ETV Bharat / entertainment

'ವೇದಾ' ಸಿನಿಮಾದ ಹಾಡಿನಲ್ಲಿ ಶಿವಣ್ಣ ಮಿಂಚು; ಊರ ಕಾಯುವ ಸೈನಿಕನಾದ ಕರುನಾಡ ಚಕ್ರವರ್ತಿ - Shivaraj kumar film sond update

ಪೋಸ್ಟರ್ ನಿಂದಲೇ ಕ್ರೇಜ್ ಹುಟ್ಟಿಸಿರುವ ವೇದಾ ಸಿನಿಮಾ ಕ್ರಿಸ್ಮಸ್ ಹಬ್ಬಕ್ಕೂ ಮುನ್ನ ಅಂದರೆ ಡಿಸೆಂಬರ್ 23ಕ್ಕೆ ಕನ್ನಡ, ತಮಿಳು ಮತ್ತು ತೆಲುಗು ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ವೇದಾ ಸಿನಿಮಾದ ಹಾಡಿನಲ್ಲಿ ಶಿವಣ್ಣ ಮಿಂಚು; ಊರ ಕಾಯುವ ಸೈನಿಕನಾದ ಕರುನಾಡ ಚಕ್ರವರ್ತಿ
Actor Shivaraj kumar film vedha song released
author img

By

Published : Nov 26, 2022, 10:40 AM IST

ಬೆಂಗಳೂರು: ಕರುನಾ ಚಕ್ರವರ್ತಿ ಶಿವರಾಜ್​ ಕುಮಾರ್​ ಅಭಿನಯದ ಬಹುನಿರೀಕ್ಷಿತ ಚಿತ್ರ 'ವೇದಾ' ಸಿನಿಮಾ ಪೋಸ್ಟರ್​ ಮೂಲಕವೇ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಚಿತ್ರದ ಒಂದೊಂದೇ ಪಾತ್ರಗಳನ್ನು ಪರಿಚಯಿಸಿದ್ದ ತಂಡ ಇದೀಗ ಮೊದಲ ಹಾಡನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಹಾಡಿನ ತುಣುಕನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಶಿವರಾಜ್ ಕುಮಾರ್ ಸಾಲ್ಟ್ ಅಂಡ್ ಪೇಪರ್ ಅವತಾರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳಲ್ಲಿ ಕೌತುಕ ಹೆಚ್ಚಿಸಿದೆ.

'ಯಾವನೋ ಇವನು ಗಿಲ್ಲಕೋ' ಎಂಬ ಹಾಡಿನಲ್ಲಿ ಹ್ಯಾಟ್ರಿಕ್ ಹೀರೋ ಊರ ಕಾಯುವ ಸೈನಿಕನಾಗಿ ಕಾಣಿಸಿಕೊಂಡಿದ್ದಾರೆ. ಈ ಪೂರ್ತಿ ಹಾಡು 27ರಂದು ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ. ಸದ್ಯ ಈ ಹಾಡಿನ ಸಣ್ಣ ಝಲಕ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಹಾಡಿಗೆ ಮಂಗ್ಲೀ ಧ್ವನಿಯಾಗಿದ್ದು, ಅರ್ಜುನ್​ ಜನ್ಯ ಸಂಗೀತ ನೀಡಿದ್ದಾರೆ. ಈ ಚಿತ್ರಕ್ಕೆ ಭಜರಂಗಿ ಹರ್ಷ ಆ್ಯಕ್ಷನ್ ಕಟ್ ಹೇಳಿದ್ದು, ಶಿವರಾಜ್ ಕುಮಾರ್- ಹರ್ಷ ಜೋಡಿಯ 4ನೇ ಚಿತ್ರ ಎಂಬುದು ಮತ್ತೊಂದು ವಿಶೇಷ.

ಈ ಸಿನಿಮಾದಲ್ಲಿ ಶಿವಣ್ಣ ಎರಡು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ 1960ರ ದಶಕದಲ್ಲಿ ನಡೆಯುವ ಕಥೆ ಹೊಂದಿದ್ದು, ಗಾನವಿ ಲಕ್ಷ್ಮಣ್, ಶ್ವೇತಾ ಚೆಂಗಪ್ಪ, ಅರುಣ್ ಸಾಗರ್ ಮಗಳು ಅದಿತಿ ಸಾಗರ್ ಹಾಗೂ ಅನುಪಮ ಕೂಡ ಚಿತ್ರತಂಡದಲ್ಲಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ಅನ್ನು ಬೆಂಕಿ ಕಿಚ್ಚಿನ ನಡುವೆ ರೂಪಿಸಲಾಗಿದ್ದು, ಚಿತ್ರಕಥೆ ಹೇಗೆ ಸಾಗಲಿದೆ ಎಂಬುದರ ಬಗ್ಗೆ ನಿರ್ದೇಶಕರು ಯಾವುದೇ ಗುಟ್ಟನ್ನೂ ಬಿಟ್ಟುಕೊಟ್ಟಿಲ್ಲ. ಇನ್ನುಳಿದಂತೆ ಕುರಿ ಪ್ರತಾಪ್, ಜಗ್ಗಪ್ಪ, ಉಮ್ರಾಶ್ರೀ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪೋಸ್ಟರ್ ನಿಂದಲೇ ಕ್ರೇಜ್ ಹುಟ್ಟಿಸಿರುವ ವೇದಾ ಸಿನಿಮಾ ಕ್ರಿಸ್ಮಸ್ ಹಬ್ಬಕ್ಕೂ ಮುನ್ನ ಅಂದರೆ ಡಿಸೆಂಬರ್ 23ಕ್ಕೆ ಕನ್ನಡ, ತಮಿಳು ಮತ್ತು ತೆಲುಗು ಮೂರು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ವೇದಾ ಚಿತ್ರವನ್ನು ಝೀ ಸ್ಟುಡಿಯೋಸ್​ ಜೊತೆಗೂಡಿ ಗೀತಾ ಸ್ಟುಡಿಯೋಸ್ ಮೂಲಕ ಗೀತಾ ಶಿವರಾಜ್ ಕುಮಾರ್ ನಿರ್ಮಿಸುತ್ತಿದ್ದು, ಇದೇ ಕಥೆಯ ಮೂಲಕ ಗೀತಾ ಶಿವರಾಜ್ ಕುಮಾರ್ ನಿರ್ಮಾಪಕಿಯಾಗುತ್ತಾರೆ. ಸದ್ಯ ಬಿಡುಗಡೆ ಆಗಿರುವ ಮೊದಲ ಹಾಡು ಸಖತ್ ಜೋಶ್​​ ನಿಂದ ಕೂಡಿದ್ದು ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿಸಿದೆ.

ಇದನ್ನೂ ಓದಿ: ತೆಲುಗು ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹ್ಯಾಟ್ರಿಕ್ ಹೀರೋ.. ಹೊಸ ಲುಕ್​ನಲ್ಲಿ ಮಿಂಚಲಿರುವ ಶಿವಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.