ETV Bharat / entertainment

ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಮುಖ್ಯಮಂತ್ರಿಗೆ ಮನವಿ - karnataka Film City

ಚಿತ್ರರಂಗದ ಗಣ್ಯರ ಸಮಿತಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.

Appeal to CM Bommai for construction of Film City in Mysore
ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ
author img

By

Published : Feb 9, 2023, 6:31 PM IST

ಕಪ್ಪು ಬಿಳುಪು ಕಾಲದಿಂದಲೂ ರಾಜ್ಯದಲ್ಲಿ ಬೃಹತ್ ಮಟ್ಟದ ಫಿಲ್ಮ್ ಸಿಟಿ ಆಗಬೇಕು ಅನ್ನೋ ಕನಸಿದೆ. ಹೊನ್ನಪ್ಪ ಭಾಗವತರ್ ಅವರಿಂದ ಹಿಡಿದು ಡಾ.ರಾಜ್​ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್ ಅವರಂಥ ದಿಗ್ಗಜ ನಟರ ಆಸೆಯೂ ಇದೇ ಆಗಿತ್ತು. ಆದರೆ ಮೇರು ನಟರ ಕನಸು ಮಾತ್ರ ನನಸಾಗಿಲ್ಲ.

ಸಾಂಸ್ಕೃತಿಕ ನಗರಿ ಮೈಸೂರು ಚಿತ್ರರಂಗದವರಿಗೆ ಅಚ್ಚುಮೆಚ್ಚಿನ ಸ್ಥಳ. ಜಿಲ್ಲೆಯಲ್ಲಿ 250ಕ್ಕೂ ಅಧಿಕ ಪ್ರೇಕ್ಷಣೀಯ ಸ್ಥಳಗಳಿವೆ. ಇಂತಹ ಭವ್ಯ ಪರಂಪರೆಯುಳ್ಳ ಐತಿಹಾಸಿಕ ನಗರಿಯಲ್ಲಿ ಫಿಲ್ಮ್‌ ಸಿಟಿ ಸ್ಥಾಪಿಸಬೇಕೆಂಬುದು ಕನ್ನಡ ಚಿತ್ರರಂಗ ಮಾತ್ರವಲ್ಲದೇ ಬಹುಭಾಷಾ ಚಿತ್ರರಂಗದ ಗಣ್ಯರ ಅಭಿಪ್ರಾಯವೂ ಆಗಿದೆ.

Appeal to CM Bommai for construction of Film City in Mysore
ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ

ಮುಖ್ಯಮಂತ್ರಿಗೆ ಮನವಿ: ಈ ವಿಚಾರವಾಗಿ ಹಿರಿಯ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ರಾಜೇಂದ್ರಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್, ಪಿ. ಶೇಷಾದ್ರಿ, ಕೃಷ್ಣೇಗೌಡ ಅವರನ್ನು ಒಳಗೊಂಡ ಸಮಿತಿ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಆಗ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣದ ವಿಷಯ ಕೂಡ ಪ್ರಸ್ತಾಪವಾಗಿತ್ತು. ಸಿಎಂ ಈ ಕುರಿತು ರಿಪೋರ್ಟ್ ಸಿದ್ಧ ಮಾಡಿಕೊಡುವಂತೆ ಹೇಳಿದ್ದರು. ಇಂದು ಹಿರಿಯ ನಿರ್ದೇಶಕರಾದ ರಾಜೇಂದ್ರ ಸಿಂಗ್ ಬಾಬು ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದರು.

ಚಿತ್ರರಂಗದ ಗಣ್ಯರ ಸಹಿ: ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರಕ್ಕೆ ನಟ ಶಿವರಾಜ್ ​​ಕುಮಾರ್, ರಾಕ್‌ಲೈನ್ ವೆಂಕಟೇಶ್, ನಾಗತಿಹಳ್ಳಿ ಚಂದ್ರಶೇಖರ್, ಪಿ.ಶೇಷಾದ್ರಿ ಸೇರಿದಂತೆ ಇಪ್ತತ್ತಕ್ಕೂ ಅಧಿಕ ಗಣ್ಯರು ಸಹಿ ಮಾಡಿದ್ದಾರೆ.

ಇದನ್ನೂ ಓದಿ: ಶ್ರೀನಗರದಲ್ಲಿ ದಶಕದ ನಂತರ ಥಿಯೇಟರ್‌ಗಳು ಭರ್ತಿ ಎಂದ ಮೋದಿ: ಶಾರುಖ್​ ಅಭಿಮಾನಿಗಳು ಖುಷ್‌!

ಬಾಲಿವುಡ್ ಚಿತ್ರರಂಗದ ಖ್ಯಾತ ನಟರಾದ ಧರ್ಮೇಂದ್ರ, ಹೇಮ ಮಾಲಿನಿ ಅವರೂ ಸಹ ಈ ಕುರಿತು ಸಹಿ‌ ಮಾಡಿ, ಲೆಟರ್ ಒಂದನ್ನು ಕಳುಹಿಸಿದ್ದಾರೆ‌. ಧರ್ಮೇಂದ್ರ ಅವರಿಗೂ ಮೈಸೂರು ಅಚ್ಚುಮೆಚ್ಚು. ಏಕೆಂದರೆ ಅವರ ವೃತ್ತಿಜೀವನ ಆರಂಭವಾಗಿದ್ದೇ ಮೈಸೂರಿನ ಪ್ರೀಮಿಯರ್ ಸ್ಟುಡಿಯೋದಲ್ಲಿ ಎಂದು ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ.

ಇದನ್ನೂ ಓದಿ: ಅಕ್ಷಯ್ ಕುಮಾರ್ ಜೊತೆಗಿನ ನಿಶ್ಚಿತಾರ್ಥ ಮುರಿದ ಬಗ್ಗೆ ಮೌನ ಮುರಿದ ಕೆಜಿಎಫ್​ ನಟಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.