ETV Bharat / entertainment

ಗತವೈಭವ ಸಿನಿಮಾದಲ್ಲಿ ಆಶಿಕಾ ದೇವಕನ್ಯೆ.. ನಟಿಯ ಲುಕ್ ರಿವೀಲ್,​​ ಅಭಿಮಾನಿಗಳು ಫಿದಾ - ashika next films

ಗತವೈಭವ ಸಿನಿಮಾದಲ್ಲಿ ಆಶಿಕಾ ದೇವಕನ್ಯೆ ಆಗಿ ಮಿಂಚಲಿದ್ದಾರೆ. ನಿರ್ದೇಶಕ ಸಿಂಪಲ್ ಸುನಿ ನಾಯಕಿಯ ಲುಕ್ಅನ್ನು ರಿವೀಲ್ ಮಾಡಿದ್ದಾರೆ.

actress ashika look of gatavaibhava film reveled
ಗತವೈಭವ ಸಿನಿಮಾದಲ್ಲಿ ಆಶಿಕಾ ದೇವಕನ್ಯೆ...ನಟಿ ಲುಕ್​ಗೆ ಅಭಿಮಾನಿಗಳು ಫಿದಾ
author img

By

Published : Aug 4, 2022, 7:17 PM IST

ಸ್ಯಾಂಡಲ್ ವುಡ್ ಪ್ರತಿಭಾನ್ವಿತ ನಿರ್ದೇಶಕ ಸಿಂಪಲ್ ಸುನಿ ಭತ್ತಳಿಕೆಯ ಬಹು ನಿರೀಕ್ಷಿತ ಸಿನಿಮಾ ಗತವೈಭವ. ಈ ಸಿನಿಮಾ ಮೂಲಕ ಗುಬ್ಬಿ ಕ್ಷೇತ್ರದ ಶಾಸಕ ಎಸ್‌.ಆರ್‌. ಶ್ರೀನಿವಾಸ್‌ ಪುತ್ರ ದುಶ್ಯಂತ್ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈಗಾಗಲೇ ವಿಭಿನ್ನವಾಗಿ ದುಶ್ಯಂತ್ ಇಂಟ್ರುಡಕ್ಷನ್ ಟೀಸರ್ ರಿಲೀಸ್ ಮಾಡಿದ್ದ ಸುನಿ ಈಗ ನಾಯಕಿಯನ್ನು ಚಿತ್ರ ಪ್ರೇಮಿಗಳಿಗೆ ಪರಿಚಯಿಸಿದ್ದಾರೆ.

gatavaibhava film
ಗತವೈಭವ ಚಿತ್ರದ ನಟ-ನಟಿ

ಆಶಿಕಾ ಇಂಟ್ರುಡಕ್ಷನ್ ಟೀಸರ್: ಗತವೈಭವ ಸಿನಿಮಾಗೆ ನಾಯಕಿ ಯಾರು ಆಗ್ತಾರೆ ಎಂಬ ಕುತೂಹಲಕ್ಕೆ ಈಗ ಉತ್ತರ ಸಿಕ್ಕಿದೆ. ಹೀರೋ ಇಂಟ್ರುಡಕ್ಷನ್ ಟೀಸರ್ ದಾಟಿಯಲ್ಲಿಯೇ ಸುನಿ ತಮ್ಮದೇ ಸ್ಟೈಲ್​ನಲ್ಲಿ ನಾಯಕಿಯನ್ನು ಪರಿಚಯಿಸಿದ್ದಾರೆ. ಹೊಸ ಹೀರೋಗೆ ಆಶಿಕಾ ಹೀರೋಯಿನ್ ಆಗಲು ಸುನಿ ಹೇಗೆ ಒಪ್ಪಿಸಿದ್ರೂ ಅನ್ನೋದನ್ನು ಸಣ್ಣದೊಂದು ಝಲಕ್ ಮೂಲಕ ತೋರಿಸಿಕೊಟ್ಟಿದ್ದಾರೆ. ವಿಡಿಯೋ ಕೊನೆಯಲ್ಲಿ ನಾಯಕಿ ಆಶಿಕಾ ಲುಕ್ ರಿವೀಲ್ ಮಾಡಿದ್ದು, ದೇವಕನ್ಯೆ ಗೆಟಪ್​ನಲ್ಲಿ ಮಿಂಚಿದ್ದಾರೆ.

ಆಶಿಕಾ ಇಂಟ್ರುಡಕ್ಷನ್ ಟೀಸರ್

ಇದನ್ನೂ ಓದಿ: ವಿಕ್ರಾಂತ್​ ರೋಣ ಸೂಕ್ಷ್ಮವಿಲ್ಲದ ಚಿತ್ರ; ಸ್ಯಾಂಡಲ್​ವುಡ್​ನಲ್ಲಿ ಸದ್ದು ಮಾಡಿದ ನಟ ಚೇತನ್​ ಟ್ವೀಟ್​

ರೋಮ್ಯಾಂಟಿಕ್ ಲವ್ ಸ್ಟೋರಿ ಗತವೈಭವ ಸಿನಿಮಾದಲ್ಲಿ ಸೈಂಟಿಫಿಕ್ ಥ್ರಿಲ್ಲರ್ ಕಂಟೆಂಟ್ ಕೂಡ ಇರಲಿದೆ. ಚಿತ್ರದಲ್ಲಿ ಆಶಿಕಾ ದುಶ್ಯಂತ್​ಗೆ ಜೋಡಿಯಾಗಿ ನಟಿಸಲಿದ್ದು, ದೇವಕನ್ಯೆ ಹಾಗೂ ಪೋರ್ಚುಗೀಸ್ ಯುವತಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಿಕ್ ಹಾಗೂ ಸುನಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ವಿಲಿಯಂ ಡೇವಿಡ್ ಕ್ಯಾಮರಾ ವರ್ಕ್, ಜೂಡಾ ಸ್ಯಾಂಡಿ ಸಂಗೀತ ಚಿತ್ರಕ್ಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.