ETV Bharat / entertainment

ಕಾಮಿಡಿ ಕಿಲಾಡಿ ಖ್ಯಾತಿಯ ಸೀರುಂಡೆ ರಘು ಈಗ 'ರಣಾಕ್ಷ' ಹೀರೋ - ಸೀರುಂಡೆ ರಘು

ಕಾಮಿಡಿ ಕಿಲಾಡಿ ಮೂಲಕ ಜನರ ಗಮನ ಸೆಳೆದ ಪ್ರತಿಭೆ ಸೀರುಂಡೆ ರಘು ಈಗ 'ರಣಾಕ್ಷ' ಚಿತ್ರದ ಮೂಲಕ ನಾಯಕನಟನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

Ranaaksha movie
ರಣಾಕ್ಷ ಸಿನಿಮಾ
author img

By ETV Bharat Karnataka Team

Published : Jan 19, 2024, 1:22 PM IST

ಚಂದನವನಕ್ಕೆ ಪ್ರತಿಭಾನ್ವಿತರ ಆಗಮನವಾಗುತ್ತಿದೆ. ವಿಭಿನ್ನ ಕಂಟೆಂಟ್​ ಮತ್ತು ಹೊಸ ಬಗೆಯ ಸಿನಿಮಾಗಳು ಮೂಡಿಬರುತ್ತಿವೆ. ಈ ಸಾಲಿನಲ್ಲಿ 'ರಣಾಕ್ಷ' ಚಿತ್ರತಂಡ ಕೂಡ ಒಂದು. ಯುವ ಪ್ರತಿಭೆಗಳ ತಂಡವೇ ಸೇರಿ ಮಾಡಿರುವ ಸಸ್ಪೆನ್ಸ್, ಥ್ರಿಲ್ಲರ್ ಕಥೆ ಆಧರಿಸಿರುವ ರಣಾಕ್ಷ ಚಿತ್ರಕ್ಕೆ ಸಾಹಿತಿ, ನಿರ್ದೇಶಕ ವಿ. ನಾಗೇಂದ್ರ ಪ್ರಸಾದ್ ಬೆಂಬಲ ಸೂಚಿಸಿದ್ದಾರೆ. ಚಿತ್ರದ ಹಾಡುಗಳು ಹಾಗೂ ಟೀಸರ್ ಅನ್ನು ನಾಗೇಂದ್ರ ಪ್ರಸಾದ್ ಅನಾವರಣಗೊಳಿಸಿ, ಮೆಚ್ಚುಗೆ ಸೂಚಿಸಿದ್ದಾರೆ.

ಕಾಮಿಡಿ ಕಿಲಾಡಿ ಮೂಲಕ ಜನರ ಗಮನ ಸೆಳೆದ ಸೀರುಂಡೆ ರಘು ಹಾಗೂ ರಕ್ಷಾ ಮುಖ್ಯಭೂಮಿಕೆಯಲ್ಲಿರುವ 'ರಣಾಕ್ಷ' ಟೀಸರ್ ಅನಾವರಣಗೊಳಿಸಿ ಮಾತನಾಡಿದ ವಿ.ನಾಗೇಂದ್ರ ಪ್ರಸಾದ್, "ನಿರ್ದೇಶಕ ರಾಘವ ಅವರು ನನಗೆ ಬಹಳ ವರ್ಷದ ಗೆಳೆಯ. ನಾನು ಈ ಚಿತ್ರದ ಬಗ್ಗೆ ಯಾವುದೇ ನಿರೀಕ್ಷೆ ಇಟ್ಟುಕೊಂಡು ಇಲ್ಲಿಗೆ ಬಂದಿರಲಿಲ್ಲ. ಆದರೆ ಟೀಸರ್ ಹಾಗೂ ಹಾಡುಗಳನ್ನು ನೋಡಿದ ಮೇಲೆ ತಂಡದ ಶ್ರಮ ಕಾಣುತ್ತದೆ. ಸಿನಿಮಾದ ಶೀರ್ಷಿಕೆಯೇ ಸಖತ್​ ಸ್ಟ್ರಾಂಗ್ ಇದೆ".

Ranaaksha movie
ರಣಾಕ್ಷ ಚಿತ್ರದಲ್ಲಿ ಹೀರೋ ಆದ ಸೀರುಂಡೆ ರಘು

"ಮೊದಲೆಲ್ಲಾ ಸಿನಿಮಾಗಳು ಹೆಚ್ಚು ಇರಲಿಲ್ಲ. ಹಾಡುಗಳು ಕೂಡ ಕಮ್ಮಿ ಇತ್ತು. ಪದೇ ಪದೇ ಅದೇ ಹಾಡನ್ನು ಆಕಾಶವಾಣಿ ಹಾಗೂ ಸಮಾರಂಭಗಳಲ್ಲಿ ಕೇಳಿದಾಗ ಅವು ಸದಾ ನೆನಪಿಗೆ ಬರುತ್ತಿತ್ತು. ಆದ್ರೀಗ ವರ್ಷಕ್ಕೆ ಸುಮಾರು 300 ಚಿತ್ರಗಳು ಬರುತ್ತಿವೆ. ಇನ್ನು ಎಷ್ಟು ಹಾಡುಗಳು ಬಂದಿರಬೇಕು ಯೋಚಿಸಿ. ಅದರಲ್ಲೂಈ ಚಿತ್ರದ ಹಾಡುಗಳು ನೋಡಿದಾಗ ಬಹಳ ಖುಷಿ ಎನಿಸಿತು. ನೋಡಿದ ಮೂರು ಹಾಡುಗಳೂ ಹೊಸತನದ ಸದ್ದು ಮಾಡುತ್ತಿದೆ. ಸಂಗೀತ ನಿರ್ದೇಶಕ ವಿಶಾಲ್ ಅಲಾಪ್ ಕೆಲಸ ಸೊಗಸಾಗಿದೆ. ಅದೇ ರೀತಿ ಗಾಯಕರಿಗೂ ಕೂಡ ಉತ್ತಮ ಭವಿಷ್ಯವಿದೆ" ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡರು.

ನಿರ್ದೇಶಕ ರಾಘವ ಮಾತನಾಡಿ, "ರಣಾಕ್ಷ ಎಂದರೆ ಹದ್ದಿನಂತೆ ಕಣ್ಣಿಟ್ಟು ಕಾಯುವವನು ಎಂದರ್ಥ. ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಕಥೆ. ಯಾವುದೇ ಮಂತ್ರ- ತಂತ್ರ ಏನೇ ಸಮಸ್ಯೆ ಎದುರಾದರೂ ಅದನ್ನು ಎದುರಿಸುವುದಕ್ಕೆ ಮನುಷ್ಯನೇ ಬರಬೇಕು. ಅದು ಹೇಗೆ? ಏನು? ಎಂಬುದನ್ನು ಈ ಚಿತ್ರದಲ್ಲಿ ನೋಡಬೇಕು" ಅಂತಾ ತಿಳಿಸಿದರು.

ಬಳಿಕ ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಜನರ ಗಮನ ಸೆಳೆದ ಪ್ರತಿಭೆ, ನಾಯಕ ಸೀರುಂಡೆ ರಘು ಮಾತನಾಡುತ್ತಾ, "ನಾನು ಕೂಡ ಮಾಧ್ಯಮದಲ್ಲಿ ಕ್ಯಾಮರಾ ಟ್ರೈಪಾಡ್ ಹಿಡಿದುಕೊಂಡು ಬಂದವನು. ನಂತರ ಕಾಮಿಡಿ ಕಿಲಾಡಿಯಲ್ಲಿ ಕಾಣಿಸಿಕೊಂಡೆ. ಸುಮಾರು 20ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಣ್ಣ ಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಹೀರೋ ಅನ್ನುವುದಕ್ಕಿಂತ ಕಥಾ ನಾಯಕನ ಪಾತ್ರದಲ್ಲಿ ಅಭಿನಯಿಸಿದ್ದೇನೆ".

Ranaaksha movie
'ರಣಾಕ್ಷ' ತಂಡ

"ಮೊದಲ ಬಾರಿಗೆ ಲೀಡ್ ರೋಲ್ ನಿರ್ವಹಿಸಿರುವೆ. ನಾಲ್ವರು ಸ್ನೇಹಿತರ ಜೊತೆ ಸಾಗುವ ಪಾತ್ರ. ನನಗೆ ಅವಕಾಶ ನೀಡಿರುವ ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಧನ್ಯವಾದಗಳು. ನಾನು ಹೀರೋ ಆಗಿ ಅಭಿನಯಿಸುತ್ತಿದ್ದೇನೆ. ಬೇರೆ ಪಾತ್ರಗಳನ್ನು ಮಾಡುವುದಿಲ್ಲ ಎಂದು ಭಾವಿಸಿ ಕೆಲವೊಂದು ಅವಕಾಶಗಳು ದೂರವಾಗಿತ್ತು. ನಾನೊಬ್ಬ ಕಲಾವಿದ. ಯಾವ ಪಾತ್ರವಾದರೂ ಮಾಡುವುದಷ್ಟೇ ನನ್ನ ಕೆಲಸ. ಮೊದಲ ಬಾರಿಗೆ ಕಾಮಿಡಿ ಬಿಟ್ಟು ಕ್ಲಾಸ್ ಹಾಗೂ ಮಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೀತಿ ಸಹಕಾರವಿರಲಿ" ಎಂದು ಕೇಳಿಕೊಂಡರು.

ನಾಯಕಿ ರಕ್ಷಾ ಮಾತನಾಡಿ, "ನಾನು ಮುಗ್ಧ ಹಳ್ಳಿ ಹುಡುಗಿಯ ಪಾತ್ರ ನಿರ್ವಹಿಸಿದ್ದೇನೆ. ಇದು ನನ್ನ ಚೊಚ್ಚಲ ಚಿತ್ರ ಎಂದು ತಿಳಿಸಿದರು. ಮತ್ತೋರ್ವ ನಟಿ ರೋಹಿ ಮಾತನಾಡುತ್ತಾ, ಅವಕಾಶ ಕೊಟ್ಟ ನಿರ್ಮಾಪಕ, ನಿರ್ದೇಶಕರಿಗೆ ಧನ್ಯವಾದಗಳು. ನಮ್ಮ ಚಿತ್ರ ನೋಡಿ ಹರಸಿ" ಎಂದರು.

ಇದನ್ನೂ ಓದಿ: ಪ್ರಭಾಸ್ ಫ್ಯಾನ್ಸ್‌ಗೆ ಗುಡ್‌ ನ್ಯೂಸ್: ನಾಳೆಯಿಂದ ಒಟಿಟಿಯಲ್ಲಿ 'ಸಲಾರ್' ಸ್ಟ್ರೀಮಿಂಗ್‌

ಚಿತ್ರಕ್ಕೆ ಸಂಗೀತ ನೀಡಿರುವ ವಿಶಾಲ್ ಆಲಾಪ್ ಮಾತನಾಡಿ, "ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿವೆ. ಸಂಗೀತ ನೀಡುವುದು ನನಗೆ ಚಾಲೆಂಜ್ ಆಗಿದ್ದು, ಬಹಳ ವಿಭಿನ್ನವಾಗಿ ಸಾಂಗ್ ಕಂಪೋಸ್ ಮಾಡಿದ್ದೇವೆ. ಒಂದೊಂದು ಹಾಡು ಕೂಡ ವಿಭಿನ್ನವಾಗಿ ಮೂಡಿ ಬಂದಿದೆ. ಗಾಯಕರು ಕೂಡ ಬಹಳ ಸೊಗಸಾಗಿ ಹಾಡಿದ್ದಾರೆ" ಎಂದರು. ಚಿತ್ರದ ಛಾಯಾಗ್ರಾಹಕ ದೀಪಕ್ ಕುಮಾರ್ ಮಾತನಾಡಿ, "ಜಾನಿ ಮಾಸ್ಟರ್ ಮೂಲಕ ನನಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಬಹಳ ಕಷ್ಟಪಟ್ಟು ಚಿತ್ರೀಕರಣ ಮಾಡಿದ್ದೇವೆ" ಎಂದು ತಿಳಿಸಿದರು.

ಇದನ್ನೂ ಓದಿ: 'ಆಪಲ್ ಕಟ್' ಟೀಸರ್‌ ಔಟ್: ಚಿತ್ರತಂಡಕ್ಕೆ ಅಶ್ವಿನಿ ಪುನೀತ್ ರಾಜ್‍ಕುಮಾರ್, ಯೋಗರಾಜ್‌ ಭಟ್‌ ಸಾಥ್‌

ನಿರ್ಮಾಪಕ ರಾಮು ಮಾತನಾಡಿ, "ನನಗೂ ಸಿನಿಮಾ ಮಾಡಬೇಕೆಂಬ ಆಸೆ ಇತ್ತು. ಒಂದು ಚಿತ್ರ ಮಾಡಿದರೆ ನಮಗೊಂದು ಹೆಸರು ಬರುತ್ತೆ ಎಂದೆನಿಸಿತ್ತು. ನೀವು ಈ ಚಿತ್ರವನ್ನು ವೀಕ್ಷಿಸಿ ಗೆಲ್ಲಿಸಿದರೆ, ವರ್ಷಕ್ಕೆ ಒಂದೆರಡು ಸಿನಿಮಾ ಮಾಡುವ ಆಸೆ ಇದೆ" ಎಂದರು. ಸಕಲೇಶಪುರ, ಹೊನ್ನಾವರ, ಮೂಡಬಿದ್ರೆ, ಕಾರ್ಕಳ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಚಿತ್ರದಲ್ಲಿ ಮೂರು ಸಾಹಸ ದೃಶ್ಯಗಳಿವೆ. ಚಿತ್ರವೀಗ ಸೆನ್ಸಾರ್ ಹಂತಕ್ಕೆ ಹೋಗಿದೆ. ಅತಿ ಶೀಘ್ರದಲ್ಲಿ ರಣಾಕ್ಷ ಸಿನಿಮಾ ಬೆಳ್ಳಿ ಪರದೆ ಮೇಲೆ ಬರಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.