ETV Bharat / entertainment

'ಆಪರೇಷನ್ ಲಂಡನ್ ಕೆಫೆ' ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ಬರ್ತ್‌ಡೇ ಗರ್ಲ್‌ ಮೇಘಾ ಶೆಟ್ಟಿ - ಈಟಿವಿ ಭಾರತ್​ ಕನ್ನಡ ನ್ಯೂಸ್

ಕನ್ನಡ ಸೇರಿದಂತೆ ಆರು ಭಾಷೆಗಳಲ್ಲಿ ತೆರೆಗೆ ಬರಲು ಸಿದ್ದವಾಗುತ್ತಿರುವ 'ಆಪರೇಷನ್ ಲಂಡನ್ ಕೆಫೆ' ಸಿನಿಮಾ ಚಿತ್ರೀಕರಣ ಮುಗಿದಿದೆ.

ಆಪರೇಷನ್ ಲಂಡನ್ ಕೆಫೆ
ಆಪರೇಷನ್ ಲಂಡನ್ ಕೆಫೆ
author img

By

Published : Aug 4, 2023, 10:10 PM IST

ಸ್ಯಾಂಡಲ್​ವುಡ್‌ನಲ್ಲಿ ಈ ವರ್ಷ ತೆರೆ ಕಾಣುತ್ತಿರುವ ಚಿತ್ರಗಳ ಪೈಕಿ ಅತಿ ಹೆಚ್ಚು ಕುತೂಹಲ ಮೂಡಿಸುತ್ತಿರುವ ಆಕ್ಷನ್ ಪ್ಯಾಕೇಜ್ ಸಿನಿಮಾ ಎಂದರೆ ಅದು ಆಪರೇಷನ್ ಲಂಡನ್ ಕೆಫೆ. ಯುವನಟ ಕವೀಶ್ ಶೆಟ್ಟಿ ಮತ್ತು ನಟಿ ಮೇಘಾ ಶೆಟ್ಟಿ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಕನ್ನಡ, ಮರಾಠಿ ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ನಿರ್ಮಾಣವಾಗುತ್ತಿದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಆಪರೇಷನ್ ಲಂಡನ್ ಕೆಫೆ ಚಿತ್ರದ ಡಬ್ಬಿಂಗ್ ಹಂತದ ಚಟುವಟಿಕೆಗಳು ಭರದಿಂದ ಸಾಗುತ್ತಿದೆ.

ಇನ್ನೊಂದೆಡೆ, ಚಿತ್ರೀಕರಣ ಮುಗಿಸಿರುವ ಖುಷಿಯಲ್ಲಿ ನಟಿ ಮೇಘಾ ಶೆಟ್ಟಿ ತಮ್ಮ ಹುಟ್ಟುಹಬ್ಬದ ಸಂಭ್ರಮ ಆಚರಿಸಿಕೊಳ್ಳುತ್ತಿದ್ದಾರೆ. ಚಿತ್ರವನ್ನು ಸಡಗರ ರಾಘವೇಂದ್ರ ನಿರ್ದೇಶಿಸುತ್ತಿದ್ದಾರೆ. ಡಿ.ನಾಗಾರ್ಜುನ್ ಛಾಯಾಗ್ರಹಣ, ಪ್ರಾನ್ಷು ಝಾ ಸಂಗೀತ, ಕೆ.ಎಂ.ಪ್ರಕಾಶ್ ಸಂಕಲನ ವರದರಾಜ್ ಕಾಮತ್ ಕಲೆ, ವಿಕ್ರಂ ಮೋರ್ ಮಾಸ್ ಮಾದ ಸಾಹಸ, ಕವಿರಾಜ್, ವಿ.ನಾಗೇಂದ್ರ ಪ್ರಸಾದ್ ಮತ್ತು ಕ್ಷಿತಿಜ್ ಪಟವರ್ಧನ್ ಸಾಹಿತ್ಯ ಚಿತ್ರಕ್ಕಿದೆ. ಚಿತ್ರದಲ್ಲಿ ಮರಾಠಿಯ ಹೆಸರಾಂತ ಶಿವಾನಿ ಸುರ್ವೆ, ವಿರಾಟ್ ಮಡಕೆ ಸಹಿತ ಅರ್ಜುನ್ ಕಾಪಿಕ್ಕಾಡ್ ಬಿ. ಸುರೇಶ್ ಇನ್ನಿತರ ಹೆಸರಾಂತ ಕಲಾವಿದರು ಬಣ್ಣ ಹಚ್ಚಿದ್ದಾರೆ.

ನಟಿ ಮೇಘಾ ಶೆಟ್ಟಿ
ನಟಿ ಮೇಘಾ ಶೆಟ್ಟಿ

ಸದ್ಯದಲ್ಲೇ ಚಿತ್ರಕ್ಕೆ ಸಂಬಂಧಿಸಿದ ಇನ್ನಷ್ಟು ಸಿಹಿ ಸುದ್ಧಿಯನ್ನು ಹಂಚಿಕೊಳ್ಳುವುದಾಗಿ ಹೇಳಿಕೊಂಡ ನಿರ್ದೇಶಕರು ಈ ಮೂಲಕ ಹುಟ್ಟುಹಬ್ಬದ ಖುಷಿಯನ್ನು ಆಚರಿಸಿಕೊಳ್ಳುತ್ತಿರುವ ಮೇಘಾ ಶೆಟ್ಟಿಗೆ ಇಡೀ ಚಿತ್ರತಂಡದ ಪರವಾಗಿ ಶುಭಾಶಯ ಕೋರಿದ್ದಾರೆ. ಇಂಡಿಯನ್ ಫಿಲ್ಮ್ ಫ್ಯಾಕ್ಟರಿ ಮತ್ತು ದೀಪಕ್ ರಾಣೆ ಫಿಲ್ಮ್ಸ್ ಲಾಂಛನದಡಿ ವಿಜಯ್ ಕುಮಾರ್ ಶೆಟ್ಟಿ ,ಹವರಾಲ್ ರಮೇಶ್ ಕೊಠಾರಿ ಮತ್ತು ದೀಪಕ್ ರಾಣೆ ಅದ್ದೂರಿಯಾಗಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ : Raj B Shetty: 'ಟೋಬಿ' ಟ್ರೇಲರ್​ ರಿಲೀಸ್​: ರಾಜ್​ ಬಿ ಶೆಟ್ಟಿ ಹೊಸ ಸಿನಿಮಾ ಮೇಲೆ ಭಾರಿ ಕುತೂಹಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.