ETV Bharat / entertainment

ಸಪ್ತ ಭಾಷೆಗಳಲ್ಲಿ 'ಅಜಾಗ್ರತ'ರಾಗಿ ಬರ್ತಿದಾರೆ ಸ್ಯಾಂಡಲ್​ವುಡ್​ ಸ್ವೀಟಿ ರಾಧಿಕಾ

author img

By

Published : May 6, 2023, 11:36 AM IST

ಸ್ಯಾಂಡಲ್​ವುಡ್​ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಅವರು 'ಅಜಾಗ್ರತ' ಸಿನಿಮಾದಲ್ಲಿ ನಟಿಸಲು ಸಜ್ಜಾಗಿದ್ದಾರೆ.

ajagratha
ಅಜಾಗ್ರತ

ಸೌಂದರ್ಯ ಹಾಗೂ ಅಭಿನಯದಿಂದಲೇ ಕನ್ನಡ ಸಿನಿಮಾರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ನಟಿ ರಾಧಿಕಾ ಕುಮಾರಸ್ವಾಮಿ.‌ ಸದ್ಯ ಮಹಿಳಾ ಪ್ರಧಾನ ಚಿತ್ರಗಳಲ್ಲಿ ಹೆಚ್ಚಾಗಿ ನಟಿಸುತ್ತಿರುವ ಸ್ವೀಟಿ ರಾಧಿಕಾ 'ರವಿ ಬೋಪಣ್ಣ' ಚಿತ್ರದ ಬಳಿಕ ಸದ್ಯ ಸಪ್ತ ಭಾಷೆಗಳಲ್ಲಿ ಸಿನಿಮಾ‌ ಮಾಡಲು ಸಿದ್ಧರಾಗಿದ್ದಾರೆ. ಈ‌ ಚಿತ್ರಕ್ಕೆ 'ಅಜಾಗ್ರತ' ಎಂದು ಟೈಟಲ್ ಇಡಲಾಗಿದ್ದು, ಇದೊಂದು ಸೈಕಾಲಜಿಕಲ್ ಕ್ರೈಂ ಥ್ರಿಲ್ಲೆರ್ ಕಥೆ ಹೊಂದಿರುವ ಚಿತ್ರವಾಗಿದೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ‌.‌ ಇತ್ತೀಚೆಗೆ 'ಅಜಾಗ್ರತ' ಚಿತ್ರದ ಮುಹೂರ್ತ ಹೈದರಾಬಾದ್​ನ ರಾಮನಾಯ್ಡು ಸ್ಟುಡಿಯೋದಲ್ಲಿ ನಡೆದಿದೆ. ಈ ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ ಅಲ್ಲದೆ ಸ್ಪರ್ಶ ರೇಖಾ, ದೇವರಾಜ್, ಸುಚೇಂದ್ರ ಪ್ರಸಾದ್, ವಿನಯ್ ಪ್ರಸಾದ್, ಚಿತ್ರ ಶೆಣೈ, ಮುಂತಾದವರು ಅಭಿನಯಿಸುತ್ತಿದ್ದಾರೆ.

ಹಾಗೆಯೇ ತೆಲುಗು ಚಿತ್ರರಂಗದ ರಾವ್ ರಮೇಶ್, ಪುಷ್ಪ ಸುನಿಲ್, ರಾಘವೇಂದ್ರ ಶ್ರವಣ್, ಕಾಲಿವುಡ್ ಚಿತ್ರರಂಗದಿಂದ ಆದಿತ್ಯ ಮೆನನ್, ಸಮುದ್ರ ಕಣಿ, ಜಯ ಪ್ರಕಾಶ್ ಮತ್ತು ಬಾಲಿವುಡ್​ನ ಶ್ರೇಯಸ್ ತಲಪಾಡೆ ನಾಯಕ ನಟನಾಗಿ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ರವಿರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಯುವ ನಿರ್ದೇಶಕ ಎಂ ಶಶಿಧರ್ ನಿರ್ದೇಶಿಸುತ್ತಿದ್ದಾರೆ.

ಇದನ್ನೂ ಓದಿ: ಸಲ್ಮಾನ್-ಶಾರುಖ್​ನ ಆ ಒಂದು ಸೀನ್​ಗೆ 35 ಕೋಟಿಯ ಸೆಟ್​ ನಿರ್ಮಾಣ.. ಹಾಗಾದ್ರೆ ನಟರ ಸಂಭಾವನೆ?

ಎಂ.ಎಸ್.ಸಿ.ಇನ್ ಫಿಲಂ ಮೇಕಿಂಗ್ ಕಲಿತಿರುವ ನಿರ್ದೇಶಕ ಶಶಿಧರ್ ವಿ, ಎಫ್.ಎಕ್ಸ್ ನಲ್ಲೂ ಪರಿಣತಿ ಹೊಂದಿದ್ದಾರೆ. ಅಶ್ವಿನಿ ರಾಮ್ ಪ್ರಸಾದ್ ಅವರ ಪುತ್ರ ಅರುಣ್ ರಾಮ್ ಪ್ರಸಾದ್ ಅಭಿನಯದ 'ಘಾರ್ಗ' ಚಿತ್ರವನ್ನು ನಿರ್ದೇಶಿಸಿರುವ ಶಶಿಧರ್ ಅವರಿಗೆ ಇದು ಎರಡನೇ ನಿರ್ದೇಶನದ ಚಿತ್ರವಾಗಿದೆ. ಚಿತ್ರ ಪ್ರೇಮಿಗಳಿಗೆ ಹೊಸ ಅನುಭವ ಕೊಡಲು ಅವರವರ ಭಾಷೆಯಲ್ಲಿ ಚಿತ್ರೀಕರಿಸಿ, ಅವರವರ ಭಾಷೆಯಲ್ಲೇ 'ಅಜಾಗ್ರತ' ಸಿನಿಮಾವನ್ನು ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ.

14ನೇ ವಯಸ್ಸಿಗೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಸ್ಟಾರ್​ ನಟಿಯಾಗಿ ಮಿಂಚುತ್ತಿರುವವರು ರಾಧಿಕಾ ಕುಮಾರಸ್ವಾಮಿ. ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಸೃಜನ್ ಲೋಕೇಶ್ ಜೊತೆ 'ನೀಲಮೇಘಶ್ಯಾಮ' ಚಿತ್ರದ ಮೂಲಕ ತಮ್ಮ ಕರಿಯರ್ ಆರಂಭಿಸಿದರು. ಈ ಸಿನಿಮಾ ಹೇಳುವಷ್ಟು ಹೆಸರು ಮಾಡದಿದ್ದರೂ, ಇದರ ನಂತರ ನಟ ವಿಜಯ್ ರಾಘವೇಂದ್ರ ಜೊತೆ ನಟಿಸಿದ 'ನಿನಗಾಗಿ' ಸಿನಿಮಾ ರಾಧಿಕಾರಿಗೆ ಒಳ್ಳೆ ಹೆಸರು ತಂದುಕೊಟ್ಟಿತು.

ನಂತರ ತವರಿಗೆ ಬಾ ತಂಗಿ, ಪ್ರೇಮಕೈದಿ, ಮಣಿ, ತಾಯಿ ಇಲ್ಲದ ತಬ್ಬಲಿ, ಮಸಾಲಾ, ಆಟೋ ಶಂಕರ್, ಮಂಡ್ಯ, ಅನಾಥರು, ಸ್ವೀಟಿ ನನ್ನ ಜೋಡಿ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದರು. ಸಿನಿಮಾ ನಿರ್ಮಾಣದ ವಿಷಯಕ್ಕೆ ಬಂದರೆ, ಯಶ್ ಹಾಗೂ ರಮ್ಯ ಅಭಿನಯದ 'ಲಕ್ಕಿ' ಹಾಗೂ ಆದಿತ್ಯ ಜೊತೆ ತಾವು ನಟಿಸಿದ್ದ 'ಸ್ವೀಟಿ ನನ್ನ ಜೋಡಿ' ಚಿತ್ರವನ್ನು ರಾಧಿಕಾ ನಿರ್ಮಾಣ ಮಾಡಿದ್ದಾರೆ. ಕನ್ನಡ ಚಿತ್ರರಂಗ ಮಾತ್ರವಲ್ಲದೇ ತೆಲುಗು, ತಮಿಳು ಚಿತ್ರಗಳಲ್ಲಿ ಕೂಡಾ ರಾಧಿಕಾ ಹೆಸರು ಮಾಡಿದ್ದಾರೆ.

ಮದುವೆಯಾಗಿ ಒಂದು ಮಗುವಾದ ನಂತರ ಕೆಲ ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರ ಉಳಿದಿದ್ದರು. ಮತ್ತೆ ದಮಯಂತಿ ಚಿತ್ರದ ಮೂಲಕ ಕಮ್ ಬ್ಯಾಕ್ ಮಾಡಿದ್ದರು. ಇದೀಗ ಸಪ್ತಭಾಷೆಗಳಲ್ಲಿ ಸಿನಿಮಾ‌ ಮಾಡಲು ಸಿದ್ಧರಾಗಿದ್ದಾರೆ.

ಇದನ್ನೂ ಓದಿ: ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ಶಿವಕಾರ್ತಿಕೇಯನ್ - ಸಾಯಿಪಲ್ಲವಿ: ಕಾಶ್ಮೀರದಲ್ಲಿ ಶೂಟಿಂಗ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.