ETV Bharat / entertainment

ಬಿಗ್‌ ಬಾಸ್‌: ದನಿ ಏರಿಸಿದ ವಿನಯ್​ಗೆ ನಟಿ ಶ್ರುತಿ ವಾರ್ನಿಂಗ್​! - kannada Bigg Boss

ಕನ್ನಡದ ಜನಪ್ರಿಯ ಕಿರುತೆರೆ ಕಾರ್ಯಕ್ರಮ 'ಬಿಗ್‌ ಬಾಸ್‌' ಮನೆಗೆ ನಟಿ ಶ್ರುತಿ ಆಗಮಿಸಿದ್ದಾರೆ.

Actress Shruti at Kannada Bigg Boss house
ಬಿಗ್‌ ಬಾಸ್‌ ಮನೆಯಲ್ಲಿ ನಟಿ ಶ್ರುತಿ
author img

By ETV Bharat Karnataka Team

Published : Dec 23, 2023, 1:03 PM IST

ಕನ್ನಡದ ಕಿರುತೆರೆ ಕಾರ್ಯಕ್ರಮ 'ಬಿಗ್‌ ಬಾಸ್‌' ದಿನಕ್ಕೊಂದು ಟ್ವಿಸ್ಟ್ ಕೊಡುವ ಮೂಲಕ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಉಣಬಡಿಸುತ್ತಿದೆ. ವೀಕೆಂಡ್‌ನಲ್ಲಿ ಬಿಗ್‌ ಬಾಸ್ ಮನೆ ಮಂದಿಗೆ ಅಚ್ಚರಿಯೊಂದು ಎದುರಾಗಿದೆ. ಆ ಅಚ್ಚರಿ ಏನೆಂಬುದು ಜಿಯೋ ಸಿನಿಮಾ ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಜಾಹೀರಾಗಿದೆ.

ಬೆಳಗ್ಗೆ ಎಲ್ಲಾ ಸ್ಪರ್ಧಿಗಳು ನೋಡ ನೋಡುತ್ತಿದ್ದಂತೆ ಮನೆಯ ಮುಖ್ಯದ್ವಾರ ತೆರೆದುಕೊಂಡಿದೆ. ಹಿರಿಯ ನಟಿ, ಬಿಗ್‌ ಬಾಸ್‌ ಸ್ಪರ್ಧೆಯ ವಿಜೇತೆಯೂ ಆಗಿರುವ ಶ್ರುತಿ ಅವರು ಮನೆಯೊಳಗೆ ಪ್ರವೇಶಿಸಿದ್ದಾರೆ. ಅವರನ್ನು ನೋಡುತ್ತಿದ್ದಂತೆ ಮನೆ ಸದಸ್ಯರೆಲ್ಲರೂ ಖುಷಿಯಿಂದ ಕುಣಿದಾಡಿದ್ದಾರೆ. 'ನ್ಯಾಯ ಪಂಚಾಯಿತಿಯಲ್ಲಿ ಶ್ರುತಿ!' ಎಂಬ ಶೀರ್ಷಿಕೆಯಡಿ ಕಲರ್ಸ್ ಕನ್ನಡ ಸೋಷಿಯಲ್​ ಮೀಡಿಯಾಗಳಲ್ಲಿ ಇಂದಿನ ಸಂಚಿಕೆಯ ಪ್ರೋಮೋ ಅನಾವರಣಗೊಳಿಸಿದ್ದು, ಪ್ರೇಕ್ಷಕರು ಕುತೂಹಲ ವ್ಯಕ್ತಪಡಿಸುತ್ತಿದ್ದಾರೆ.

ಮನೆ ಮಂದಿ ಸಂತೋಷದ ಅಲೆಯಲ್ಲಿ ತೇಲುತ್ತಿದ್ದ ಕ್ಷಣದಲ್ಲೇ ಕಟಕಟೆಯಲ್ಲಿ ನಿಲ್ಲುವ ಗಳಿಗೆ ಎದುರಾಗಿದೆ. ಶ್ರುತಿ ನ್ಯಾಯಾಧೀಶರ ಕುರ್ಚಿಯಲ್ಲಿ ಕುಳಿತಿದ್ದಾರೆ. ಸ್ಪರ್ಧಿಗಳನ್ನು ಕಟಕಟೆಯಲ್ಲಿ ನಿಲ್ಲಿಸಿ ವಿಚಾರಣೆ ನಡೆಸಿದ್ದಾರೆ. ''ವಿನಯ್ ಅವರು ವಾರಾಂತ್ಯದಲ್ಲಿ ಸುದೀಪ್ ಅವರ ಎದುರು ಒಂದು ರೀತಿ ಇರುತ್ತಾರೆ, ವಾರವಿಡೀ ಮನೆಯ ಸದಸ್ಯರ ಜೊತೆ ಇನ್ನೊಂದು ರೀತಿ ಇರುತ್ತಾರೆ?' ಎಂಬ ಪ್ರಶ್ನೆಗೆ ಸಂಗೀತಾ ಅವರು ಗಟ್ಟಿಯಾಗಿ ಹೌದು ಎಂದಿದ್ದಾರೆ. ಅಷ್ಟೇ ಅಲ್ಲ, ಇಷ್ಟು ದಿನಗಳ ಕಾಲ ವಿನಯ್ ಆಪ್ತಬಳಗದಲ್ಲಿ ಗುರುತಿಸಿಕೊಂಡಿರುವ ನಮ್ರತಾ ಕೂಡ, ''ನನಗೂ ಹಾಗೇ ಅನಿಸುತ್ತದೆ. ಸುದೀಪ್ ಸರ್ ಎದುರಿಗೆ ಅವರು ದನಿ ತಗ್ಗಿಸಿ ಮಾತನಾಡುತ್ತಾರೆ'' ಎಂದು ಹೇಳಿದ್ದಾರೆ.

ಇದಕ್ಕೆ ಏರುದನಿಯಲ್ಲಿ ಪ್ರತಿಕ್ರಿಯಿಸಿದ ವಿನಯ್​​, 'ಇವರತ್ರ ನಾಟಕ ಮಾಡ್ಕೊಂಡು ನನಗೆ ಏನೂ ಆಗ್ಬೇಕಾಗಿಲ್ಲ' ಎಂದಿದ್ದಾರೆ. ವಿನಯ್​​ ಟೋನ್​ಗೆ ನ್ಯಾಯಾಧೀಶೆ ಶ್ರುತಿ, 'ನನ್ನ ಬಳಿ, ನ್ಯಾಯಾಧೀಶರ ಬಳಿಯೇ ಧ್ವನಿ ಎತ್ತರಿಸಿ ಮಾತಾಡ್ತೀರಾ?' ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಇಳಿಕೆ ಕಂಡ 'ಡಂಕಿ' ಗಳಿಕೆ: 'ಸಲಾರ್​' ಅಬ್ಬರದೆದುರು ಮಂಕಾಯ್ತಾ ಶಾರುಖ್​ ಸಿನಿಮಾ?

ಬಿಗ್‌ ಬಾಸ್ ಮನೆಯೊಳಗೆ ಸೃಷ್ಟಿಯಾಗಿರುವ ಈ ನ್ಯಾಯಾಲಯದಲ್ಲಿ ಯಾರು ತಪ್ಪಿತಸ್ಥರಾಗುತ್ತಾರೆ? ಯಾರು ಬಿಡುಗಡೆಯಾಗುತ್ತಾರೆ? ಯಾರಿಗೆ ಜಾಮೀನು? ಯಾರಿಗೆ ಜೈಲು? ಕೊನೆಗೆ ಈ ವಾರ ಯಾರು ಮನೆಯಿಂದಲೇ ಬಿಡುಗಡೆಯಾಗಿ ಹೋಗುತ್ತಾರೆ? ನಿಮ್ಮ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಲು, ಶನಿವಾರ-ಭಾನುವಾರದ ವಾರಾಂತ್ಯ ಎಪಿಸೋಡ್‌ಗಳನ್ನು ಕಲರ್ಸ್ ಕನ್ನಡದಲ್ಲಿ ರಾತ್ರಿ 9ಕ್ಕೆ ವೀಕ್ಷಿಸಬಹುದಾಗಿದೆ.

ಇದನ್ನೂ ಓದಿ: ಮೊದಲ ದಿನವೇ 175 ಕೋಟಿ ಗಳಿಸಿದ 'ಸಲಾರ್​'; ಬಾಕ್ಸ್ ಆಫೀಸ್ ದಾಖಲೆ ಉಡೀಸ್​!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.