ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಗಮನ ಸೆಳೆದ ಸ್ಪರ್ಧಿಗಳು ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಡೋ ಟ್ರೆಂಡ್ ಶುರು ಆಗಿದೆ. ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ತನ್ನದೇ ಛಾಪು ಮೂಡಿಸಿರೋ ನಿರ್ದೇಶಕ ಅರವಿಂದ್ ಕೌಶಿಕ್. ಈಗಾಗಲೇ ರಕ್ಷಿತ್‌ಶೆಟ್ಟಿ, ರಿಶಬ್ ಶೆಟ್ಟಿ, ರಚಿತಾ ರಾಮ್, ಅನೀಶ್, ಬಾಲು ನಾಗೇಂದ್ರ ಸೇರಿದಂತೆ ಅನೇಕ ಕಲಾವಿದರನ್ನು ಪರಿಚಯಿಸಿದ್ದಾರೆ. ಇದೀಗ ಬೈಕ್ ರೇಸರ್ ಅರವಿಂದ್ ಅವರನ್ನು ನಾಯಕ ನಟನಾಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಯುವ ಜೋಡಿಗಳಾದ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಸಿನಿಮಾ ಮೂಲಕ ತೆರೆ ಮೇಲೆ ಮೋಡಿ ಮಾಡಲು ರೆಡಿಯಾಗಿದ್ದಾರೆ.
ಅರ್ಜುನ್ ಜನ್ಯ ಅವರು ಅರ್ದಂಬರ್ಧ ಪ್ರೇಮಕಥೆಗೆ ಚೆಂದದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಪ್ರೀತಿ ಎನ್ನುವುದು ನಮ್ಮ ಕನಸುಗಳ ಜೊತೆಗೆ ಬೆಳೆಯುತ್ತದೆ. ಆದರೆ ಅದೇ ಪ್ರೀತಿ ಸಂಬಂಧವಾಗಿ ಬದಲಾದಾಗ ಅದು ಉಳಿಯೋದು ಕಷ್ಟ. ಏಕೆಂದರೆ ಅದು ನಮ್ಮ ಸುತ್ತಲಿನ ಸಮಾಜದ ಚೌಕಟ್ಟಿನಲ್ಲಿ ಬದುಕಬೇಕಾಗಿರುತ್ತೆ. ಇಂಥ ಒಂದು ಲವ್‌ಸ್ಟೋರಿಯೇ ಅರ್ದಂಬರ್ಧ ಪ್ರೇಮಕಥೆ.
ಈಗಾಗಲೇ ಚಿತ್ರೀಕರಣ ಮುಗಿದಿದ್ದು, ನಾಯಕ ನಟ ಅರವಿಂದ್ ಇಂಟ್ರೊಡಕ್ಷನ್ ಟೀಸರ್ ದಸರಾ ಹಬ್ಬಕ್ಕೆ ಅನಾವರಣಗೊಂಡಿದೆ. ಈ ಸಂದರ್ಭದಲ್ಲಿ ಹಿರಿಯ ನಟ ದ್ವಾರಕೀಶ್, ಬಿಗ್‌ಬಾಸ್ ತಂಡದ ಶುಭಾ ಪುಂಜಾ, ರಾಜೀವ್, ಅರವಿಂದ್ ಕೂಡ ಹಾಜರಿದ್ದು, ಗೆಳೆಯನಿಗೆ ಶುಭ ಹಾರೈಸಿದರು. ಈ ಚಿತ್ರದಲ್ಲಿ ಹಿರಿಯ ಕಲಾವಿದ ದ್ವಾರಕೀಶ್ ಅವರ ಪುತ್ರ ಅಭಿಲಾಷ್ ದ್ವಾರಕೀಶ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, 25 ವರ್ಷಗಳ ನಂತರ ನಟನೆಗೆ ಹಿಂದಿರುಗಿದ್ದಾರೆ. ಬೈಕ್ ರೇಸರ್ ಅರವಿಂದ್ ಅವರ ಗುರುಗಳು ಕೂಡ ಈ ಸಮಾರಂಭದಲ್ಲಿ ಹಾಜರಿದ್ದರು.
ನಿರ್ದೇಶಕ ಅರವಿಂದ್ ಕೌಶಿಕ್ ಮಾತನಾಡಿ, ಚಿತ್ರದಲ್ಲಿ ಅರವಿಂದ್ ಅವರ ಬೈಕ್ ರೇಸಿಂಗ್ ಸಾಧನೆಗಳ ಬಗ್ಗೆ ಹೇಳಿಲ್ಲ, ನಾನು ಮಾಡಿಕೊಂಡ ಕಥೆಗೆ ಒಬ್ಬ ಹೊಸ ಹೀರೋ ಬೇಕಿತ್ತು. ಆತ ಜನ ಗುರುತಿಸುವಂಥ ಹೀರೋನೂ ಆಗಿರಬೇಕು ಅಂದುಕೊಂಡಾಗ ನೆನಪಿಗೆ ಬಂದದ್ದೇ ಕೆ.ಪಿ.ಅರವಿಂದ್. ಇದೊಂದು ಪ್ರೇಮಕಥೆಯಾಗಿದ್ದು ಶೂಟಿಂಗ್ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಅಂತಿಮ ಹಂತದಲ್ಲಿದೆ. ನವೆಂಬರ್ ವೇಳೆಗೆ ರಿಲೀಸ್ ಮಾಡೋ ಯೋಜನೆಯಿದೆ ಎಂದು ಹೇಳಿದರು.
- " class="align-text-top noRightClick twitterSection" data="">
ನಂತರ ದ್ವಾರಕೀಶ್ ಮಾತನಾಡಿ, ನಮ್ಮ ಕಾಲದಲ್ಲಿ ಈ ರೀತಿಯ ನೆಗೆಟಿವ್ ಟೈಟಲ್ ಇಡುತ್ತಲೇ ಇರಲಿಲ್ಲ. ಈಗ ಅರವಿಂದ್ ಅಂಥ ಸಾಹಸ ಮಾಡಿದ್ದಾರೆ. ನಾಯಕ ಸೌತ್ ಕೆನರಾದವರು. ಈಗ ಅಲ್ಲಿಯವರೇ ಜಾಸ್ತಿ ಹೆಸರು ಮಾಡುತ್ತಿದ್ದಾರೆ. ಹಿಂದೆ ಪುಟ್ಟಣ್ಣ ಕಣಗಾಲ್ ಅವರು ನೀಡಿದ ಒಂದು ಸಲಹೆಯಂತೆ ನಾನು ಹೊಸಬರನ್ನು ಹಾಕಿಕೊಂಡು ಸಿನಿಮಾ ಮಾಡುವಂತೆ ಮಾಡಿತು ಎಂದು ಹಿಂದಿನ ಘಟನೆಗಳನ್ನು ನೆನಪಿಸಿಕೊಂಡರು.
ಇದನ್ನೂ ಓದಿ: ಮುಂಬೈನಲ್ಲಿ ಬನಾರಸ್ ಜೋಡಿ: ಭರ್ಜರಿ ಪ್ರಚಾರದಲ್ಲಿ ಚಿತ್ರ ತಂಡ
ಬಕ್ಸಸ್ ಮೀಡಿಯಾ, ಲೈಟ್‌ಹೌಸ್ ಮೀಡಿಯಾ ಮತ್ತು ಆರ್‌ಎಸಿ ವಿಷುವಲ್ಸ್ ಸೇರಿ ಅರ್ದಂಬರ್ಧ ಪ್ರೇಮ ಕಥೆ ಸಿನಿಮಾ ನಿರ್ಮಿಸಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಸಂತೋಷ್ ರಾಧಾಕೃಷ್ಣನ್ ಅವರ ಶೀರ್ಷಿಕೆ ವಿನ್ಯಾಸದ ಜೊತೆಗೆ ಗ್ರಾಫಿಕ್ಸ್ ಕೆಲಸವನ್ನೂ ನಿಭಾಯಿಸಿದ್ದಾರೆ. ರ‍್ಯಾಪರ್ ಆಲ್‌ಓಕೆ ಅಲೋಕ್, ಶ್ರೇಯಾ, ವೆಂಕಟ್‌ಶಾಸ್ತ್ರಿ, ಪ್ರದೀಪ್‌ರೋಷನ್, ಸೂರಜ್ ಹೂಗಾರ್, ಸುಜಿತ್‌ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶಿವರಾಜ್ ಮೇಹು ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.