ರಾಜಕಾರಣಿಗಳು ಮಕ್ಕಳು ಕನ್ನಡ ಚಿತ್ರರಂಗಕ್ಕೆ ಬರೋದು ಹೊಸತೆನಲ್ಲ. 2016ರಲ್ಲಿ ಲಕ್ಷ್ಮಣ ಎಂಬ ಚಿತ್ರದ ಮೂಲಕ ಎಚ್ ಎಂ ರೇವಣ್ಣ ಮಗ ಅನೂಪ್ ರೇವಣ್ಣ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಅನೂಪ್ ರೇವಣ್ಣ 6 ವರ್ಷಗಳ ಬಳಿಕ ಮತ್ತೆ ಅದೃಷ್ಟ ಪರೀಕ್ಷೆಗಿಳಿದ್ದಾರೆ.
ಸಿನಿಮಾದ ಪೋಸ್ಟರ್ ಲಾಂಚ್.. ಹೌದು, ಹೈಡ್ ಅಂಡ್ ಸೀಕ್ ಎಂಬ ಮಾಸ್ ಟೈಟಲ್ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ. ಸದ್ಯ ಹುಟ್ಟು ಹಬ್ಬದ ಸಂಭ್ರಮದಲ್ಲಿರೋ ಅನೂಪ್ ರೇವಣ್ಣ ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂತಸದ ದಿನದಂದೇ ಹೈಡ್ ಅಂಡ್ ಸೀಕ್ ಚಿತ್ರತಂಡ ಸಿನಿಮಾದ ಪೋಸ್ಟರ್ ಲಾಂಚ್ ಮಾಡಲಾಗಿದೆ.
ಧನ್ಯಾ ರಾಮ್ಕುಮಾರ್ ನಾಯಕಿ.. ಪುನೀತ್ ನಾಗರಾಜು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಚಿತ್ರ ಹೈಡ್ ಅಂಡ್ ಸೀಕ್. ಈ ಚಿತ್ರದಲ್ಲಿ ಅನೂಪ್ ರೇವಣ್ಣ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಧನ್ಯಾ ರಾಮ್ಕುಮಾರ್ ನಟಿಸಿದ್ದಾರೆ. ಹುಟ್ಟುಹಬ್ಬದ ದಿನವೇ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರದಲ್ಲಿ ಸ್ಪೆಶಲ್ ರೋಲ್ನಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಅನೂಪ್ ರೇವಣ್ಣ ಸೀಕ್ರೆಟ್ ರಿವೀಲ್ ಮಾಡಿದ್ದಾರೆ. ‘ಕಬ್ಜ’ ಹಾಗೂ ‘ಹೈಡ್ ಅಂಡ್ ಸೀಕ್’ ಎರಡೂ ಚಿತ್ರಗಳು ಸ್ಪೆಶಲ್ ಸಿನಿಮಾಗಳಾಗುತ್ತವೆ ಎಂದು ಅನೂಪ್ ರೇವಣ್ಣ ಭರವಸೆ ವ್ಯಕ್ತಪಡಿಸಿದ್ದಾರೆ.
ಇನ್ನು, ಹೈಡ್ ಅಂಡ್ ಸೀಕ್ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಪುನೀತ್ ನಾಗರಾಜು, ವಸಂತ್ ರಾವ್ ಎಂ.ಕುಲ್ಕರ್ಣಿ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರುತ್ತಿದ್ದು, ರಿಜೋ ಪಿ ಜಾನ್ ಛಾಯಾಗ್ರಾಹಣ, ಸ್ಯಾಂಡಿ ಅದ್ದಾನ್ಕಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ ಹೈಡ್ ಅಂಡ್ ಸೀಕ್ ಚಿತ್ರಕ್ಕಿದೆ. 6 ವರ್ಷಗಳ ಬಳಿಕ ರಗಡ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಅನೂಪ್ ರೇವಣ್ಣನಿಗೆ ಹೈಡ್ ಅಂಡ್ ಸೀಕ್ ಸಿನಿಮಾ ಬ್ರೇಕ್ ನೀಡುತ್ತೆ ಎಂಬ ವಿಶ್ವಾಸದಲ್ಲಿದ್ದಾರೆ.
ಈ ಹಿಂದೆಯೂ ಅನೂಪ್ ರೇವಣ್ಣ ಸ್ಯಾಂಡಲ್ವುಡ್ನಲ್ಲಿ ಲಕ್ಷ್ಮಣ ಹಾಗೂ ಪಂಟ ಚಿತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಹೈಡ್ ಅಂಡ್ ಸೀಕ್ ಚಿತ್ರದ ಮೂಲಕ ಖಡಕ್ ಮಾಸ್ ಆಗಿ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಬೆಂಗಳೂರಿನ ದಯಾನಂದ ಸಾಗರ ಇಂಜಿನೀಯರಿಂಗ್ ಕಾಲೇಜಿನಲ್ಲಿ ಪದವಿ ಪಡೆದ ಇವರು ಚೆನ್ನೈನಲ್ಲಿ ನಟನೆಯ ತರಬೇತಿಯನ್ನು ಪಡೆದಿದ್ದಾರೆ. ಅಲ್ಲದೆ ಅನೂಪ್ ರೇವಣ್ಣ ಚೀನಾದಲ್ಲಿ ಕುಂಗ್ ಫೂ ಕಲಿತು ಬಂದಿದ್ದಾರೆ. ಮತ್ತು ಅಮೆರಿಕದಲ್ಲಿ ಕೆಲವು ಶಾರ್ಟ್ ಫಿಲಂಗಳನ್ನು ಮಾಡಿ ಸಾಕಷ್ಟು ತಯಾರಿ ನಡೆಸಿದ್ದಾರೆ.
ಇದನ್ನೂ ಓದಿ : ತೆಲುಗಿನ 'ವೇದ' ರಿಲೀಸ್: ಶಿವಣ್ಣನ ಮುಂದಿನ ಸಿನಿಮಾ ಯಾವುದು? ಭಕ್ತಿ ಪ್ರಧಾನ ಚಿತ್ರದತ್ತ ಹ್ಯಾಟ್ರಿಕ್ ಹೀರೋ ಚಿತ್ತ