 ರಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಕಥೆಯನ್ನು ಸಿದ್ಧಪಡಿಸಿದ್ದಾರೆ. ಅವರು ಆರಂಭದಲ್ಲಿ ಅರವಿಂದ್ ಮತ್ತು ಬನ್ನಿ ವಾಸ್ ಅವರಿಗೆ ಕಥೆಯನ್ನು ಹೇಳಿದರು. ಕಥೆ ಕೇಳಿದಾಗ ರೋಮಾಂಚನಗೊಂಡೆ. ನಾವು ಕಳೆದ 2 ವರ್ಷಗಳಿಂದ ಸ್ಕ್ರಿಪ್ಟ್ ಕೆಲಸ ಮಾಡುತ್ತಿದ್ದೇವೆ. ಇದೀಗ ಸ್ಕ್ರಿಪ್ಟ್ ಸಿದ್ಧವಾಗಿದ್ದು ಕಥೆ ಚೆನ್ನಾಗಿ ಬಂದಿದೆ. ನಾಗ ಚೈತನ್ಯ ಅವರು ಕಥೆಯಿಂದ ಸಂತಸಗೊಂಡಿದ್ದಾರೆ. ಘಟನೆ ನಡೆದ ಸ್ಥಳದಲ್ಲಿಯೇ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಲಿದೆ" ಎಂದು ಹೇಳಿದರು.
ಇದನ್ನೂ ಓದಿ: ನಾಗ ಚೈತನ್ಯ ಜೊತೆ ತೆರೆ ಹಂಚಿಕೊಳ್ಳಲಿರುವ ಕೀರ್ತಿ ಸುರೇಶ್?!