ETV Bharat / entertainment

'ಅಲೆಕ್ಸಾ'ದಲ್ಲಿ ಸ್ಪೆಷಲ್ ಆಫಿಸರ್ ಆಗಿ ಅದಿತಿ ಪ್ರಭುದೇವ ಅಭಿನಯ - alexa release date

ಬಹುತೇಕ ಚಿತ್ರೀಕರಣ ಮುಗಿಸಿರುವ 'ಅಲೆಕ್ಸಾ' ಚಿತ್ರದಲ್ಲಿ ಅದಿತಿ ಪ್ರಭುದೇವ ಸ್ಪೆಷಲ್ ಆಫಿಸರ್ ಆಗಿ ಅಭಿನಯಿಸಿದ್ದಾರೆ‌.

Aditi Prabhu Deva Power Full Acting as Special Officer in alexa
ಅಲೆಕ್ಸಾ ಚಿತ್ರದಲ್ಲಿ ಸ್ಪೆಷಲ್ ಆಫೀಸರ್ ಆಗಿ ಅದಿತಿ ಪ್ರಭುದೇವ
author img

By

Published : May 24, 2022, 8:21 AM IST

ವಿಭಿನ್ನ ಕಥೆ, ಪಾತ್ರಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ನಟಿ ಅದಿತಿ ಪ್ರಭುದೇವ. ಇದೀಗ ಇವರು ಅಲೆಕ್ಸಾ ಸಿನಿಮಾ ಮೂಲಕ ಮೊದಲ ಬಾರಿಗೆ ವಿಭಿನ್ನ ಪಾತ್ರದಲ್ಲಿ ಮಿಂಚು ಹರಿಸಲಿದ್ದಾರೆ. ಅದಿತಿ ಪ್ರಭುದೇವ ಹಾಗೂ ಪವನ್ ತೇಜ್ ನಟನೆಯ ಸಿನಿಮಾದ ಕ್ಲೈಮ್ಯಾಕ್ಸ್ ಸಾಹಸ ಸನ್ನಿವೇಶದ ಚಿತ್ರೀಕರಣವನ್ನು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಮಾಡಲಾಯಿತು. ಸಾಹಸ ನಿರ್ದೇಶಕ ರವಿವರ್ಮ ಸಾಹಸ ಸಂಯೋಜನೆಯಲ್ಲಿ ಶೂಟಿಂಗ್​ ನಡೆಯಿತು.

Aditi Prabhu Deva Power Full Acting as Special Officer in alexa

ಕಳೆದ 24 ವರ್ಷಗಳಿಂದ ಹೆಸರಾಂತ ತಂತ್ರಜ್ಞರ ಜೊತೆ ಕೆಲಸ ಮಾಡಿರುವ ಜೀವಾ ಅವರು ಪ್ರಜ್ವಲ್ ದೇವರಾಜ್ ಅಭಿನಯದ 25ನೇ ಚಿತ್ರ ಭುಜಂಗ ಚಿತ್ರ ನಿರ್ದೇಶಿಸಿದ್ದರು. ಅಲೆಕ್ಸಾ ಸಿನಿಮಾ ಜೀವಾ ಅವರ ನಿರ್ದೇಶನದ ಎರಡನೇ ಚಿತ್ರವಾಗಿದೆ.

ಇದನ್ನೂ ಓದಿ: 'ಕಿರಿಕ್​ ಶಂಕರ್​'ನಾಗಿ ಮತ್ತೆ ಅದೃಷ್ಟ ಪರೀಕ್ಷೆಗಿಳಿದ ಲೂಸ್ ಮಾದ

ನಾಗಿಣಿ ಧಾರಾವಾಹಿ ಖ್ಯಾತಿಯ ನಾಗಾರ್ಜುನ್, ಮೇಘಶ್ರೀ, ಹನುಮಂತೇಗೌಡ, ಚಂದ್ರಕಲಾ ಮೋಹನ್, ಮಿಮಿಕ್ರಿ ಗೋಪಿ, ಮೈಸೂರು ಮಲ್ಲೇಶ್ ಹಾಗೂ ಮನಮೋಹನ್ ಚಿತ್ರದಲ್ಲಿದ್ದಾರೆ‌. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾಕ್ಕೆ ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ವಿ.ಚಂದ್ರು ನಿರ್ಮಿಸುತ್ತಿದ್ದಾರೆ. ಡಾ.ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದಿದ್ದಾರೆ. ಸಾಯಿಸತೀಶ್ ಛಾಯಾಗ್ರಹಣ, ಉಮೇಶ್ ಸಂಕಲನ, ಚಂದ್ರು, ರಾಮು ನೃತ್ಯ ನಿರ್ದೇಶನ ಹಾಗೂ ರವಿವರ್ಮ, ಮಾಸ್ ಮಾದ, ವಿಕ್ರಮ್ ಮೋರ್ ಸಾಹಸ ನಿರ್ದೇಶನವಿದೆ. ಸದ್ಯ ಆ್ಯಕ್ಷನ್ ಸನ್ನಿವೇಶವನ್ನು ಚಿತ್ರೀಕರಿಸಿರುವ ಅಲೆಕ್ಸಾ ತಂಡ ಬಾಕಿ ಉಳಿದಿರುವ ಹಾಡಿನ ಚಿತ್ರೀಕರಣ ಮುಗಿಸಿ ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡಲು ಯೋಜನೆ ರೂಪಿಸುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.