ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅಸಭ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ದಿವ್ಯ ಸ್ಪಂದನ ಹೆಸರಿನಲ್ಲಿರುವ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಇತ್ತೀಚೆಗೆ ಪೋಸ್ಟ್ ಮಾಡಿದ ಫೋಟೋಗಳಿಗೆ ಕೆಲವರು ಕಮೆಂಟ್ ಮಾಡಿ ನಿಂದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿಂದೆಯೂ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದವರ ವಿರುದ್ಧ ರಮ್ಯಾ ದೂರು ನೀಡಿದ್ದರು.
ಇದನ್ನೂ ಓದಿ: 'ಗೋದ್ರಾ' ಟೈಟಲ್ ಕೈ ಬಿಟ್ಟು 'ಡಿಯರ್ ವಿಕ್ರಂ' ಆದ ನೀನಾಸಂ ಸತೀಶ್