ETV Bharat / entertainment

ಮಣಿಪುರ ವಿಡಿಯೋ ನೋಡಿ ಬೆಚ್ಚಿಬಿದ್ದೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ: ಅಕ್ಷಯ್​​ ಕುಮಾರ್​ - ಮಣಿಪುರ ಲೇಟೆಸ್ಟ್ ನ್ಯೂಸ್

ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ಎಸಗಿರುವ ಪ್ರಕರಣದ ಕುರಿತು ಬಾಲಿವುಡ್​ ನಟ ಅಕ್ಷಯ್​​ ಕುಮಾರ್ ತೀವ್ರ​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Akshay Kumar
ಬಾಲಿವುಡ್​ ನಟ ಅಕ್ಷಯ್​​ ಕುಮಾರ್
author img

By

Published : Jul 20, 2023, 2:11 PM IST

Updated : Jul 20, 2023, 2:19 PM IST

ಮುಂಬೈ: ಮಣಿಪುರ ಹಿಂಸಾಚಾರದ ವೇಳೆ ಇಬ್ಬರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿರುವ ವಿಡಿಯೋ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇಂದು ಸಂಸತ್ತಿನ ಉಭಯ ಸದನಗಳಲ್ಲೂ ಈ ವಿಚಾರ ಪ್ರತಿಧ್ವನಿಸಿತು. ಪ್ರಧಾನಿ ನರೇಂದ್ರ ಮೋದಿ ಕೂಡಾ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೂಡಾ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

  • Shaken, disgusted to see the video of violence against women in Manipur. I hope the culprits get such a harsh punishment that no one ever thinks of doing a horrifying thing like this again.

    — Akshay Kumar (@akshaykumar) July 20, 2023 " class="align-text-top noRightClick twitterSection" data=" ">

ಅಕ್ಷಯ್​​ ಕುಮಾರ್ ಟ್ವೀಟ್: ಟ್ವೀಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಅಕ್ಷಯ್​ ಕುಮಾರ್​, ''ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ವಿಡಿಯೋ ನೋಡಿ ಬೆಚ್ಚಿಬಿದ್ದೆ. ಅಸಹ್ಯವಾಯಿತು. ಇಂತಹ ಭಯಾನಕ ಕೃತ್ಯ ಎಸಗಲು ಮತ್ತೊಮ್ಮೆ ಯಾರೂ ಕೂಡ ಯೋಚನೆ ಮಾಡಬಾರದು. ದುಷ್ಕರ್ಮಿಗಳಿಗೆ ಅಂತಹ ಶಿಕ್ಷೆಯಾಗಲಿದೆ ಎಂಬ ವಿಶ್ವಾಸವಿದೆ" ಎಂದು ಬರೆದಿದ್ದಾರೆ.

ರಸ್ತೆಯಲ್ಲಿ ದೌರ್ಜನ್ಯ ಎಸಗಿರುವ ನೀಚ ಕೃತ್ಯಕ್ಕೆ ಸಂಬಂಧಿಸಿದಂತೆ, ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ. ಮೇಘಚಂದ್ರ ಸಿಂಗ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. "2023ರ ಮೇ 4 ರಂದು ಅಪರಿಚಿತ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿರುವ ವಿಡಿಯೋಗೆ ಸಂಬಂಧಿಸಿದಂತೆ, ನಾಂಗ್‌ಪೋಕ್ ಸೆಕ್ಮೈ ಪೊಲೀಸ್ ಠಾಣೆಯಲ್ಲಿ (ತೌಬಲ್ ಜಿಲ್ಲೆ) ಅಪಹರಣ, ಗ್ಯಾಂಗ್​ ರೇಪ್​​ ಮತ್ತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಅಪರಿಚಿತ ದುಷ್ಕರ್ಮಿಗಳ ವಿರುದ್ಧ ತನಿಖೆ ಪ್ರಾರಂಭವಾಗಿದೆ. ಆರೋಪಿಗಳನ್ನು ಬಂಧಿಸಲು ಪೊಲೀಸ್​ ಇಲಾಖೆ ತೀವ್ರ ತನಿಖೆ ಕೈಗೊಂಡಿದೆ'' ಎಂದು ತಿಳಿಸಿದ್ದಾರೆ.

ಮಣಿಪುರ ರಾಜ್ಯದ ಕಣಿವೆ ಮತ್ತು ಗುಡ್ಡಗಾಡು ಜಿಲ್ಲೆಗಳ ಅಂಚಿನ ಪ್ರದೇಶಗಳಲ್ಲಿ ರಾಜ್ಯ ಪೊಲೀಸ್ ಮತ್ತು ಕೇಂದ್ರ ಪಡೆಗಳು ನಡೆಸುತ್ತಿರುವ ಶೋಧ ಕಾರ್ಯಾಚರಣೆಗಳ ವಿವರಗಳನ್ನು ಸಹ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. ಕಾರ್ಯಾಚರಣೆಯೊಂದರಲ್ಲಿ 2 ಶಸ್ತ್ರಾಸ್ತ್ರಗಳು ಮತ್ತು 2 ಮ್ಯಾಗಜೀನ್‌ಗಳನ್ನು ಇಂಫಾಲ್ ಪೂರ್ವದ ಜಿಲ್ಲಾ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೂಲಗಳ ಪ್ರಕಾರ, ಸರ್ಕಾರವು ಟ್ವಿಟರ್ ಮತ್ತು ಇತರೆ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಈ ವಿಡಿಯೋ ಹಂಚಿಕೊಳ್ಳದಂತೆ ಆದೇಶ ನೀಡಿದೆ. ಇಬ್ಬರು ಮಣಿಪುರ ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿರುವ ವೈರಲ್ ವಿಡಿಯೋ ಶೇರ್​ ಮಾಡಿಕೊಳ್ಳದಂತೆಯೂ ಸೂಚನೆ ನೀಡಲಾಗಿದೆ. ಈ ಪ್ರಕರಣ ಪ್ರಸ್ತುತ ತನಿಖೆಯಲ್ಲಿದ್ದು, ಸೋಷಿಯಲ್​ ಮೀಡಿಯಾ ಪ್ಲಾಟ್‌ಫಾರ್ಮ್‌ಗಳು, ಭಾರತೀಯ ಕಾನೂನುಗಳಿಗೆ ಬದ್ಧವಾಗಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: ಮಣಿಪುರ ಮಹಿಳೆಯರ ಬೆತ್ತಲೆ ವಿಡಿಯೋ; ಓರ್ವ ಆರೋಪಿ ಬಂಧನ, ಉಳಿದವರಿಗಾಗಿ ತಲಾಷ್​: ಸಿಎಂ ಬಿರೇನ್​ ಸಿಂಗ್​

ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಮಣಿಪುರ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ ನಂತರ ಪ್ರಕರಣ ಕುರಿತು ಪ್ರತಿಕ್ರಿಯಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, ''ಇಬ್ಬರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಭಯಾನಕ ವಿಡಿಯೋ ಖಂಡನೀಯ ಮತ್ತು ಅಮಾನವೀಯ. ಸಿ.ಎಂ ಎನ್ ಬಿರೇನ್ ಸಿಂಗ್ ಅವರೊಂದಿಗೆ ಮಾತನಾಡಿದ್ದು, ಪ್ರಸ್ತುತ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಅಪರಾಧಿಗಳಿಗೆ ಶಿಕ್ಷೆ ಒದಗಿಸುವ ಸಂಪೂರ್ಣ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ'' ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರಿಬ್ಬರ ಬೆತ್ತಲೆಗೊಳಿಸಿ ಮೆರವಣಿಗೆ, ತೀವ್ರ ಆಕ್ರೋಶ, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ತೀವ್ರವಾಗಿ ತನಿಖೆ ನಡೆಯುತ್ತಿದ್ದು, ಉಳಿದವರ ಪತ್ತೆಯೂ ಶೀಘ್ರವೇ ಆಗಲಿದೆ ಎಂಬ ಭರವಸೆ ಇದೆ. ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಸಾಧ್ಯತೆಯನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ಸಿಎಂ ಎನ್.​ಬಿರೇನ್ ಸಿಂಗ್ ತಿಳಿಸಿದ್ದಾರೆ.

Last Updated : Jul 20, 2023, 2:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.