ಅತಿ ಕಡಿಮೆ ಸಮಯದಲ್ಲಿ ಹೆಚ್ಚು ಜನಪ್ರಿಯರಾಗಿರುವ ನ್ಯಾಷನಲ್ ಕ್ರಶ್ ಖ್ಯಾತಿಯ ರಶ್ಮಿಕಾ ಮಂದಣ್ಣ ಕೆಂಪುಡುಗೆಯಲ್ಲಿ ಮಿಂಚುತ್ತಿದ್ದಾರೆ. ಇವರ ಹೊಸ ಡ್ರೆಸ್ ನೋಡಿ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಟಿಯ ಬೋಲ್ಡ್ ಲುಕ್ ನೋಡಿ ನೀವು ಸಖತ್ ಹಾಟ್ ಆಗಿ ಕಾಣಿಸುತ್ತಿದ್ದೀರಿ ಎಂದು ಬಣ್ಣಿಸಿದ್ದಾರೆ.
ಮುಂಬೈನಲ್ಲಿ ಆಯೋಜನೆಗೊಂಡಿದ್ದ ಫ್ಯಾಷನ್ ಶೋನಲ್ಲಿ ನಟಿ ರಶ್ಮಿಕಾ ಮಂದಣ್ಣ ಭಾಗಿಯಾಗಿದ್ದರು. ಈ ವೇಳೆ ಕೆಂಪು ಬಣ್ಣದ ಬಟ್ಟೆ ಹಾಕಿಕೊಂಡಿದ್ದ ಅವರ ಬೋಲ್ಡ್ ಲುಕ್ಗೆ ಎಲ್ಲರೂ ಫಿದಾ ಆಗಿದ್ದಾರೆ. ಇದರ ಫೋಟೋ ಕೂಡ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಕಳೆದ ಕೆಲ ತಿಂಗಳ ಹಿಂದೆ ನಡೆದ ನಿರ್ಮಾಪಕ ಕರಣ್ ಜೋಹರ್ ಹುಟ್ಟುಹಬ್ಬದಲ್ಲೂ ಕಪ್ಪು ಬಣ್ಣದ ಡ್ರೆಸ್ ಹಾಕಿಕೊಂಡು ರಶ್ಮಿಕಾ ಗಮನ ಸೆಳೆದಿದ್ದರು.
2016ರಲ್ಲಿ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪ್ರವೇಶ ಪಡೆದುಕೊಂಡಿರುವ ಕೊಡುಗಿನ ಕುವರಿ ರಶ್ಮಿಕಾ ಸದ್ಯ ಭಾರತೀಯ ಚಿತ್ರರಂಗದಲ್ಲಿ ಮಿಂಚು ಹರಿಸುತ್ತಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ತೆರೆ ಕಂಡ ಪುಷ್ಪ ಚಿತ್ರದಲ್ಲಿ ನಟ ಅಲ್ಲು ಅರ್ಜುನ್ ಜೊತೆ ನಾಯಕಿಯಾಗಿ ಕಾಣಿಸಿಕೊಂಡಿದ್ದರು.