ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಸುನೀಲ್ ಪುರಾಣಿಕ್ರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಕಶ್ಯಪ್ ನೇಮಕವಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಅಶೋಕ್ ಕಶ್ಯಪ್ ನೇಮಿಸಿ ಆದೇಶಿಸಲಾಗಿದೆ.
ಅಶೋಕ್ ಕಶ್ಯಪ್ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದರು. ಅವರು 'ಲಿಫ್ಟ್ ಕೊಡ್ಲಾ', 'ಧ್ವಜ' ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಅಶೋಕ್ ಅವರು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ಪಡೆದ 'ತಲೆದಂಡ' ಸಿನಿಮಾಗೆ ಅಶೋಕ್ ಕಶ್ಯಪ್ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ.
ಇದನ್ನೂ ಓದಿ: ಅಥಿಯಾ ಶೆಟ್ಟಿ ಜನ್ಮದಿನ: ವಿಶೇಷವಾಗಿ ಶುಭಕೋರಿದ ಬಾಯ್ಫ್ರೆಂಡ್ ರಾಹುಲ್