ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಆಟಗಾರ ವಿರಾಟ್ ಕೊಹ್ಲಿ 34ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಪತ್ನಿ ನಟಿ ಅನುಷ್ಕಾ ಶರ್ಮಾ ವಿಶೇಷವಾಗಿ ಶುಭ ಕೋರಿದ್ದಾರೆ.
ಅನುಷ್ಕಾ ಶರ್ಮಾ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ''ಇಂದು ನಿಮ್ಮ ಜನ್ಮದಿನ, ಹಾಗಾಗಿ ಖಂಡಿತವಾಗಿಯೂ ನಿಮ್ಮ ಬೆಸ್ಟ್ ಫೋಟೋಗಳನ್ನು ಆರಿಸಿಕೊಂಡಿದ್ದೇನೆ'' ಎಂದು ಬರೆದು ವಿರಾಟ್ ಅವರ ಫನ್ನಿ ಫೋಟೋ ಶೇರ್ ಮಾಡಿದ್ದಾರೆ. ಜೊತೆಗೆ ಪುತ್ರಿ ವಮಿಕಾ ಅವರೊಂದಿಗಿನ ಫೋಟೋ ಸಹ ಹಂಚಿಕೊಂಡಿದ್ದಾರೆ. ಈ ಪೋಸ್ಟ್ಗೆ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿ ಪ್ರೀತಿಯ ಸಂದೇಶ ಕಳುಹಿಸುತ್ತಿದ್ದಾರೆ.
- " class="align-text-top noRightClick twitterSection" data="
">
ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ. ವಿಶ್ವಶ್ರೇಷ್ಠ ನಾಯಕ ಎಂಎಸ್ ಧೋನಿಯಿಂದ ತೆರವಾದ ನಾಯಕತ್ವ ಸ್ಥಾನವನ್ನು ವಿರಾಟ್ ಕೊಹ್ಲಿ ವಹಿಸಿಕೊಂಡಿದ್ದರು. ಸದ್ಯ ಭಾರತ ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಮುಂದುವರಿದಿದ್ದಾರೆ. ಇಂದು ವಿರಾಟ್ ಜನ್ಮದಿನ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಕೊಹ್ಲಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಸದ್ಯ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಕ್ರಿಕೆಟ್ನಲ್ಲಿ ಕೊಹ್ಲಿ ಮೇಲೆ ಅಭಿಮಾನಿಗಳು ಭಾರಿ ಭರವಸೆ ಇರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಸಾಧ್ಯ ಅನ್ನೋ ಮಾತೇ ಇಲ್ಲ..! ಪಾಕ್ ವಿರುದ್ಧ ಪಂದ್ಯ ಗೆಲ್ಲಿಸಿದ್ದ ಕೊಹ್ಲಿಗೆ ಇಂದು ಜನ್ಮದಿನದ ಸಂಭ್ರಮ
ಬಾಲಿವುಡ್ ನಟಿ ಅನುಷ್ಕಾ ಶರ್ಮಾರನ್ನು ಪ್ರೀತಿಸುತ್ತಿದ್ದ ವಿರಾಟ್ ಕೊಹ್ಲಿ 2017ರಲ್ಲಿ ಇಟಲಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. ದಂಪತಿಗೆ ಓರ್ವ ಹೆಣ್ಣು ಮಗುವಿದ್ದು, ಸದ್ಯ ಸುಖ ಸಂಸಾರ ನಡೆಸುತ್ತಿದ್ದಾರೆ. ಬೆಸ್ಟ್ ಕಪಲ್ ಎಂದೇ ಹೆಸರುವಾಸಿಯಾಗಿದ್ದಾರೆ.
