ETV Bharat / entertainment

ಗುಲ್ಟು ಖ್ಯಾತಿಯ ನವೀನ್ ಶಂಕರ್ ಈಗ ''ಮೂಲತಃ ನಮ್ಮವರೇ'' - naveen shankar latest news

ಯುವ ನಟ ನವೀನ್ ಶಂಕರ್ ''ಮೂಲತಃ ನಮ್ಮವರೇ'' ಅನ್ನೋ ಮತ್ತೊಂದು ವಿಭಿನ್ನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

actor naveen shankar in Moolataha nammavare movie
''ಮೂಲತಃ ನಮ್ಮವರೇ'' ಸಿನಿಮಾ
author img

By

Published : Dec 15, 2022, 7:44 PM IST

ಗುಲ್ಟು ಸಿನಿಮಾ ಮೂಲಕ ಸ್ಯಾಂಡಲ್​​ವುಡ್​ ಸಿನಿರಸಿಕರ ಮನ ಗೆದ್ದಿರುವ ಯುವ ನಟ ನವೀನ್ ಶಂಕರ್ ಧರಣಿ ಮಂಡಲ ಮಧ್ಯದೊಳಗೆ ಚಿತ್ರದದಿಂದ ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ''ಮೂಲತಃ ನಮ್ಮವರೇ'' ಅನ್ನೋ ಮತ್ತೊಂದು ವಿಭಿನ್ನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಶೀರ್ಷಿಕೆಯನ್ನು ಇಂದು ಚಿತ್ರತಂಡ ಅನಾವರಣ ಮಾಡುವ ಮೂಲಕ ಈ ಸಿನಿಮಾದ ವಿಶೇಷತೆ ಹಂಚಿಕೊಂಡಿದೆ.

actor naveen shankar in Moolataha nammavare movie
''ಮೂಲತಃ ನಮ್ಮವರೇ'' ನಟ ನಟಿ

ಮೊದಲು ಮಾತು ಶುರು ಮಾಡಿದ‌ ನವೀನ್ ಶಂಕರ್, ಚಿತ್ರತಂಡದವರು ಎಲ್ಲವನ್ನೂ ಸಿದ್ಧ ಮಾಡಿಕೊಂಡು ನಾಯಕನ ಹುಡುಕಾಟದಲ್ಲಿದ್ದರು. ಕೆಲವು ನಾಯಕರನ್ನು ಸಂಪರ್ಕ ಕೂಡ ಮಾಡಿದ್ದರು. ಆನಂತರ ಇವರಿಗೆ ನಾನು ಸಿಕ್ಕಿದೆ‌. ಕಥೆ ತುಂಬಾ ಚೆನ್ನಾಗಿದೆ. ನಾನು ಇಲ್ಲಿಯವರೆಗೂ ಮಾಡಿರದ ಕಥೆ ಎನ್ನಬಹುದು. ಅಪ್ಪ - ಮಗನ ಸೆಂಟಿಮೆಂಟ್ ಸನ್ನಿವೇಶಗಳು ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ. ಶೋಭ್ ರಾಜ್ ನನ್ನ ತಂದೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಮುಂಬೈನ ತಾನ್ಯ ಈ ಚಿತ್ರದ ನಾಯಕಿ. ಅವಿನಾಶ್, ಮಾಳವಿಕ ಅವಿನಾಶ್, ತೆಲುಗಿನ ಸತ್ಯಪ್ರಕಾಶ್ ಸೇರಿದಂತೆ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ನನ್ನ ಈ ಹಿಂದಿನ ಚಿತ್ರಗಳಲ್ಲಿ ಆ್ಯಕ್ಷನ್, ಡ್ಯಾನ್ಸ್​​ಗಳಿಗೆ ಅಷ್ಟು ಅವಕಾಶವಿರಲಿಲ್ಲ. ಈ ಚಿತ್ರದಲ್ಲಿ ಎಲ್ಲವೂ ಇದೆ ಎಂದು ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ನಟ ನವೀನ್ ಶಂಕರ್ ಹೇಳಿದರು.

ಬಳಿಕ ನಿರ್ದೇಶಕ‌ ಚೇತನ್ ಭಾಸ್ಕರಯ್ಯ ಮಾತನಾಡಿ, ರಂಗಭೂಮಿ ನಂಟಿರುವ ನನಗೆ ಸಿನಿಮಾ ನಿರ್ದೇಶನದಲ್ಲಿ ಆಸಕ್ತಿ ಇದೆ. ಹಿಂದೆ ಕೆಲವು ಕಿರುಚಿತ್ರಗಳನ್ನು ನಿರ್ದೇಶಿಸಿದ್ದೇನೆ‌‌. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ಕಥೆ ಸಿದ್ಧವಾದ ನಂತರ ನಾಯಕನ‌ ಹುಡುಕಾಟದಲ್ಲಿದ್ದಾಗ ನವೀನ್ ಸಿಕ್ಕರು. ಆಗಷ್ಟೇ ಅವರ " ಗುಲ್ಟು" ಚಿತ್ರ ಬಿಡುಗಡೆಯಾಗಿತ್ತು. ಇನ್ನೂ "ಮೂಲತಃ ನಮ್ಮವರೇ" ಇದೊಂದು ಕೌಟುಂಬಿಕ ಚಿತ್ರ. ಅಪ್ಪ - ಮಗನ ಬಾಂಧವ್ಯದ ಸನ್ನಿವೇಶಗಳೇ ಚಿತ್ರದ ಹೈಲೆಟ್. ಬೆಂಗಳೂರು ಹಾಗೂ ಕರಾವಳಿಯಲ್ಲಿ ಚಿತ್ರೀಕರಣ ಮಾಡಿದ್ದೇವೆ‌. ನವೀನ್ ಶಂಕರ್ ಬಿಟ್ಟರೆ ಬಹುತೇಕರಿಗೆ ಇದು ಮೊದಲ ಸಿನಿಮಾ. ನಾನು ಕೂಡ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿರುವುದಾಗಿ ಹೇಳಿದರು.

ಇದನ್ನೂ ಓದಿ: 'ನಾನು, ಅದು ಮತ್ತು ಸರೋಜ' ಅಂತಿದ್ದಾರೆ ಲೂಸ್ ಮಾದ ಯೋಗಿ

ಕೇರಳದ ಚಂತು ಅವರು ಈ ಚಿತ್ರದಲ್ಲಿ ಛಾಯಾಗ್ರಹಣದ ಹೊಣೆ ಹೊತ್ತಿದ್ದಾರೆ, ಏಕ್ ಕ್ಯಾಬ್ ದಿ ಬ್ಯಾಂಡ್ ಸಂಗೀತ ನಿರ್ದೇಶನ ಹಾಗೂ ಜುವೀನ್ ಸಿಂಗ್ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.