ETV Bharat / entertainment

ಸಮಾಜದ ವ್ಯವಸ್ಥೆಯ ವಿರುದ್ಧ 'ಫೈಟರ್'​ ಆಗಿ ವಿನೋದ್​ ಪ್ರಭಾಕರ್​: ಚಿತ್ರದ ಟೀಸರ್​ ನೋಡಿ.. - etv bharat kannada

Fighter teaser released: ವಿನೋದ್ ಪ್ರಭಾಕರ್ ನಟನೆಯ 'ಫೈಟರ್' ಚಿತ್ರದ ಟೀಸರ್​ ಬಿಡುಗಡೆಯಾಗಿದೆ.

Actor Vinod Prabhakar starrer fighter movie teaser released
'ಫೈಟರ್'​
author img

By ETV Bharat Karnataka Team

Published : Aug 29, 2023, 10:18 AM IST

'ಮರಿ ಟೈಗರ್​' ಎಂದೇ ಫೇಮಸ್​ ಆಗಿರುವ ವಿನೋದ್ ಪ್ರಭಾಕರ್ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಬೇಡಿಕೆ ಹೊಂದಿರುವ ನಟ. 'ಲಂಕಾಸುರ' ಸಿನಿಮಾ ಗುಂಗಿನಲ್ಲಿರುವ ಅವರು 'ಫೈಟರ್​' ಆಗಿ ಬೆಳ್ಳಿ ತೆರೆಯಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಚಿತ್ರರಂಗದಲ್ಲಿ ಸಿಕ್ಸ್ ಪ್ಯಾಕ್ ಬಾಡಿ ಬಿಲ್ಡ್ ಮಾಡಿ ಸಿನಿ ಪ್ರೇಮಿಗಳ ಹೃದಯ ಕದ್ದಿರುವ ವಿನೋದ್ ಪ್ರಭಾಕರ್ ಸದ್ಯ ತಮ್ಮ ಹೊಸ ಚಿತ್ರ 'ಫೈಟರ್' ಜಪ ಮಾಡುತ್ತಿದ್ದಾರೆ. ಸೈಲೆಂಟ್ ಆಗಿ ಚಿತ್ರೀಕರಣ ಮುಗಿಸಿ ಬಿಡುಗಡೆ ಸಜ್ಜಾಗಿರುವ ಚಿತ್ರದ ಟೀಸರ್​ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ.

Actor Vinod Prabhakar starrer fighter movie teaser released
'ಫೈಟರ್'​ ಸಿನಿಮಾ

ಟೀಸರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ನೂತನ್ ಉಮೇಶ್, "ಈ ಚಿತ್ರದ ಶೀರ್ಷಿಕೆಯನ್ನು ವಿನೋದ್ ಪ್ರಭಾಕರ್ ಅವರ ಅಭಿಮಾನಿಗಳೇ ಅನಾವರಣ ಮಾಡಿದ್ದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಹೂರ್ತಕ್ಕೆ ಆಗಮಿಸಿ ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಟೀಸರನ್ನು ನಿರ್ಮಾಪಕರ ತಂದೆ ಬಿಡುಗಡೆ ಮಾಡಿದ್ದಾರೆ. ಸದ್ಯದಲ್ಲೇ ಹಾಡುಗಳು ಹಾಗೂ ಟ್ರೇಲರ್ ಹೊರಬರಲಿದೆ" ಎಂದು ತಿಳಿಸಿದರು.

"ಫೈಟರ್ ಎಂದರೆ ಹೊಡೆದಾಡುವವನು ಎಂದು ತಿಳಿದುಕೊಳ್ಳುತ್ತಾರೆ. ಆದರೆ ನಮ್ಮ ಫೈಟರ್ ಅನ್ಯಾಯದ ವಿರುದ್ಧ ಹಾಗೂ ತನ್ನ ಕುಟುಂಬಕ್ಕಾಗಿ ಹೋರಾಡುವವನು.‌ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ನಿರ್ಮಾಪಕ ಸೋಮಶೇಖರ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಗುರುಕಿರಣ್ ಸಂಗೀತ ನೀಡಿದ್ದಾರೆ‌. ಪಾವನ ಹಾಗೂ ಲೇಖಾ ಚಂದ್ರ ನಾಯಕಿಯರಾಗಿ ನಟಿಸಿದ್ದಾರೆ. ಸುಮಾರು ವರ್ಷಗಳ ನಂತರ ನಟಿ ನಿರೋಷ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ" ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದರು.

'ಫೈಟರ್'​ ಚಿತ್ರತಂಡ

ಇದನ್ನೂ ಓದಿ: ಮೇಘನಾರಾಜ್​ ಅಭಿನಯದ 'ತತ್ಸಮ ತದ್ಭವ' ಸೆಪ್ಟೆಂಬರ್​ 15ರಂದು ತೆರೆಗೆ

ನಟ ವಿನೋದ್ ಪ್ರಭಾಕರ್ ಮಾತನಾಡಿ, "ಫೈಟರ್​ನಲ್ಲಿ ಬರೀ ಹೋರಾಟ ಹಾಗೂ ಹೊಡೆದಾಟವಿಲ್ಲ. ತಂದೆ- ತಾಯಿ ಹಾಗೂ ಮಗನ ಬಾಂಧವ್ಯದ ಸನ್ನಿವೇಶಗಳು ಎಲ್ಲರ ಮನ ಮುಟ್ಟಲಿದೆ. ಜೊತೆಗೆ ಥ್ರಿಲ್ಲರ್ ಅಂಶಗಳನ್ನು ಒಳಗೊಂಡ ಕೌಟುಂಬಿಕ ಮನರಂಜನೆಯ ಚಿತ್ರ ಇದಾಗಿದೆ. ನನ್ನನ್ನು ನಿರ್ದೇಶಕರು ನನ್ನ ಹಿಂದಿನ ಚಿತ್ರಗಳಿಗಿಂತ ತುಂಬಾನೇ ಸ್ಟೈಲಿಷ್ ಆಗಿ ತೋರಿಸಿದ್ದಾರೆ. ನಿರ್ಮಾಪಕರು ಯಾವುದಕ್ಕೂ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ಸಮಾಜದ ವ್ಯವಸ್ಥೆಯ ವಿರುದ್ಧ ಹೋರಾಡುವ ಫೈಟರ್ ಆಗಿ ಕಾಣಿಸಿಕೊಂಡಿದ್ದೇನೆ" ಎಂದರು.

  • " class="align-text-top noRightClick twitterSection" data="">

ವಿನೋದ್ ಪ್ರಭಾಕರ್ ಜೊತೆ ನಾಯಕಿಯರಾದ ಲೇಖಾ ಚಂದ್ರ ಹಾಗೂ ಪಾವನ ಸ್ಕ್ರೀನ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಎರಡೂ ವಿಭಿನ್ನ ಹಾಡುಗಳಿದ್ದು, ಸಂಗೀತ ನಿರ್ದೇಶಕ ಗುರುಕಿರಣ್ ಮ್ಯೂಜಿಕ್ ಕಂಪೋಸ್ ಮಾಡಿದ್ದಾರೆ. ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು 'ಫೈಟರ್' ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ನೂತನ್ ಉಮೇಶ್ ನಿರ್ದೇಶನವಿದ್ದು, ಸೋಮಶೇಖರ್ ಕಟ್ಟಿಗೇನಹಳ್ಳಿ ಬಂಡವಾಳ ಹಾಕಿದ್ದಾರೆ. ಸದ್ಯ ಟೀಸರ್​ನಿಂದ ಸದ್ದು ಮಾಡುತ್ತಿರುವ 'ಫೈಟರ್' ಸಿನಿಮಾವನ್ನು ಅಕ್ಟೋಬರ್​ನಲ್ಲಿ ತೆರೆಗೆ ತರಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

ಇದನ್ನೂ ಓದಿ: 'ನಮೋ ಭೂತಾತ್ಮ 2'ಸಕ್ಸಸ್​ ಬಳಿಕ ಹೊಸ ಚಿತ್ರಗಳ ನಿರ್ದೇಶನದತ್ತ ಮುರಳಿ ಮಾಸ್ಟರ್ ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.