ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ ಆವರ್ತ ಚಿತ್ರದ ಹಾಡುಗಳನ್ನು ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೈಲರ್ ಅನಾವರಣಗೊಳಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಮೊದಲಿಗೆ ಮಾತನಾಡಿದ ರಾಷ್ಟ್ರಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ, ನನ್ನ ಮೊದಲ ಚಿತ್ರ 'ತುಳಸಿದಳ'. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ನನ್ನನ್ನು ಗುರುತಿಸಿ ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಬಹಳ ಖುಷಿಯಾಗಿದೆ ಅಂದರು.

ಚಿತ್ರದಲ್ಲಿ ಜಯ್ ಚಂದ್ರ ಹಾಗೂ ನಯನ ಮುಖ್ಯಭೂಮಿಕೆಯಲ್ಲಿದ್ದು, ಕಥೆಗಾರನ ಪಾತ್ರದಲ್ಲಿ ಜಯ್ ಚಂದ್ರ ಕಾಣಿಸಿಕೊಂಡಿರೆ ಸಿಒಡಿ ಅಧಿಕಾರಿ ಪಾತ್ರಧಾರಿ ಧನ್ವಿತ್ ಕಾಣಿಸಿಕೊಂಡಿದ್ದಾರೆ.
ನಿರ್ದೇಶಕ ವೇಮಗಲ್ ಜಗನ್ನಾಥರಾವ್ ಮಾತನಾಡಿ, ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬಯಕೆಯಿಲ್ಲದ ಆತನಿಗೆ ನೈಜಘಟನೆ ಕುರಿತು ಕಥೆ ಬರೆಯುವ ಆಸಕ್ತಿ. ಆ ಸಮಯದಲ್ಲಿ ಆತನಿಗೊಂದು ಮೆಸೇಜ್ ಬರುತ್ತದೆ. ಆತ ಆ ಸ್ಥಳಕ್ಕೆ ಹೋದಾಗ ಏನೆಲ್ಲಾ ಆಗುತ್ತದೆ ಎಂಬುದು ನಮ್ಮ ಚಿತ್ರದ ಕಥೆ. ಚಿತ್ರ ಚೆನ್ನಾಗಿ ಮೂಡಿ ಬಂದಿದೆ ಎಂದು ಹೇಳಿದರು.

ಮೂರು ಸಾಹಸ ಸನ್ನಿವೇಶಗಳು ಚೆನ್ನಾಗಿವೆ ಎಂದು ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ತಿಳಿಸಿದರು. ಸಂಗೀತ ನಿರ್ದೇಶಕ ಅತಿಶಯ್ ಜೈನ್ ಹಾಗೂ ಛಾಯಾಗ್ರಾಹಕ ಮಲ್ಲಿಕಾರ್ಜುನ್ ಕ್ಯಾಮರಾ ವರ್ಕ್ ಈ ಚಿತ್ರಕ್ಕಿದೆ. ಬಹುತೇಕ ಚಿತ್ರೀಕರಣ ಮುಗಿಸಿರೋ ಆವರ್ತ ಸಿನಿಮಾ ನವೆಂಬರ್ 18 ರಂದು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.
ಇದನ್ನೂ ಓದಿ: ಕಿಂಗ್ ಆಫ್ ರೊಮ್ಯಾನ್ಸ್ ಶಾರುಖ್ ಖಾನ್ ಹುಟ್ಟುಹಬ್ಬ: ಪಠಾಣ್ ಟೀಸರ್ ಬಿಡುಗಡೆ