ETV Bharat / entertainment

ಅಭಿನಯ ಚಕ್ರವರ್ತಿ ಸುದೀಪ್ ಜನ್ಮದಿನಕ್ಕೆ ಅಭಿಮಾನಿಗಳಿಗೆ ಗಿಫ್ಟ್ - ಒಟಿಟಿಯಲ್ಲಿ ಪ್ರಸಾರವಾಗಲಿದೆ ವಿಕ್ರಾಂತ್ ರೋಣ ಸಿನಿಮಾ - Vikrant Rona movie

ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಜನ್ಮ ದಿನ. ಅಂದು ಪ್ರತಿಷ್ಠಿತ ಒಟಿಟಿ ಜೀ 5ನಲ್ಲಿ ವಿಕ್ರಾಂತ್ ರೋಣ ಸಿನಿಮಾ ಪ್ರಸಾರವಾಗಲಿದೆ.

Actor Sudeep birthday special Vikrant Rona movie on Zee5 OTT
ಒಟಿಟಿಯಲ್ಲಿ ಪ್ರಸಾರವಾಗಲಿದೆ ವಿಕ್ರಾಂತ್ ರೋಣ ಸಿನಿಮಾ
author img

By

Published : Aug 25, 2022, 1:39 PM IST

ಕಿಚ್ಚ ಸುದೀಪ್ ಸ್ಟೈಲಿಷ್ ಪೊಲೀಸ್ ಆಫೀಸರ್ ಆಗಿ, ಸಿಲ್ವರ್ ಸ್ಕ್ರೀನ್ ಮೇಲೆ ಅಬ್ಬರಿಸುತ್ತಿರೋ ಸಿನಿಮಾ ವಿಕ್ರಾಂತ್ ರೋಣ. ಜುಲೈ 28ರಿಂದ ವಿಶ್ವದಾದ್ಯಂತ 2,500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಂಡು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿರೋ ಸಿನಿಮಾ. ಮೊದಲ ದಿನವೇ ಬಾಕ್ಸ್ ಆಫೀಸ್​​ನಲ್ಲಿ ಕೊಳ್ಳೆ ಹೊಡೆದಿರೋ ವಿಕ್ರಾಂತ್ ರೋಣ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗಲು ಸಜ್ಜಾಗಿದೆ.

ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಕಿಚ್ಚನ ಕಾಂಬಿನೇಷನ್ ಬಂದ ವಿಕ್ರಾಂತ್ ರೋಣ ಸಿನಿಮಾ ಕೋಟಿ ಕೋಟಿ ಕಲೆಕ್ಷನ್ ಮಾಡಿ ಈ ವರ್ಷ ಬ್ಲಾಕ್ ಬಸ್ಟರ್ ಮೂವಿ ಎನಿಸಿಕೊಂಡಿದೆ. ಈ ಸಿನಿಮಾವನ್ನು ದೊಡ್ಡ ಪರದೆಯಲ್ಲಿ ಅಭಿಮಾನಿಗಳು ಕಣ್ಣು ತುಂಬಿಕೊಂಡಿದ್ದಾರೆ. ಇದೀಗ ಫ್ಯಾಮಿಲಿ ಸಮೇತ ಮನೆಯಲ್ಲಿ ನೋಡುವ ಸುವರ್ಣ ಅವಕಾಶ ಒದಗಿ ಬಂದಿದೆ.

ಸೆಪ್ಟೆಂಬರ್ 2ರಂದು ಕಿಚ್ಚ ಸುದೀಪ್ ಜನ್ಮ ದಿನ. ಅಂದು ಪ್ರತಿಷ್ಠಿತ ಒಟಿಟಿ ಜೀ5ನಲ್ಲಿ ವಿಕ್ರಾಂತ್ ರೋಣ ಚಿತ್ರ ಪ್ರಸಾರವಾಗಲಿದೆ. ಅದಕ್ಕೂ ಮುನ್ನ ಜೀ5 ಸ್ಪೆಷಲ್ ಟ್ರೈಲರ್ ಅನ್ನು ಅನಾವರಣ ಮಾಡಲಿದೆ‌. ಕನ್ನಡದಲ್ಲಿ ಮಾತ್ರ ವಿಕ್ರಾಂತ್ ರೋಣ ಜೀ5 ಒಟಿಟಿಯಲ್ಲಿ ಬಿಡುಗಡೆಯಾಗಲಿದ್ದು, ನಂತರ ಬೇರೆ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ.

ಇದನ್ನೂ ಓದಿ: ಬಹು ನಿರೀಕ್ಷಿತ ಲೈಗರ್​​ ಸಿನಿಮಾ ಬಿಡುಗಡೆ.. ಬಾಕ್ಸರ್ ಪಾತ್ರದಲ್ಲಿ ಅಬ್ಬರಿಸುತ್ತಿರುವ ನಟ ವಿಜಯ್ ದೇವರಕೊಂಡ

ಇನ್ನು ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್​ ಸುದೀಪ್ ಜೊತೆಗೆ ಹೆಜ್ಜೆ ಹಾಕಿದ್ದ ರಾ ರಾ ರಕ್ಕಮ್ಮ ಹಾಡು ಸೂಪರ್ ಹಿಟ್ ಲಿಸ್ಟ್ ಸೇರಿದೆ. ನಿರೂಪ್​ ಭಂಡಾರಿ, ನೀತಾ ಅಶೋಕ್​, ಮಿಲನ ನಾಗರಾಜ್​, ​ ಮಧುಸೂದನ್​ ರಾವ್​, ರವಿಶಂಕರ್ ಗೌಡ ಮುಂತಾದವರು ನಟಿಸಿದ್ದಾರೆ‌. ಅಜನೀಶ್​ ಬಿ. ಲೋಕನಾಥ್​ ಸಂಗೀತ ನಿರ್ದೇಶನ,‌ ಮಿಲಿಯಂ‌ ಡೇವಿಡ್ ಕ್ಯಾಮರಾ ವರ್ಕ್ ಈ ಚಿತ್ರಕ್ಕಿದೆ.

ಜ್ಯಾಕ್ ಮಂಜು ನಿರ್ಮಾಣದಲ್ಲಿ ಅದ್ಧೂರಿಯಾಗಿ ತಯಾರಾದ ವಿಕ್ರಾಂತ್ ರೋಣ ಜೀ5 ಒಟಿಟಿಗೆ ಎಂಟ್ರಿ ಕೊಡ್ತಿದ್ದು, ಥಿಯೇಟರ್​ನಲ್ಲಿ ಮಿಸ್ ಮಾಡಿಕೊಂಡವರು ಮನೆಯಲ್ಲೇ ಇಡೀ ಕುಟುಂಬಸ್ಥರೊಂದಿಗೆ ಕುಳಿತು ಸಿನಿಮಾ ಕಣ್ತುಂಬಿಕೊಳ್ಳಬಹುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.