'ಅರಮನೆ ಗಿಳಿ' ಖ್ಯಾತಿಯ ಯುವ ನಟ ಅರ್ಜುನ್ ಯೋಗಿ ಹಾಗೂ ಸಾರಿಕಾ ರಾವ್ ಅಭಿನಯದ ಚಿತ್ರ 'ಅನಾವರಣ'. ಕ್ಯಾಚೀ ಟೈಟಲ್ನಿಂದ ಗಮನ ಸೆಳೆಯುತ್ತಿರುವ 'ಅನಾವರಣ' ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದೆ. 'ಏನಾಗಿದೆ' ಎಂಬ ಪ್ರೇಮಗೀತೆಗೆ ಶಶಿಕುಮಾರ್ ಬೆಳವಾಡಿ ಸಾಹಿತ್ಯ ಬರೆದಿದ್ದು, ವಿಶಾಲ್ ಸಿ ಕೃಷ್ಣ ಟ್ಯೂನ್ ಹಾಕಿದ್ದಾರೆ. ಅರ್ಜುನ್ ಯೋಗಿ ಮತ್ತು ಸಾರಿಕಾ ರಾವ್ ಹಾಡಿನಲ್ಲಿ ಮಿಂಚಿದ್ದಾರೆ. ಇತ್ತೀಚೆಗೆ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಿತು.
- " class="align-text-top noRightClick twitterSection" data="">
ಈ ವೇಳೆ ಮಾತು ಶುರು ಮಾಡಿದ ಅರ್ಜುನ್ ಯೋಗಿ, "ನನ್ನ ಹಿಂದಿನ ಸಿನಿಮಾ ಚೇಸ್ ನೋಡಿ ನಿರ್ದೇಶಕರು ಕಾಲ್ ಮಾಡಿದ್ದರು. ಈ ಚಿತ್ರ ರಿಲೀಸ್ ದಿನ ನಮ್ಮ ಕೆಲಸ ನೋಡಿ ಮೆಚ್ಚಿ ಇನ್ನೊಂದು ಕೆಲಸ ಕೊಡ್ತಾರೆ ಅದೇ ಖುಷಿ ವಿಚಾರ. 'ಅನಾವರಣ' ಚಿತ್ರಕ್ಕೆ ಇಬ್ಬರು ನಿರ್ದೇಶಕರು. ಅವರು ಏನ್ ಕಥೆ ಹೇಳಿದ್ದರೋ, ಅದಕ್ಕಿಂತ ದುಪ್ಪಟ್ಟಾಗಿ ಸಿನಿಮಾ ಮೂಡಿ ಬಂದಿದೆ. ಗ್ಲಿಂಪ್ಸ್, ಟ್ರೇಲರ್ ನೋಡಿದ್ದೇನೆ. ಈ ತಂಡ ಗೆದ್ದರೆ ಇನ್ನೊಂದಿಷ್ಟು ಸಿನಿಮಾಗಳು ಹುಟ್ಟಿಕೊಳ್ಳುತ್ತದೆ. ತುಂಬಾ ಚೆನ್ನಾಗಿ ಕಥೆ ಕಟ್ಟಿದ್ದಾರೆ. ನನಗೆ ಬಹಳ ಇಷ್ಟವಾಗಿದೆ. ನಾನು ಸಾಫ್ಟ್ ವೇರ್ ಇಂಜಿನಿಯರ್ ಪಾತ್ರ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ" ಎಂದು ಸಂತಸ ಹಂಚಿಕೊಂಡರು.
ಬಳಿಕ ನಟಿ ಸಾರಿಕಾ ಮಾತನಾಡಿ, "ತುಂಬಾ ಪೊಸೆಸಿವ್ ನೆಸ್ ಆಗಿರುವ ಹುಡುಗಿ ಪಾತ್ರ ನನ್ನದು. ನಿಮಗೆ ಎಲ್ಲರಿಗೂ ಕೋಪ ಬರುತ್ತದೆ ಅಂತಹ ಕಾರೆಕ್ಟರ್. ಶೂಟಿಂಗ್ ಸೆಟ್ನಲ್ಲಿ ಸಿಕ್ಕಾಪಟ್ಟೆ ಎಂಜಾಯ್ ಮಾಡಿದ್ದೇನೆ. ಇದೊಂದು ರೀತಿಯಲ್ಲಿ ಶೂಟಿಂಗ್ ಅಂತಾನೇ ಅನಿಸ್ತಿರಲಿಲ್ಲ. ಹಾಲಿಡೇ ತರ ಇತ್ತು. ಮಂಜು ಸರ್ ಜೊತೆ ಕೆಲಸ ಮಾಡಿರುವುದು ಖುಷಿ ಕೊಟ್ಟಿದೆ. ನಿಮ್ಮ ಆಶೀರ್ವಾದ ನಮ್ಮ ಇಡೀ ತಂಡದ ಮೇಲೆ ಸದಾ ಇರಬೇಕು" ಎಂದು ಹೇಳಿದರು.
ಇದನ್ನೂ ಓದಿ: ಇಂದ್ರಜಿತ್ ಲಂಕೇಶ್ ಪುತ್ರನ ಚಿತ್ರಕ್ಕೆ ಅದ್ಧೂರಿ ಮುಹೂರ್ತ: ಸ್ಯಾಂಡಲ್‌ವುಡ್‌ಗೆ ಮತ್ತೋರ್ವ ಆರಡಿ ಹೀರೋ ಎಂಟ್ರಿ
'ಅನಾವರಣ' ಚಿತ್ರದ ಇಬ್ಬರು ನಿರ್ದೇಶಕರಲ್ಲಿ ಒಬ್ಬರಾದ ಹರೀಶ್ ಕುಮಾರ್ ಮಾತನಾಡಿ, "ಇದು ನಮ್ಮ ಹಲವಾರು ವರ್ಷದ ಕನಸು. ನಾನು 15 ವರ್ಷ ರಂಗಭೂಮಿಯಲ್ಲಿ ದುಡಿದಿದ್ದೇನೆ. ನನಗೂ ಸಿನಿಮಾ ಸೆಳೆತ ಬಂತು. 40 ಕಿರುಚಿತ್ರ ನಿರ್ದೇಶಿಸಿದ್ದೇವೆ. ನಮ್ಮ ಕಥೆ ಒಳ್ಳೆ ಒಮ್ಮತ ಬಂತು. ಹೀಗಾಗಿ ಚಿತ್ರ ಮಾಡಲು ಹೆಜ್ಜೆ ಇಟ್ಟೆವು. ಚಿತ್ರದಲ್ಲಿ ಬರುವ ಹಲವಾರು ವಿಶೇಷತೆಗಳ ಅನಾವರಣ. ನಮ್ಮ ನಿರ್ದೇಶಕರ ಪಯಣಕ್ಕೆ ಅನಾವರಣ. ಒಳ್ಳೆ ಸಾಹಿತ್ಯದ ಅನಾವರಣ, ಇಬ್ಬರು ಬೆನ್ನು ತಟ್ಟಿದ ನಿರ್ಮಾಪಕ ಅನಾವರಣ. ನಮ್ಮದೇ ಕಥೆ ಅನಿಸುವ ಸಿನಿಮಾವಿದು" ಎಂದರು.
ಮತ್ತೊಬ್ಬ ನಿರ್ದೇಶಕ ಮಂಜುನಾಥ್ ಮಾತನಾಡಿ, "ತುಂಬಾ ಪ್ರೀತಿ ಮಾಡುವವರು, ತುಂಬಾ ಪ್ರೀತಿಯಾದರೆ ಯಾವ ರೀತಿ, ಕಾಟ, ಭಾದೆ ಇರುತ್ತದೆ ಅನ್ನುವುದನ್ನು ಸಿನಿಮಾದಲ್ಲಿ ತೋರಿಸಿದ್ದೇವೆ" ಎಂದು ತಿಳಿಸಿದರು.
ಚಿತ್ರತಂಡ: ಈ ಚಿತ್ರದಲ್ಲಿ ಅರ್ಜುನ್ ಯೋಗಿ, ಸಾರಿಕಾ ರಾವ್ ಅಲ್ಲದೇ ಗೌರೀಶ್ ಅಕ್ಕಿ, ನಂದ ಗೋಪಾಲ್, ಹೊನ್ನವಳ್ಳಿ ಕೃಷ್ಣ, ರತಸಪ್ತಮಿ ಅರವಿಂದ್, ಕಾಮಿಡಿ ಕಿಲಾಡಿ ಸೂರಜ್, ಸೂರ್ಯ, ಸಂತು, ವಾಣಿ, ರಾಜೇಶ್ವರಿ, ಕಮಲಾ ತಾರಾ ಬಳಗದಲ್ಲಿದ್ದಾರೆ. ಹರೀಶ್ ಕುಮಾರ್, ಮಂಜುನಾಥ್ ಪಿಳ್ಳಪ್ಪ ಇಬ್ಬರು 'ಅನಾವರಣ' ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ವೆಂಕಿ ಸಂಕಲನ, ಶಶಿಕುಮಾರ್ ಸಾಹಿತ್ಯ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ, ವಿಶಾಲ್ ಸಿ ಕೃಷ್ಣ ಸಿನಿಮಾಕ್ಕಿದೆ. ಚಿತ್ರವು ಫ್ಯಾಮಿಲಿ ಡ್ರಾಮಾ ಜೊತೆಗೆ ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಅದ್ವೈತ್ ಪ್ರಭಾಕರ್, ಆರ್. ರಾಮಚಂದ್ರ, ಸತ್ಯ ರಾಣಿ ಜಿ ಮತ್ತು ರಚನಾ ಬಿ. ಹೆಚ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಆಲ್ ಮೋಸ್ಟ್ ಶೂಟಿಂಗ್ ಮುಗಿಸಿರುವ 'ಅನಾವರಣ' ಚಿತ್ರಕ್ಕೆ ಸದ್ಯದಲ್ಲೇ ತೆರೆ ಕಾಣಲಿದೆ.
ಇದನ್ನೂ ಓದಿ: ಅರಸು ಕ್ರಿಯೇಷನ್ಸ್ ವತಿಯಿಂದ ಸುದೀಪ್ 50ನೇ ಜನ್ಮೋತ್ಸವಕ್ಕೆ ವಿಶೇಷ ಉಡುಗೊರೆ!