ETV Bharat / entertainment

‘ಎಲ್ಲೋ ಜೋಗಪ್ಪ ನಿನ್ನರಮನೆ'ಗೆ ನಟಿ ಸಂಜನಾ ದಾಸ್​ ಆಗಮನ​ - ಈಟಿವಿ ಭಾರತ ಕನ್ನಡ

'ಎಲ್ಲೋ ಜೋಗಪ್ಪ ನಿನ್ನರಮನೆ' ಸಿನಿಮಾದಲ್ಲಿ ನಟಿ ಸಂಜನಾ ದಾಸ್​ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

sanjana
ನಟಿ ಸಂಜನಾ ದಾಸ್
author img

By

Published : Mar 20, 2023, 8:09 PM IST

'ಎಲ್ಲೋ ಜೋಗಪ್ಪ ನಿನ್ನರಮನೆ' ಹಾಡು ಇಂದಿಗೂ ಫೇಮಸ್​ ಆಗಿದೆ. ಆದರೆ ಇದೇ ಶೀರ್ಷಿಕೆಯನ್ನು ಇಟ್ಟುಕೊಂಡು ಕನ್ನಡದಲ್ಲಿ ಸಿನಿಮಾವೊಂದು ತಯಾರಾಗುತ್ತಿದೆ. ಹಯವದನ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚೊಚ್ಚಲ ಸಿನಿಮಾ ಎಲ್ಲೋ ಜೋಗಪ್ಪ ನಿನ್ನರಮನೆ ಟೈಟಲ್​ನಿಂದಲೇ ಕುತೂಹಲ ಮೂಡಿಸುತ್ತಿದೆ. ಜೊತೆಗೆ ಚಿತ್ರದ ಫಸ್ಟ್​ ಲುಕ್​ ಸಿನಿ ಪ್ರಿಯರ ಗಮನ ಸೆಳೆದಿದೆ.

ಅಲ್ಲದೇ ಚಿತ್ರತಂಡ ಸಿನಿಮಾ ನಾಯಕಿಯನ್ನು ಇತ್ತೀಚೆಗಷ್ಟೇ ಪರಿಚಯಿಸಿತ್ತು. ಇದೀಗ ಮತ್ತೊಬ್ಬ ಪ್ರತಿಭಾನ್ವಿತ ನಟಿ ಸಿನಿಮಾ ತಂಡವನ್ನು ಸೇರಿಕೊಂಡಿದ್ದಾರೆ. ಈಗಾಗಲೇ ವೆನ್ಯಾ ರೈ ಎಂಬ ಯುವ ಪ್ರತಿಭೆಯನ್ನು ನಾಯಕಿಯಾಗಿ ಪರಿಚಯಿಸಿರುವ ಸಿನಿಮಾ ತಂಡ ಇದೀಗ ಚಿತ್ರಕ್ಕೆ ಮತ್ತೊಬ್ಬ ನಟಿ ಸಂಜನಾ ದಾಸ್​ರನ್ನು ಕರೆ ತಂದಿದೆ. ಕನ್ನಡದಲ್ಲಿ ‘ಕೆಟಿಎಂ’, ‘ಮೂನ್ ವಾಕ್’ ಹಾಗೂ ಮಲಯಾಳಂ ನಲ್ಲಿ ‘ಮನಸ್ಮಿತ’ ಸಿನಿಮಾದಲ್ಲಿ ನಟಿಸಿರುವ ಸಂಜನಾ ದಾಸ್ ಅನೇಕ ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದಾರೆ. ಇದೀಗ ಹಯವದನ ನಿರ್ದೇಶನದ 'ಎಲ್ಲೋ ಜೋಗಪ್ಪ ನಿನ್ನರಮನೆ' ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಎಲ್ಲೋ ಜೋಗಪ್ಪ ನಿನ್ನರಮನೆ ಸಿನಿಮಾ ತಂಡವು ಮಹಾರಾಷ್ಟ್ರದಲ್ಲಿಎರಡನೇ ಹಂತದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದೆ. ಚಿತ್ರದಲ್ಲಿ ‘ಕಂಬ್ಳಿಹುಳ’ ಖ್ಯಾತಿಯ ಅಂಜನ್ ನಾಗೇಂದ್ರ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ತಂದೆ ಮಗನ ಬಾಂಧವ್ಯದ ಜೊತೆಗೆ ಪ್ರೇಮ್ ಕಹಾನಿ, ಕಾಮಿಡಿ ಹಾಗೂ ಸೆಂಟಿಮೆಂಟ್ ಎಲಿಮೆಂಟ್ ಗಳನ್ನು ಒಳಗೊಂಡ ಕಥೆ ಇದಾಗಿದೆ. ಚಿತ್ರದಲ್ಲಿ ಶರತ್ ಲೋಹಿತಾಶ್ವ, ಸ್ವಾತಿ, ದಾನಪ್ಪ, ಲಕ್ಷ್ಮೀ ನಾಡ ಗೌಡ, ದಿನೇಶ್ ಮಂಗಳೂರು, ಬಿರಾದರ್ ಒಳಗೊಂಡ ದೊಡ್ಡ ತಾರಾ ಬಳಗವಿದೆ.

ಇದನ್ನೂ ಓದಿ: 50 ದೇಶ, 5 ಭಾಷೆ: ಎರಡೇ ದಿನಕ್ಕೆ 100‌ ಕೋಟಿ ರೂಪಾಯಿ ಕ್ಲಬ್ ಸೇರಿದ‌ 'ಕಬ್ಜ'

ಪೆಂಡೋರಾಸ್ ಬಾಕ್ಸ್ ಪ್ರೊಡಕ್ಷನ್ ಹಾಗೂ ಕೃಷ್ಣಛಾಯ ಚಿತ್ರ ಬ್ಯಾನರ್ ಅಡಿ ಪವನ್ ಸಿಮಿಕೇರಿ ಮತ್ತು ಸಿಂಧು ಹಯವದನ ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಶಿವ ಪ್ರಸಾದ್ ಸಂಗೀತ ಸಂಯೋಜನೆ, ನಟರಾಜ್ ಮದ್ದಾಲ ಕ್ಯಾಮೆರಾ ವರ್ಕ್, ರವಿಚಂದ್ರನ್ ಸಂಕಲನದಲ್ಲಿ ಸಿನಿಮಾ ಮೂಡಿ ಬರಲಿದೆ. ಪ್ರಮೋದ್ ಮರವಂತೆ ಸಾಹಿತ್ಯ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ನರಸಿಂಹ ಮಾಸ್ಟರ್ ಸಾಹಸ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ಓದಿ: 'ಆಪ್ತಮಿತ್ರ' ಇಲ್ಲಿ 300 ದಿನ ಪ್ರದರ್ಶನ ಕಂಡಿತ್ತು! ಇತಿಹಾಸದ ಪುಟ ಸೇರ್ತಿದೆ ಶಿವಮೊಗ್ಗದ ಲಕ್ಷ್ಮೀ ಟಾಕೀಸ್

ಯುವ ಪ್ರತಿಭೆ ವೆನ್ಯಾ ರೈ: ಈಗಾಗಲೇ ಎಲ್ಲೋ ಜೋಗಪ್ಪ ಸಿನಿಮಾಗೆ ನಾಯಕಿಯಾಗಿ ವೆನ್ಯಾ ರೈ ಅವರನ್ನು ಚಿತ್ರತಂಡ ಅಂತಿಮಗೊಳಿಸಿದೆ. ಚಂದನವನದ ಯುವ ಪ್ರತಿಭೆ ಓದುವಿನ ಜೊತೆಗೆ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಸದ್ಯ ವೆನ್ಯಾ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ಭಾವಪೂರ್ಣ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ ಪ್ರವೇಶಿಸಿರುವ ವೆನ್ಯಾಗೆ ಎಲ್ಲೋ ಜೋಗಪ್ಪ ನಿನ್ನರಮನೆ ಎರಡನೇ ಚಿತ್ರವಾಗಿದೆ.

ಇದನ್ನೂ ಓದಿ: ಸೆಲೀನ ಗೊಮೆಜ್‌ಗೆ 400 ಮಿಲಿಯನ್‌ ಇನ್‌ಸ್ಟಾಗ್ರಾಮ್ ಫಾಲೋವರ್ಸ್! ಈ ಸಾಧನೆ ಮಾಡಿದ ಮೊದಲ ಮಹಿಳೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.