ಸ್ಯಾಂಡಲ್ವುಡ್ ಉದಯೋನ್ಮುಖ ನಟ ಹಾಗೂ 'ದಿಯಾ' ಸಿನೆಮಾ ಖ್ಯಾತಿಯ ಪೃಥ್ವಿ ಅಂಬರ್ ಅವರ ತಾಯಿ ನಿಧನರಾಗಿದ್ದಾರೆ. ಪೃಥ್ವಿ ಅವರ ತಾಯಿ ಸುಜಾತಾ ವೀರಪ್ಪ ಅಂಬರ್ (55) ನಿನ್ನೆರಾತ್ರಿ ಮಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಸುಜಾತಾ ಅಂಬರ್ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು, ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ. ಸುಜಾತಾ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ನೇತಾರರಾದ ವೀರಪ್ಪ ಅಂಬರ್ ಅವರ ಧರ್ಮಪತ್ನಿ ಆಗಿದ್ದರು. ಅವರ ಅಂತ್ಯಕ್ರಿಯೆ ಮಂಗಳೂರಿನಲ್ಲಿ ಇಂದು ನಡೆಯುವ ಸಾಧ್ಯತೆಯಿದೆ.
ದುರ್ಗಾಪರಮೇಶ್ವರಿ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತಾ ಅವರು ಹಲವು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು. ಸುಜಾತಾರ ನಿಧನಕ್ಕೆ ಚಿತ್ರರಂಗದ ಗಣ್ಯರು ಸೇರಿ ಅನೇಕರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ರಜಿನಿಕಾಂತ್ ಆಶೀರ್ವಾದದೊಂದಿಗೆ.. ಮೈಸೂರಿನಲ್ಲಿ 'ಚಂದ್ರಮುಖಿ 2' ಚಿತ್ರದ ಶೂಟಿಂಗ್ ಆರಂಭಿಸಿದ ನಟ