ETV Bharat / entertainment

ಕಾಶೀಯಾತ್ರೆಗೆ ಹೊರಡಲು ಅಣಿಯಾದ ಪ್ರಮೋದ್ ಶೆಟ್ಟಿ - Kashiyathre kannada movie

ಪ್ರತಿಭಾನ್ವಿತ ನಟ ಪ್ರಮೋದ್ ಶೆಟ್ಟಿಯವರ ಕಾಶೀಯಾತ್ರೆ ಸಿನೆಮಾದ ಫಸ್ಟ್​ಲುಕ್​ನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಹೊಸ ಅವತಾರದಲ್ಲಿ ಪ್ರಮೋದ್ ಶೆಟ್ಟಿ ಸಿನಿರಸಿಕರನ್ನು ರಂಜಿಸಲಿದ್ದಾರೆ.

actor-pramod-shetty-new-movie-kashiyathre-first-look-released
ಕಾಶೀಯಾತ್ರೆಗೆ ಹೊರಡಲು ಅಣಿಯಾದ ಪ್ರಮೋದ್ ಶೆಟ್ಟಿ
author img

By

Published : Sep 1, 2022, 10:41 PM IST

ಖಳ‌ ನಟ‌ ಹಾಗು ಪೋಷಕ ಪಾತ್ರಗಳಿಂದಲೇ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ಪ್ರಮೋದ್ ಶೆಟ್ಟಿ. ತಮ್ಮ ವಿಭಿನ್ನ ಅಭಿನಯದ ಮೂಲಕ ಖ್ಯಾತಿ ಹೊಂದಿರುವ ನಟ ಪ್ರಮೋದ್ ಶೆಟ್ಟಿ ಮೊಟ್ಟ ಮೊದಲ ಬಾರಿಗೆ ನಾಯಕ ನಟನಾಗಲು ರೆಡಿಯಾಗಿದ್ದಾರೆ‌. ಈ ಸಿನಿಮಾಗೆ ಕಾಶೀಯಾತ್ರೆ ಎಂದು ಟೈಟಲ್ ಇಟ್ಟಿದ್ದು, ಈ ಚಿತ್ರದ ಫಸ್ಟ್ ಲುಕ್​ನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಪ್ರಮೋದ್ ಶೆಟ್ಟಿ ಅವರ ಹುಟ್ಟುಹಬ್ಬಕ್ಕೆ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಮೋದ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ. "ಕಾಶೀಯಾತ್ರೆ" ಗೆ ಹೊರಟಿರುವ ಮಧುಮಗನ ವೇಷದಲ್ಲಿ ಕಾಣಿಸಿಕೊಂಡಿರುವ ಪ್ರಮೋದ್ ಶೆಟ್ಟಿ, ತಮ್ಮ ವಿಭಿನ್ನ ಅವತಾರದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

ನೋಡುಗರನ್ನು ನಗೆಗಡಲಿನಲ್ಲಿ ತೇಲಿಸುವ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿನಯ್ ಶಾಸ್ತ್ರಿ ನಿರ್ದೇಶಿಸುತ್ತಿದ್ದಾರೆ. ಕಿರುಚಿತ್ರ ನಿರ್ದೇಶಿಸಿರುವ ವಿನಯ್ ಶಾಸ್ತ್ರಿ ಅವರಿಗೆ ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ಇನ್ನು ಪ್ರಮೋದ್ ಶೆಟ್ಟಿ, ಟಿ.ಎಸ್.ನಾಗಾಭರಣ, ಚಿತ್ತರಂಜನ್ ಕಶ್ಯಪ್, ಸ್ವರ ಶೆಟ್ಟಿ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಗನ್ನಿ ಬ್ಯಾಗ್​ ಸ್ಟುಡಿಯೋಸ್​ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ವಿಶ್ವಿ ಸಂಗೀತ ನಿರ್ದೇಶನ ಹಾಗೂ ಸುನೀತ್ ಹಲಗೇರಿ ಅವರ ಛಾಯಾಗ್ರಹಣವಿದೆ‌. ಸೆಪ್ಟೆಂಬರ್ 12ರಿಂದ ಬೆಂಗಳೂರು ಹಾಗೂ ಮೈಸೂರಿನಲ್ಲಿ "ಕಾಶೀಯಾತ್ರೆ" ಚಿತ್ರದ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ : ರಕ್ಷಿತ್ ಶೆಟ್ಟಿಯಿಂದ ಖುಷಿ ಸುದ್ದಿ... ಬ್ಯಾಚುಲರ್ ಪಾರ್ಟಿ ಕೊಡಲು ರೆಡಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.